ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್‌ ಟೂರ್ನಿಯುದಕ್ಕೂ ಪ್ರಾಬಲ್ಯ ಸಾಧಿಸಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದ ತಂಡ. ಕ್ವಾಲಿಫೈಯರ್‌-1ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧವೇ ಗೆದ್ದು ನೇರವಾಗಿ ಫೈನಲ್‌ಗೇರಿತ್ತು. 

ಚೆನ್ನೈ: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಕೆಕೆಆರ್ ಹಾಗೂ ಸನ್‌ರೈಸರ್ಸ್ ನಡುವಿನ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈಗಾಗಲೇ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಗೆದ್ದು ಬೀಗಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮತ್ತೊಂದು ಗೆಲುವು ಸಾಧಿಸಿ ಟ್ರೋಫಿಗೆ ಮುತ್ತಿಕ್ಕುವ ವಿಶ್ವಾಸದಲ್ಲಿದೆ.

Scroll to load tweet…

ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್‌ ಟೂರ್ನಿಯುದಕ್ಕೂ ಪ್ರಾಬಲ್ಯ ಸಾಧಿಸಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದ ತಂಡ. ಕ್ವಾಲಿಫೈಯರ್‌-1ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧವೇ ಗೆದ್ದು ನೇರವಾಗಿ ಫೈನಲ್‌ಗೇರಿತ್ತು. 

ಟೀಂ ಇಂಡಿಯಾ ಕೋಚ್ ಆಗಲು ರೆಡಿ, ಆದ್ರೆ ಒಂದು ಕಂಡೀಷನ್ ಎಂದ ಗೌತಮ್ ಗಂಭೀರ್..!

ಇನ್ನು ಮತ್ತೊಂದೆಡೆ ತನ್ನ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕವೇ ಎದುರಾಳಿಗಳ ನಿದ್ದೆಗೆಡಿಸಿದ್ದ ಸನ್‌ರೈಸರ್ಸ್‌ ಹೈದರಾಬಾದ್, ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿತ್ತು. ಕೆಕೆಆರ್‌ ವಿರುದ್ಧ ಸೋತರೂ 2ನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನವನ್ನು ಮಣಿಸಿ ಪ್ರಶಸ್ತಿ ಸುತ್ತಿಗೇರಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ:

ಕೋಲ್ಕತಾ: ಸುನಿಲ್ ನರೈನ್‌, ರೆಹಮನುಲ್ಲಾ ಗುರ್ಬಾಜ್‌, ವೆಂಟಕೇಶ್‌ ಅಯ್ಯರ್, ಶ್ರೇಯಸ್‌ ಅಯ್ಯರ್(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್‌, ರಮನ್‌ದೀಪ್‌ ಸಿಂಗ್, ಮಿಚೆಲ್ ಸ್ಟಾರ್ಕ್‌, ವೈಭವ್‌ ಅರೋರಾ, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ.

ಹೈದ್ರಾಬಾದ್‌: ಅಭಿಷೇಕ್‌ ಶರ್ಮಾ, ಟ್ರ್ಯಾವಿಸ್ ಹೆಡ್‌, ರಾಹುಲ್ ತ್ರಿಪಾಠಿ, ನಿತೀಶ್‌ ರೆಡ್ಡಿ, ಹೆನ್ರಿಚ್ ಕ್ಲಾಸೆನ್‌, ಏಯ್ಡನ್ ಮಾರ್ಕ್‌ರಮ್‌, ಶಹಬಾಜ್ ಅಹಮದ್, ಪ್ಯಾಟ್ ಕಮಿನ್ಸ್‌(ನಾಯಕ), ಭುವನೇಶ್ವರ್‌ ಕುಮಾರ್, ಜಯದೇವ್ ಉನಾದ್ಕಟ್‌, ಟಿ ನಟರಾಜನ್‌.

ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌, ಜಿಯೋ ಸಿನಿಮಾ