RCB ಎದುರು ಟಾಸ್ ಗೆದ್ದ ಪಂಜಾಜ್ ಬೌಲಿಂಗ್ ಆಯ್ಕೆಆರ್‌ಸಿಬಿ ತಂಡ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿಉಭಯ ತಂಡಗಳಲ್ಲಿ ಮಹತ್ವದ ಬದಲಾವಣೆ
ಮೊಹಾಲಿ(ಏ.20): 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 27ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರ್ರನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ
ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ಐಎಸ್ ಬಿಂದ್ರಾ ಮೈದಾನ ಆತಿಥ್ಯ ವಹಿಸಿದೆ. ನಾಯಕ ಫಾಫ್ ಡು ಪ್ಲೆಸಿಸ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುತ್ತಿದ್ದು, ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ತಂಡದಲ್ಲೂ ಮಹತ್ವದ ಬದಲಾವಣೆಗಳಾಗಿದ್ದು, ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ನೇಥನ್ ಎಲ್ಲೀಸ್ ತಂಡ ಕೂಡಿಕೊಂಡಿದ್ದಾರೆ.
ಫಾಫ್ ಡು ಪ್ಲೆಸಿಸ್, ಫೀಲ್ಡಿಂಗ್ ಮಾಡಲು ಸಂಪೂರ್ಣ ಫಿಟ್ ಇಲ್ಲದ ಹಿನ್ನೆಲೆಯಲ್ಲಿ ಅವರು ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಲಿದ್ದಾರೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡವು ಇಂಪ್ಯಾಕ್ಟ್ ಆಟಗಾರನ ರೂಪದಲ್ಲಿ ಕನ್ನಡಿಗ ವೈಶಾಕ್ ವಿಜಯ್ ಕುಮಾರ್ ಅವರನ್ನು ಕಣಕ್ಕಿಳಿಸಲಿದೆ ಎಂದು ವಿರಾಟ್ ಕೊಹ್ಲಿ ಸುಳಿವು ನೀಡಿದ್ದಾರೆ. ವಿರಾಟ್ ಕೊಹ್ಲಿ, 2021ರ ಐಪಿಎಲ್ ಮುಕ್ತಾಯದ ಬಳಿಕ ಐಪಿಎಲ್ ನಾಯಕತ್ವದಿಂದ ಕೆಳಗಿಳಿದಿದ್ದರು. ಇದಾದ ಬಳಿಕ ಇದೇ ಮೊದಲ ಬಾರಿಗೆ ಆರ್‌ಸಿಬಿ ತಂಡದ ನಾಯಕರಾಗಿ ಮತ್ತೊಮ್ಮೆ ತಂಡವನ್ನು ಮುನ್ನಡೆಸುತ್ತಿದ್ದಾರೆ.
RCB ಈ ಸ್ಟಾರ್ IPL ಆಟಗಾರನನ್ನು ಕೈಬಿಟ್ಟಿದ್ದೇಕೆಂದು ನನಗಂತೂ ಅರ್ಥವಾಗಿಲ್ಲ: ಕೆವಿನ್ ಪೀಟರ್‌ಸನ್..!
ಇಂದಾದರೂ ಪಂಜಾಬ್ ಬಗ್ಗುಬಡಿಯುತ್ತಾ ಆರ್‌ಸಿಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2020ರಿಂದೀಚೆಗೆ ಪಂಜಾಬ್ ಎದುರು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. 2020ರಿಂದೀಚೆಗೆ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಆರು ಬಾರಿ ಮುಖಾಮುಖಿಯಾಗಿದ್ದು, ಆರು ಪಂದ್ಯಗಳಲ್ಲೂ ಆರ್‌ಸಿಬಿ ಎದುರು ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ನಗೆ ಬೀರಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಎದುರು ಆರ್‌ಸಿಬಿ ಗೆಲುವಿನ ನಗೆ ಬೀರುತ್ತಾ ಕಾದು ನೋಡಬೇಕಿದೆ.
ತಂಡಗಳು ಹೀಗಿವೆ ನೋಡಿ
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ಶಾಬಾಜ್ ಅಹಮ್ಮದ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಪಂಜಾಬ್: ಅಥರ್ವ್ ಟೈಡೆ, ಮ್ಯಾಥ್ಯೂ ಶಾರ್ಟ್, ಹಪ್ರೀರ್ತ್ ಬ್ರಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್(ನಾಯಕ), ಜಿತೇಶ್ ಶರ್ಮಾ, ಶಾರೂಖ್ ಖಾನ್, ರಾಹುಲ್ ಚಹಲ್, ಅಶ್‌ರ್‍ದೀಪ್ ಸಿಂಗ್, ನೇಥನ್ ಎಲ್ಲೀಸ್.
