ಗುಡುಗಿದ ಜಡ್ಡು-ಧೋನಿ; ಲಖನೌಗೆ ಸವಾಲಿನ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್‌

ಇಲ್ಲಿನ ಏಕಾನ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ಓವರ್‍ನ ಮೊದಲ ಎಸೆತದಲ್ಲೇ ರಚಿನ್ ರವೀಂದ್ರ ವಿಕೆಟ್ ಕಳೆದುಕೊಂಡಿತು. ರಚಿನ್ ರವೀಂದ್ರ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು.

IPL 2024 Chennai Super Kings Post 176 runs against Lucknow Super Giants kvn

ಲಖನೌ(ಏ.19_ ರವೀಂದ್ರ ಜಡೇಜಾ ಬಾರಿಸಿದ ಅಜೇಯ ಶತಕ ಹಾಗೂ ಅಜಿಂಕ್ಯ ರಹಾನೆ ಹಾಗೂ ಎಂ ಎಸ್ ಧೋನಿಯ ಚುರುಕಿನ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‍‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿದ್ದು, ಆತಿಥೇಯ ಲಖನೌ ಸೂಪರ್ ಜೈಂಟ್ಸ್‌ಗೆ ಸವಾಲಿನ ಗುರಿ ನೀಡಿದೆ.

ಇಲ್ಲಿನ ಏಕಾನ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ಓವರ್‍ನ ಮೊದಲ ಎಸೆತದಲ್ಲೇ ರಚಿನ್ ರವೀಂದ್ರ ವಿಕೆಟ್ ಕಳೆದುಕೊಂಡಿತು. ರಚಿನ್ ರವೀಂದ್ರ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ನಾಯಕ ಋತುರಾಜ್ ಗಾಯಕ್ವಾಡ್ 17 ರನ್ ಗಳಿಸಿ ಯಶ್ ಠಾಕೂರ್‍‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಅಜಿಂಕ್ಯ ರಹಾನೆ 24 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 36 ರನ್ ಗಳಿಸಿ ಕೃನಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಇನ್ನು ಶಿವಂ ದುಬೆ(3) ಹಾಗೂ ಸಮೀರ್ ರಿಜ್ವಿ(1) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

ಪಂಜಾಬ್ ಮೇಲೆ ಮೋಸ ಮಾಡಿ ಪಂದ್ಯ ಗೆಲ್ತಾ ಮುಂಬೈ ಇಂಡಿಯನ್ಸ್..? ಮೈದಾನದಲ್ಲೇ ಕರ್ರನ್ ಅಸಮಾಧಾನ

ಜಡ್ಡು-ಅಲಿ ಜತೆಯಾಟ: ಒಂದು ಹಂತದಲ್ಲಿ ಕೇವಲ 90 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಚೆನ್ನೈ ತಂಡಕ್ಕೆ 6ನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ಮೋಯಿನ್ ಅಲಿ ಸಮಯೋಚಿತ 51 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಡ್ಯಾರೆಲ್ ಮಿಚೆಲ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ಮೋಯಿನ್ ಅಲಿ 20 ಎಸೆತಗಳನ್ನು ಎದುರಿಸಿ 3 ಸಿಕ್ಸರ್ ಸಹಿತ 30 ರನ್ ಬಾರಿಸಿ ರವಿ ಬಿಷ್ಣೋಯಿಗೆ ವಿಕೆಟ್ ಒಪ್ಪಿಸಿದರು.

ಇನ್ನು ಒಂದು ತುದಿಯಲ್ಲಿ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 57 ರನ್ ಬಾರಿಸಿದರು. ಇನ್ನು ಕೊನೆಯಲ್ಲಿ ಕ್ರೀಸ್‌ಗಿಳಿದ ಮಾಜಿ ನಾಯಕ ಧೋನಿ ಕೇವಲ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 28 ರನ್ ಬಾರಿಸಿ ತಂಡದ ಮೊತ್ತವನ್ನು 175ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

Latest Videos
Follow Us:
Download App:
  • android
  • ios