ಇಲ್ಲಿನ ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ರಹಾನೆ 9 ರನ್ ಗಳಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.
ಚೆನ್ನೈ(ಏ.28): ಲಖನೌ ಸೂಪರ್ ಜೈಂಟ್ಸ್ ಎದುರು ಭರ್ಜರಿ ಶತಕ ಚಚ್ಚಿದ್ದ ಚೆನ್ನೈ ನಾಯಕ ಋತುರಾಜ್ ಗಾಯಕ್ವಾಡ್ ಇದೀಗ ಮತ್ತೊಮ್ಮೆ ಶತಕ ಸಿಡಿಸುವ ಅವಕಾಶವನ್ನು ಕೇವಲ ಎರಡು ರನ್ ಅಂತರದಲ್ಲಿ ಕೈಚೆಲ್ಲಿದ್ದಾರೆ. ನಾಯಕ ಗಾಯಕ್ವಾಡ್(98) ಹಾಗೂ ಡ್ಯಾರೆಲ್ ಮಿಚೆಲ್(52) ಆಕರ್ಷಕ ಅರ್ಧಶತಕಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 212 ರನ್ ಬಾರಿಸಿದ್ದು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಕಠಿಣ ಗುರಿ ನೀಡಿದೆ.
ಇಲ್ಲಿನ ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ರಹಾನೆ 9 ರನ್ ಗಳಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಇದಾದ ಬಳಿಕ ಎರಡನೇ ವಿಕೆಟ್‌ಗೆ ಋತುರಾಜ್ ಗಾಯಕ್ವಾಡ್ ಹಾಗೂ ಡ್ಯಾರೆಲ್ ಮಿಚೆಲ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 64 ಎಸೆತಗಳನ್ನು ಎದುರಿಸಿ 107 ರನ್‌ಗಳ ಜತೆಯಾಟವಾಡಿತು. ಮಿಚೆಲ್ ಕೇವಲ 32 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್ ಬಾರಿಸಿ ಜಯದೇವ್ ಉನಾದ್ಕತ್‌ಗೆ ವಿಕೆಟ್ ಒಪ್ಪಿಸಿದರು.
ಮೋದಿ ಸ್ಟೇಡಿಯಂನಲ್ಲಿ ಘರ್ಜಿಸಿದ ವಿಲ್ ಜ್ಯಾಕ್ಸ್; ಆರ್‌ಸಿಬಿಗೆ ಮತ್ತೊಂದು ಗೆಲುವು
ಇನ್ನು ಮತ್ತೊಂದು ತುದಿಯಲ್ಲಿ ನಾಯಕ ಗಾಯಕ್ವಾಡ್ ಸ್ಪೋಟಕ ಆಟ ಮುಂದುವರೆಸಿದರು. 4ನೇ ವಿಕೆಟ್‌ಗೆ ಗಾಯಕ್ವಾಡ್ ಹಾಗೂ ಶಿವಂ ದುಬೆ 35 ಎಸೆತಗಳಲ್ಲಿ 74 ರನ್‌ಗಳ ಜತೆಯಾಟವಾಡಿದರು. ಸನ್‌ರೈಸರ್ಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಗಾಯಕ್ವಾಡ್ ಕೇವಲ 54 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 98 ರನ್ ಬಾರಿಸಿ ಕೊನೆಯ ಓವರ್‌ನಲ್ಲಿ ನಟರಾಜನ್‌ಗೆ ವಿಕೆಟ್ ಒಪ್ಪಿಸಿದರು.
ಕೊನೆಯಲ್ಲಿ ಸ್ಪೋಟಕ ಬ್ಯಾಟರ್ ಶಿವಂ ದುಬೆ ಕೇವಲ 20 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 39 ರನ್ ಬಾರಿಸಿದರೆ, ಧೋನಿ ಅಜೇಯ 5 ರನ್ ಗಳಿಸಿದರು.
