Asianet Suvarna News Asianet Suvarna News
breaking news image

ಕುಸಿದ ಕೆಕೆಆರ್‌ಗೆ ವೆಂಕಿ-ಪಾಂಡೆ ಆಸರೆ; ಮುಂಬೈಗೆ ಸ್ಪರ್ಧಾತ್ಮಕ ಗುರಿ

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಮುಂಬೈ ಬೌಲರ್‌ಗಳು ಯಶಸ್ವಿಯಾದರು.

IPL 2024 Kolkata Knight Riders All Out For 169 against Mumbai Indians kvn
Author
First Published May 3, 2024, 9:28 PM IST

ಮುಂಬೈ(ಮೇ.03): ಮುಂಬೈ ಇಂಡಿಯನ್ಸ್ ಬೌಲರ್‌ಗಳ ಮಾರಕ ದಾಳಿಯ ಹೊರತಾಗಿಯೂ ವೆಂಕಟೇಶ್ ಅಯ್ಯರ್ ಅವರ ಆಕರ್ಷಕ ಅರ್ಧಶತಕ ಹಾಗೂ ಕನ್ನಡಿಗ ಮನೀಶ್ ಪಾಂಡೆ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ವೆಂಕಟೇಶ್ ಅಯ್ಯರ್ 70 ರನ್ ಬಾರಿಸಿದರೆ, ಮನೀಶ್ ಪಾಂಡೆ ಅಮೂಲ್ಯ 42 ರನ್‌ಗಳ ನೆರವಿನಿಂದ ಕೆಕೆಆರ್ ತಂಡವು 169 ರನ್ ಕಲೆಹಾಕಿದ್ದು, ಮುಂಬೈಗೆ ಸ್ಪರ್ಧಾತ್ಮಕ ಗುರಿ ನೀಡಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಮುಂಬೈ ಬೌಲರ್‌ಗಳು ಯಶಸ್ವಿಯಾದರು. ಕೇವಲ 6.1 ಓವರ್‌ಗಳಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು 57 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಫಿಲ್ ಸಾಲ್ಟ್ 5 ರನ್ ಗಳಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಸುನಿಲ್ ನರೈನ್ 8 ರನ್ ಗಳಿಸಿ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ರಘುವಂಶಿ 13 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 6 ರನ್ ಗಳಿಸಿ ತುಷಾರಗೆ ಮೂರನೇ ಬಲಿಯಾದರು. ಇನ್ನು ರಿಂಕು ಸಿಂಗ್ 9 ರನ್ ಗಳಿಸಿ ಪೀಯೂಸ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು.

IPL 2024 ಕೆಕೆಆರ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್, ತಂಡದಲ್ಲಿ ಯಾರಿಗೆ ಸ್ಥಾನ?

ವೆಂಕಿ-ಪಾಂಡೆ ಜತೆಯಾಟ: ಕೇವಲ 57 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಕೆಕೆಆರ್ ತಂಡಕ್ಕೆ ಆರನೇ ವಿಕೆಟ್‌ಗೆ ವೆಂಕಟೇಶ್ ಅಯ್ಯರ್ ಹಾಗೂ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ಮನೀಶ್ ಪಾಂಡೆ ಆಸರೆಯಾದರು. ಈ ಜೋಡಿ 6ನೇ ವಿಕೆಟ್‌ಗೆ 62 ಎಸೆತಗಳನ್ನು ಎದುರಿಸಿ ಅಮೂಲ್ಯ 83 ರನ್‌ಗಳ ಜತೆಯಾಟವಾಡಿತು. ಮನೀಶ್ ಪಾಂಡೆ 31 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 42 ರನ್ ಬಾರಿಸಿ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಇನ್ನು ವೆಂಕಟೇಶ್ ಅಯ್ಯರ್ 52 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ ಬಾರಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.

ಮುಂಬೈ ಇಂಡಿಯನ್ಸ್ ಪರ ನುವಾನ್ ತುಷಾರ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 3 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ ಎರಡು ಹಾಗೂ ಪೀಯೂಸ್ ಚಾವ್ಲಾ ಒಂದು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು.

Latest Videos
Follow Us:
Download App:
  • android
  • ios