ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ.

ಅಹಮದಾಬಾದ್(ಮೇ.22): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಶಿಮ್ರೊನ್ ಹೆಟ್ಮೇಯರ್ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Scroll to load tweet…

Breaking: ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಕೊಹ್ಲಿ ಭದ್ರತೆಯಲ್ಲಿ ಮಹಾ ಯಡವಟ್ಟು, ಪ್ರಾಕ್ಟೀಸ್ ಕ್ಯಾನ್ಸಲ್ ಮಾಡಿದ RCB...!

ಟೂರ್ನಿಯ ಆರಂಭಿಕ 8 ಪಂದ್ಯಗಳ ಪೈಕಿ 7ರಲ್ಲಿ ಸೋತಿದ್ದ ಆರ್‌ಸಿಬಿ ಪ್ಲೇ-ಆಫ್‌ ಪ್ರವೇಶಿಸಿದ್ದೇ ಆಶ್ಚರ್ಯ. ಅತ್ತ ರಾಜಸ್ಥಾನ ಮೊದಲಾರ್ಧದಲ್ಲಿ ಅಬ್ಬರಿಸಿದ್ದರೂ, ಸದ್ಯ ಮಂಕಾಗಿದೆ. ಲೀಗ್‌ ಹಂತದ ಕೊನೆ ಪಂದ್ಯ ಮಳೆಗಾಹುತಿಯಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರೆಡಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಇದೀಗ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿವೆ. ಇಂದು ಗೆಲ್ಲುವ ತಂಡವು ಮೇ 24ರಂದು ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಗಿಟ್ಟಿಸಿಕೊಳ್ಳಲಿದೆ. ಇನ್ನೊಂದೆಡೆ ಸೋತ ತಂಡವು ಈ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬೀಳಲಿದೆ. ಇಂದು ಗೆಲುವು ಸಾಧಿಸುವ ತಂಡವು ಮೇ 24ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ:

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ರಜತ್‌ ಪಾಟೀದಾರ್, ಕ್ಯಾಮರೋನ್ ಗ್ರೀನ್‌, ಗ್ಲೆನ್ ಮ್ಯಾಕ್ಸ್‌ವೆಲ್‌, ದಿನೇಶ್‌ ಕಾರ್ತಿಕ್, ಮಹಿಪಾಲ್ ಲೊಮ್ರೊರ್‌, ಕರ್ಣ್‌ ಶರ್ಮಾ, ಲಾಕಿ ಫರ್ಗ್ಯೂಸನ್‌, ಮೊಹಮ್ಮದ್ ಸಿರಾಜ್‌, ಯಶ್‌ ದಯಾಳ್‌.

ರಾಜಸ್ಥಾನ: ಯಶಸ್ವಿ ಜೈಸ್ವಾಲ್‌, ಕೊಹ್ಲೆರ್‌, ಸಂಜು ಸ್ಯಾಮ್ಸನ್(ನಾಯಕ), ರಿಯಾನ್‌ ಪರಾಗ್, ಧೃವ್ ಜುರೆಲ್‌, ರೋವ್ಮನ್ ಪೊವೆಲ್‌, ರವಿಚಂದ್ರನ್ ಅಶ್ವಿನ್‌, ಟ್ರೆಂಟ್ ಬೌಲ್ಟ್‌, ಸಂದೀಪ್‌ ಶರ್ಮಾ, ಆವೇಶ್‌ ಖಾನ್, ಯುಜುವೇಂದ್ರ ಚಹಲ್

ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ