ಹೋಳಿ ಸಂಭ್ರಮಾಚರಣೆಯಲ್ಲಿ ರೋಹಿತ್ ಪತ್ನಿ ರಿತಿಕಾ ಹಗ್ ಮಾಡಿದ ಹಾರ್ದಿಕ್ ಪಾಂಡ್ಯ..! ಹಿಟ್‌ಮ್ಯಾನ್ ಫ್ಯಾನ್ಸ್ ಗರಂ
ಇನ್ನು 5 ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಇದೀಗ ಹಾರ್ದಿಕ್ ಪಾಂಡ್ಯಗೆ ಫ್ರಾಂಚೈಸಿ ಮುಂಬೈ ನಾಯಕ ಪಟ್ಟ ಕಟ್ಟಿದೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿದೆ ಎಂದು ಮಾಧ್ಯಮಗಳಲ್ಲಿ ಪದೇ ಪದೇ ವರದಿಯಾಗುತ್ತಲೇ ಇದೆ.
ಅಹದಮಾದಾಬಾದ್(ಮಾ.27): 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಂದಿನಂತೆ ತಾನಾಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ. 2013ರಿಂದಲೂ ಈ ಸಂಪ್ರದಾಯ ಮುಂದುವರೆದುಕೊಂಡು ಬಂದಿದೆ. ಅದೇ ರೀತಿ 2024ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ಎದುರಿನ ಪಂದ್ಯದಲ್ಲಿ ರೋಚಕ ಸೋಲು ಅನುಭವಿಸಿದೆ.
ಇನ್ನು 5 ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಇದೀಗ ಹಾರ್ದಿಕ್ ಪಾಂಡ್ಯಗೆ ಫ್ರಾಂಚೈಸಿ ಮುಂಬೈ ನಾಯಕ ಪಟ್ಟ ಕಟ್ಟಿದೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿದೆ ಎಂದು ಮಾಧ್ಯಮಗಳಲ್ಲಿ ಪದೇ ಪದೇ ವರದಿಯಾಗುತ್ತಲೇ ಇದೆ. ಇದೆಲ್ಲದರ ನಡುವೆ ಸಾಮಾನ್ಯವಾಗಿ 30 ಯಾರ್ಡ್ಸ್ ಸರ್ಕಲ್‌ನಲ್ಲಿ ಫೀಲ್ಡಿಂಗ್ ಮಾಡುವ ರೋಹಿತ್ ಶರ್ಮಾ ಅವರನ್ನು ಪಾಂಡ್ಯ, ಬೌಂಡರಿ ಗೆರೆಯ ಬಳಿ ಫೀಲ್ಡಿಂಗ್ ಮಾಡುವಂತೆ ಕಳಿಸಿದ್ದು, ಹಿಟ್‌ಮ್ಯಾನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ಶಿವಂ ದುಬೆ-ಅಂಜುಂ ಖಾನ್ ಮದುವೆಗೆ ಸ್ವತಃ ಪೋಷಕರೇ ಒಪ್ಪಿರಲಿಲ್ಲ..! ಇಲ್ಲಿದೆ ಇಂಟ್ರೆಸ್ಟಿಂಗ್ ಲವ್ ಸ್ಟೋರಿ
ಇನ್ನು ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ನಡೆಯುತ್ತಿರುವಾಗಲೇ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಬಣದ ಅಭಿಮಾನಿಗಳು ಸ್ಟೇಡಿಯಂನಲ್ಲೇ ಬಡಿದಾಡಿಕೊಂಡಿದ್ದರು. ಇದೆಲ್ಲದರ ನಡುವೆ ಗಾಯದ ಮೇಲೆ ಉಪ್ಪು ಸುರಿದಂತೆ ಇದೀಗ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ, ಹೋಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಗೆ ಹಗ್ ಮಾಡಿ ಹೋಳಿ ಶುಭಾಶಯ ಕೋರಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಲಾರಂಭಿಸಿದೆ. ಹಾರ್ದಿಕ್ ಪಾಂಡ್ಯನನ್ನು ಅಪ್ಪಿಕೊಳ್ಳುವುದು ರಿತಿಕಾಗೆ ಖಂಡಿತಾ ಅಸಹನೀಯ ಅನಿಸಿರಬೇಕು! ಅವನೇಕೆ ಅವರಿಂದ ದೂರವಿರಬಾರದು ಎಂದು ನೆಟ್ಟಿಗರೊಬ್ಬರು ಆಕ್ರೋಶ ಹೊರಹಾಕಿದ್ದಾರೆ.
ಹೀಗಿದೆ ನೋಡಿ ಆ ವಿಡಿಯೋ:
Ritika must surely have felt awkward hugging Hardik Pandya! Why can't he just stay away from them mahn....😭 pic.twitter.com/nBxXtGg2bb
— S࿐ (@pullshotx45) March 25, 2024
ಇನ್ನು ಗುಜರಾತ್ ಟೈಟಾನ್ಸ್ ಎದುರು 6 ರನ್ ರೋಚಕ ಸೋಲು ಅನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡವು ಇಂದು, ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡಾ ಮೊದಲ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ರೋಚಕ ಸೋಲು ಅನುಭವಿಸಿತ್ತು. ಇದೀಗ ಉಭಯ ತಂಡಗಳು ಟೂರ್ನಿಯಲ್ಲಿ ಮೊದಲ ಗೆಲುವಿಗಾಗಿ ಕಾದಾಡಲು ಸಜ್ಜಾಗಿವೆ.
ಸಂಭವನೀಯ ಆಟಗಾರರ ಪಟ್ಟಿ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ನಮನ್ ಧೀರ್, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪೀಯೂಸ್ ಚಾವ್ಲಾ, ಗೆರಾಲ್ಡ್ ಕೋಟ್ಜೀ, ಜಸ್ಪ್ರೀತ್ ಬುಮ್ರಾ, ಮಾರ್ಕ್ ವುಡ್.
ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್‌ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಯ್ಡನ್ ಮಾರ್ಕ್‌ರಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಾಬಾಜ್ ಅಹಮದ್, ಮಾರ್ಕೋ ಯಾನ್ಸನ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಸಿನಿಮಾ.