ಶನಿವಾರ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನಿಷ್ಠ 18 ರನ್ ಅಂತರದ ಗೆಲುವಿನ ಅಗತ್ಯವಿತ್ತು. ಆದರೆ ಆರ್‌ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ 27 ರನ್ ಅಂತರದ ಗೆಲುವು ದಾಖಲಿಸಿತು.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಸಾಧ್ಯ ಎನ್ನುವುದನ್ನು ಸಾಧ್ಯವನ್ನಾಗಿಸುವ ಮೂಲಕ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. 2024ರ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ 8 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯ ಗೆದ್ದ ಫಾಫ್ ಡು ಪ್ಲೆಸಿಸ್ ಪಡೆ, ಇದಾದ ಬಳಿಕ ಫಿನಿಕ್ಸ್‌ನಂತೆ ಎದ್ದು ಬಂದು ಸತತ 6 ಪಂದ್ಯ ಗೆದ್ದು, ಇದೀಗ 4ನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಶನಿವಾರ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನಿಷ್ಠ 18 ರನ್ ಅಂತರದ ಗೆಲುವಿನ ಅಗತ್ಯವಿತ್ತು. ಆದರೆ ಆರ್‌ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ 27 ರನ್ ಅಂತರದ ಗೆಲುವು ದಾಖಲಿಸಿತು. ಇನ್ನು ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿ ತಂಡದ ಮೊದಲ ಮಾಲೀಕ ವಿಜಯ್ ಮಲ್ಯ ಸೇರಿದಂತೆ ಹಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಹಾರೈಸಿ ಗಮನ ಸೆಳೆದಿದ್ದಾರೆ.

ಚೆನ್ನೈ ಎದುರು ಆರ್‌ಸಿಬಿ ಗೆಲುವಿನ ಬೆನ್ನಲ್ಲೇ ಆನಂದ ಭಾಷ್ಪ ಸುರಿಸಿದ ವಿರುಷ್ಕಾ ಜೋಡಿ..! ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿನ್ನಸ್ವಾಮಿ ಮೈದಾನಕ್ಕೆ ತೆರಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಪಂದ್ಯವನ್ನು ಕಣ್ತುಂಬಿಕೊಂಡರು. "ಸತತ 6ನೇ ಗೆಲುವಿನೊಂದಿಗೆ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. #NammaRCB ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ. ಇದು ಆರ್.ಸಿ.ಬಿ ಯ ಹೊಸ ಅಧ್ಯಾಯ." #EeSalaCupNamde ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ

Scroll to load tweet…

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಮಾಲೀಕ ವಿಜಯ್ ಮಲ್ಯ ಕೂಡಾ ಆರ್‌ಸಿಬಿ ಗೆಲುವನ್ನು ಸೋಷಿಯಲ್ ಮೀಡಿಯಾ ಮೂಲಕ ಸಂಭ್ರಮಿಸಿ ಶುಭಕೋರಿದ್ದಾರೆ. "ಐಪಿಎಲ್ ಪ್ಲೇ ಆಫ್‌ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನಿರಾಶಾದಾಯಕ ಆರಂಭದ ಬಳಿಕ ತಂಡವು ಅದ್ಭುತ ಕೌಶಲ್ಯ ಹಾಗೂ ಬದ್ಧತೆಯನ್ನು ತೋರಿದೆ. ಏಳು ಬೀಳಿನ ನಡುವೆ ಪಯಣ ಟ್ರೋಫಿಯತ್ತ ಸಾಗಲಿ" ಎಂದು ಮಲ್ಯ ಶುಭ ಹಾರೈಸಿದ್ದಾರೆ.

Scroll to load tweet…

ಸ್ಯಾಂಡಲ್‌ವುಡ್ ಸೂಪರ್‌ ಸ್ಟಾರ್ ಕಿಚ್ಚ ಸುದೀಪ್ ಕೂಡಾ ಟ್ವೀಟ್ ಮಾಡಿ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ. ಅಭಿನಂದನೆಗಳು ಆರ್‌ಸಿಬಿ ತಂಡಕ್ಕೆ. ಎಂತಹ ಮ್ಯಾಚ್. ಚೆನ್ನೈಗೆ ಬ್ಯಾಡ್‌ ಲಕ್. ಚೆನ್ನಾಗಿ ಆಡಿದ್ರಿ ಎಂದು ಸುದೀಪ ಶುಭ ಕೋರಿದ್ದಾರೆ.

Scroll to load tweet…