Asianet Suvarna News Asianet Suvarna News

ಲಖನೌ ತೊರೆದ ಗಂಭೀರ್, ಕೈಬೀಸಿ ಕರೆದ ಕೆಕೆಆರ್: ಚಾಂಪಿಯನ್‌ ನಾಯಕ ಈಗ ಕೋಲ್ಕತಾ ಮೆಂಟರ್

ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಿಇಒ ವೆಂಕಿ ಮೈಸೂರ್ ಖಚಿತಪಡಿಸಿದ್ದಾರೆ. ಈ ನಿರ್ಧಾವವನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರುಕ್ ಖಾನ್ ಅವರು ಮುಕ್ತ ಹೃದಯದಿಂದ ಸ್ವಾಗತಿಸಿದ್ದಾರೆ. ಇನ್ನು ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

IPL 2024 Gautam Gambhir Quits Lucknow Super Giants jonins KKR kvn
Author
First Published Nov 22, 2023, 2:45 PM IST

ಕೋಲ್ಕತಾ(ನ.22): ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಬಿಜೆಪಿ ಸಂಸದ ಗೌತಮ್ ಗಂಭೀರ್, ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಮೆಂಟರ್‌ ಆಗಿ ನೇಮಕವಾಗಿದ್ದಾರೆ. ಕಳೆದೆರಡು ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್‌ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್, ಇದೀಗ ಮರಳಿ ಗೂಡು ಸೇರಿದ್ದಾರೆ. ನಾಯಕನಾಗಿ ಎರಡು ಬಾರಿ ಕೆಕೆಆರ್ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ಗಂಭೀರ್, ಇದೀಗ ಮತ್ತೊಮ್ಮೆ ಕೆಕೆಆರ್ ಎರಡನೇ ಇನಿಂಗ್ಸ್ ಆರಂಭಿಸಿದ್ದಾರೆ.

ಈ ವಿಚಾರವನ್ನು ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಿಇಒ ವೆಂಕಿ ಮೈಸೂರ್ ಖಚಿತಪಡಿಸಿದ್ದಾರೆ. ಈ ನಿರ್ಧಾವವನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರುಕ್ ಖಾನ್ ಅವರು ಮುಕ್ತ ಹೃದಯದಿಂದ ಸ್ವಾಗತಿಸಿದ್ದಾರೆ. ಇನ್ನು ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

'ವಿಶ್ವಕಪ್ ಪ್ರಶಸ್ತಿ ಪ್ರದಾನ ಅತ್ಯಂತ ಅಯೋಗ್ಯ ಟ್ರೋಫಿ ಪ್ರಸ್ತುತಿ': ಕಮಿನ್ಸ್ ಪಾಡು ಕೇಳೋರಿಲ್ಲ

ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕಳೆದೆರಡು ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಅದ್ಭುತ ಪ್ರದರ್ಶನ ತೋರಿತ್ತಾದರೂ ಕಪ್ ಗೆಲ್ಲಲು ಯಶಸ್ವಿಯಾಗಿಲ್ಲ. 2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ತಂಡವು ಫೈನಲ್‌ಗೇರಿದ ಸಾಧನೆ ಮಾಡಿತ್ತು. ಇನ್ನು 2023ರ ಐಪಿಎಲ್ ಟೂರ್ನಿಯಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡದ ಮ್ಯಾನೇಜರ್ ಕನ್ನಡತಿ..!

ಕೋಲ್ಕತಾ ನೈಟ್ ರೈಡರ್ಸ್‌ ತಂಡವು 2012 ಹಾಗೂ 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಕೆಕೆಆರ್ ತಂಡದಲ್ಲಿ ಹಲವಾರು ಪ್ರತಿಭಾನ್ವಿತ ಆಟಗಾರರಿದ್ದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಕೆಕೆಆರ್ ಫ್ರಾಂಚೈಸಿಯು 2024ರ ಐಪಿಎಲ್ ಟೂರ್ನಿಗೂ ಮುನ್ನ ಚಾಂಪಿಯನ್ ಆಟಗಾರನನ್ನು ಕರೆತಂದಿದೆ. ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡವು ಮತ್ತೊಮ್ಮೆ ಚಾಂಪಿಯನ್ ಆಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

Follow Us:
Download App:
  • android
  • ios