IPL 2024 Qualifier 1: ಕೋಲ್ಕತಾ vs ಸನ್‌ರೈಸರ್ಸ್ ಪಂದ್ಯ ಮಳೆಯಿಂದ ರದ್ದಾದ್ರೆ ಯಾರಿಗೆ ಲಾಭ? ರಿಸರ್ವ್ ಡೇ ಇದೆಯಾ?
ಅಹಮದಾಬಾದ್‌ನಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವ್ಯತ್ಯಾಸಗಳಾಗುತ್ತಿರುವುದು ಕ್ರಿಕೆಟ್ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಯಾಕೆಂದರೆ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಗುಜರಾತ್ ಹಾಗೂ ಕೋಲ್ಕತಾ ನಡುವಿನ ಕೊನೆಯ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿತ್ತು.
ಅಹಮದಾಬಾದ್: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಟೂರ್ನಿಯಲ್ಲಿಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಫೈನಲ್ ಟಿಕೆಟ್‌ಗಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ.
ಅಹಮದಾಬಾದ್‌ನಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವ್ಯತ್ಯಾಸಗಳಾಗುತ್ತಿರುವುದು ಕ್ರಿಕೆಟ್ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಯಾಕೆಂದರೆ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಗುಜರಾತ್ ಹಾಗೂ ಕೋಲ್ಕತಾ ನಡುವಿನ ಕೊನೆಯ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿತ್ತು. ಪರಿಣಾಮ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದರೆ, ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಮೊದಲ ತಂಡವಾಗಿ ಪ್ಲೇ ಆಫ್ ಮೊದಲ ಕ್ವಾಲಿಫೈಯರ್‌ಗೆ ತಮ್ಮ ಸ್ಥಾನ ಖಚಿತಪಡಿಸಿಕೊಂಡಿತು.
IPL 2024 ಆರ್‌ಸಿಬಿ vs ರಾಜಸ್ಥಾನ ಎಲಿಮಿನೇಟರ್‌ಗೆ ವೇದಿಕೆ ಫಿಕ್ಸ್..!
ಕಳೆದೆರಡು ಬಾರಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದಾಗಲೂ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2012 ಹಾಗೂ 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಇದೀಗ ಅಹಮದಾಬಾದ್ ನಗರದ ಹವಾಮಾನ ವರದಿಯ ಪ್ರಕಾರ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಿದೆ. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವ ತಂಡಕ್ಕೆ ಇಬ್ಬನಿ ಕೊಂಚ ತೊಡಕು ಉಂಟು ಮಾಡಬಹುದು ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಾಪಮಾನ 31 ರಿಂದ 37 ಡಿಗ್ರಿ ಸೆಲ್ಸಿಯೆಸ್‌ನಷ್ಟು ಇರಲಿದ್ದು, ಮತ್ತೊಂದು ಅತಿದೊಡ್ಡ ಸ್ಟೇಡಿಯಂನಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿದೆ.
RCB ಗೆ ಚೊಚ್ಚಲ IPL ಕಪ್ ಗೆಲ್ಲಿಸಲು ಪಣತೊಟ್ಟು ಮದುವೆಯನ್ನೇ ಮುಂದೂಡಿದ ರಜತ್ ಪಾಟೀದಾರ್..! ಸೆಲ್ಯೂಟ್
ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದ್ರೆ ಯಾರಿಗೆ ಲಾಭ? ಮೀಸಲು ದಿನ ಇದೆಯಾ?
ಮೇ 21ರಂದು ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಯಾವುದೇ ಮೀಸಲು ದಿನ ಇಲ್ಲ. ಹೀಗಾಗಿ ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೇ, ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ತಂಡ ಫೈನಲ್‌ಗೆ ಲಗ್ಗೆಯಿಡಲಿದೆ.
ಅಂದರೆ ಸದ್ಯ ಕೋಲ್ಕತಾ ನೈಟ್ ರೈಡರ್ಸ್ ತಂಡವು 14 ಪಂದ್ಯಗಳಿಂದ 20 ಅಂಕಗಳಿಸಿ ಮೊದಲ ಸ್ಥಾನದಲ್ಲಿದೆ. ಇನ್ನು ಸನ್‌ರೈಸರ್ಸ್ 14 ಪಂದ್ಯಗಳಿಂದ 17 ಅಂಕಗಳಿಸಿದೆ. ಹೀಗಾಗಿ ಒಂದು ವೇಳೆ ಪಂದ್ಯ ರದ್ದಾದರೇ, ಕೆಕೆಆರ್ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯವು ಮೇ 24ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಿಗದಿಯಾಗಿದೆ.