ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಲೀಗ್ ಹಂತದ ಕೊನೆಯ ಐಪಿಎಲ್ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಫ್ರಾಂಚೈಸಿಯು, "ನಮ್ಮ ಬೆಂಬಲಿಗರು ಪಂದ್ಯ ಮುಗಿದ ಬಳಿಕ ಮೈದಾನದಲ್ಲೇ ಇರಿ. ಏನೋ ಒಂದು ವಿಶೇಷತೆ ನಿಮಗಾಗಿ ಕಾದಿದೆ" ಎಂದು ಪೋಸ್ಟ್ ಮಾಡಿದೆ.

ಚೆನ್ನೈ(ಮೇ.12): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯದಲ್ಲಿ ಗೆಲುವಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಡುತ್ತಿವೆ. ಹೀಗಿರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಾಡಿದ ಪೋಸ್ಟ್‌ಗಳು ಅಭಿಮಾನಿಗಳು ಕುತೂಹಲದಿಂದ ಕಾಯುವಂತೆ ಮಾಡಿವೆ

ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಲೀಗ್ ಹಂತದ ಕೊನೆಯ ಐಪಿಎಲ್ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಫ್ರಾಂಚೈಸಿಯು, "ನಮ್ಮ ಬೆಂಬಲಿಗರು ಪಂದ್ಯ ಮುಗಿದ ಬಳಿಕ ಮೈದಾನದಲ್ಲೇ ಇರಿ. ಏನೋ ಒಂದು ವಿಶೇಷತೆ ನಿಮಗಾಗಿ ಕಾದಿದೆ" ಎಂದು ಪೋಸ್ಟ್ ಮಾಡಿದೆ.

Scroll to load tweet…

ಇದನ್ನು ಗಮನಿಸಿದ ಸಿಎಸ್‌ಕೆ ಅಭಿಮಾನಿಗಳು, ಲೀಗ್ ಹಂತದ ಕೊನೆಯ ಪಂದ್ಯದ ಬಳಿಕ ಫ್ರಾಂಚೈಸಿಯು ಆಟಗಾರರಿಗೆ ಸನ್ಮಾನ ಮಾಡಬಹುದು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ 5 ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ನಾಯಕ ಮಹೇಂದ್ರ ಸಿಂಗ್ ಧೋನಿ, ತವರಿನಲ್ಲಿ ನಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಬಹುದು ಎಂದು ಊಹಿಸಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಯಾರೂ ಮಾಡದ ದಾಖಲೆ ನಿರ್ಮಿಸಲು ವಿರಾಟ್ ಕೊಹ್ಲಿ ರೆಡಿ..! ಬೆಂಗಳೂರಲ್ಲಿಂದು ಇತಿಹಾಸ ನಿರ್ಮಾಣ

ಹೀಗಾದಲ್ಲಿ ಒಂದು ವೇಳೆ ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇ ಆಫ್‌ಗೆ ಅರ್ಹತೆ ಪಡೆಯಲು ವಿಫಲವಾದರೆ, ಇದು ಧೋನಿ ಚೆನ್ನೈ ಮೈದಾನದಲ್ಲಿ ಆಡಿದ ಕೊನೆಯ ಪಂದ್ಯ ಎನಿಸಿಕೊಳ್ಳಲಿದೆ. ಈ ಬಾರಿಯ ಐಪಿಎಲ್ ಫೈನಲ್ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

ಒಂದು ವೇಳೆ ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಗೆಲುವು ಸಾಧಿಸಿದರೆ ಕೋಲ್ಕತಾ ನೈಟ್ ರೈಡರ್ಸ್ ಬಳಿಕ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ತಂಡವಾಗಿ ಅರ್ಹತೆ ಪಡೆಯಲಿದೆ. ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದರೆ, ಪ್ಲೇ ಆಫ್‌ಗೇರುವ ಅವಕಾಶ ಮತ್ತಷ್ಟು ಹೆಚ್ಚಾಗಲಿದೆ.