ಐಪಿಎಲ್ ಟೂರ್ನಿ ಲೀಗ್ ಹಂತದ ಪಂದ್ಯಗಳು ಕಠಿಣಗೊಳ್ಳುತ್ತಿದೆ. ಇದೀಗ ಪ್ಲೇ ಆಫ್ ಲೆಕ್ಕಾಚಾರದ ಮಹತ್ವದ ಪಂದ್ಯದಲ್ಲಿ ಗುಜರಾತ್ ಹಾಗೂ ಚೆನ್ನೈ ಎದುರಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.  

ಅಹಮ್ಮದಾಬಾದ್(ಮೇ.10) ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲು ತಂಡಗಳ ಹೋರಾಟ ತೀವ್ರಗೊಳ್ಳುತ್ತಿದೆ. ಇತ್ತ ಆರ್‌ಸಿಬಿ ಕೂಡ ಪ್ಲೇ ಆಫ್ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಇದರ ನಡುವೆ ಗುಜರಾತ್ ಟೈಟಾನ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ. ಚೆನ್ನೈ ಸೂಪರ್ ಕಿಂಗ್ಸ್‌ಗೆ ಪ್ಲೇ ಆಫ್ ಹಾದಿ ಸುಗಮಗೊಳಿಸಲು ಗೆಲ್ಲಲೇಬೇಕಾದ ಪಂದ್ಯ. ಭಾರಿ ಪ್ಲೇ ಆಫ್ ಲೆಕ್ಕಾಚಾರದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಗ್ಲೀಸನ್ ಬದಲು ರಾಚಿನ್ ರವೀಂದ್ರ ತಂಡ ಸೇರಿಕೊಂಡಿದ್ದಾರೆ. ಇತ್ತ ಗುಜರಾತ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಜುಶುವಾ ಲಿಟಲ್ ಬದಲು ಕಾರ್ತಿಕ್ ತ್ಯಾಗಿ ತಂಡ ಸೇರಿಕೊಂಡಿದ್ದಾರೆ. 

ಸಿಎಸ್‌ಕೆ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್(ನಾಯಕ), ರಾಚಿನ್ ರವೀಂದ್ರ, ಡರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಆಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ಪಾಂಡೆ, ಸಿಮ್ರಜಿತ್ ಸಿಂಗ್

RCB ಪ್ಲೇ ಆಫ್ ಮಾತ್ರವಲ್ಲ 3ನೇ ಸ್ಥಾನಕ್ಕೂ ಲಗ್ಗೆಯಿಡಬಹುದು..! ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಡೀಟೈಲ್ಸ್

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ಶುಭಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ಶಾರುಖ್ ಖಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂವ್ ವೇಡ್, ರಾಹುಲ್ ತಿವಾಟಿಯಾ, ರಶೀದ್ ಖಾನ್, ನೂರ್ ಅಹಮ್ಮದ್, ಉಮೇಶ್ ಯಾದವ್, ಮೊಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ 

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಗೆಲುವಿನ ಮೂಲಕ 7ನೇ ಸ್ಥಾನಕ್ಕೇರಿದೆ. ಆದರೆ ಆರಂಭದಲ್ಲಿ ಅಬ್ಬರಿಸಿ ಬಳಿಕ ಮಂಕಾದ ಗುಜರಾತ್ ಟೈಟಾನ್ಸ್ ಇದೀಗ ಕೊನೆಯ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ಗೆ ಗೆಲುವು ಅನಿವಾರ್ಯವಾಗಿದೆ. ಗೆದ್ದರೆ ಪ್ಲೇ ಆಫ್ ರೇಸ್ ಜೀವಂತವಾಗಲಿದೆ. ಸೋತರೆ ಪ್ಲೇ ಆಫ್ ಹೋರಾಟದಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಗೆಲ್ಲಲೇಬೇಕಿದೆ.

ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೂ ಪ್ಲೇ ಆಫ್ ಸ್ಥಾನ ಖಚಿತಗೊಂಡಿಲ್ಲ. ಪ್ಲೇ ಆಫ್ ಹಾದಿ ಸುಗಮಗೊಳಿಸಲು ಸಿಎಸ್‌ಕೆ ಇಂದಿನ ಪಂದ್ಯ ಗೆಲ್ಲಲೇಬೇಕು. 11 ಪಂದ್ಯಗಳಿಂದ 12 ಅಂಕ ಸಂಪಾದಿಸಿರುವ ಚೆನ್ನೈ ಹೋರಾಟ ತೀವ್ರಗೊಳಿಸಲಿದೆ. 

4 ಐಪಿಎಲ್‌ ಆವೃತ್ತಿಗಳಲ್ಲಿ 600+ ರನ್‌: ಕಿಂಗ್‌ ಕೊಹ್ಲಿ ಅಪರೂಪದ ದಾಖಲೆ..!

ಅಂಕಪಟ್ಟಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ 16 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್ ಕೂಡ 16 ಅಂಕ ಸಂಪಾದಿಸಿದೆ.ಮೂರನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ 14 ಅಂಕ ಪಡೆದುಕೊಂಡಿದೆ.