IPL 2024 ಪ್ಲೇ ಆಫ್ ರೇಸ್‌ನಲ್ಲಿಂದು ಕೆಕೆಆರ್ vs ಲಖನೌ ಫೈಟ್
ಕೋಲ್ಕತಾ 10ರಲ್ಲಿ 7 ಪಂದ್ಯ ಗೆದ್ದಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದ್ದು, ಅಗ್ರಸ್ಥಾನಕ್ಕೇರಲಿದೆ. ಅಲ್ಲದೆ ಕಳೆದ ಮುಖಾಮುಖಿಯಲ್ಲಿ ಲಖನೌ ವನ್ನು ಮಣಿಸಿದ್ದ ಕೆಕೆಆರ್, ಮತ್ತೊಂದು ಜಯದ ಕಾತರದಲ್ಲಿದೆ.
ಲಖನೌ(ಮೇ.05): ಈ ಬಾರಿ ಐಪಿಎಲ್‌ನಲ್ಲಿ ಪ್ಲೇ-ಆಫ್ ಪ್ರವೇಶಿಸುವ ನೆಚ್ಚಿನ ತಂಡಗಳು ಎಂದೇ ಕರೆಸಿಕೊಳ್ಳುವ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಭಾನುವಾರ ಪರಸ್ಪರ ಸೆಣಸಾಡಲಿವೆ. ಎರಡೂ ತಂಡಗಳಿಗೆ ಪ್ಲೇ-ಆಫ್ ದೃಷ್ಟಿಯಿಂದ ಈ ಪಂದ್ಯ ಮಹತ್ವದ್ದು ಎನಿಸಿದೆ.
ಕೋಲ್ಕತಾ 10ರಲ್ಲಿ 7 ಪಂದ್ಯ ಗೆದ್ದಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದ್ದು, ಅಗ್ರಸ್ಥಾನಕ್ಕೇರಲಿದೆ. ಅಲ್ಲದೆ ಕಳೆದ ಮುಖಾಮುಖಿಯಲ್ಲಿ ಲಖನೌ ವನ್ನು ಮಣಿಸಿದ್ದ ಕೆಕೆಆರ್, ಮತ್ತೊಂದು ಜಯದ ಕಾತರದಲ್ಲಿದೆ.
IPL 2024 ಚೆನ್ನೈ vs ಪಂಜಾಬ್ ಕಿಂಗ್ಸ್: ಡು ಆರ್ ಡೈ ಕದನ ಗೆಲ್ಲೋರ್‍ಯಾರು?
ಅತ್ತ ಲಖನೌ ಸೂಪರ್ ಜೈಂಟ್ಸ್ ಆಡಿರುವ 10ರಲ್ಲಿ 6 ಪಂದ್ಯ ಗಳನ್ನು ಗೆದ್ದಿದೆ. ತಂಡ ಸದ್ಯ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಲೀಗ್ ಪಂದ್ಯಗಳು ಮುಕ್ತಾಯದ ಹಂತದಲ್ಲಿದ್ದು, ಈ ಪಂದ್ಯ ಗೆದ್ದು ಪ್ಲೇ-ಆಫ್‌ಗೆ ಹತ್ತಿರುವಾಗುವುದರ ಜೊತೆಗೆ ನೆಟ್ ರನ್ ರೇಟ್ ಉತ್ತಮ ಗೊಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.
ಸಂಭವನೀಯ ಆಟಗಾರರ ಪಟ್ಟಿ
ಕೋಲ್ಕತಾ ನೈಟ್ ರೈಡರ್ಸ್:
ಫಿಲ್ ಸಾಲ್ಟ್, ಸುನಿಲ್ ನರೈನ್, ಅಂಗಕೃಷ್ ರಘುವಂಶಿ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮನ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಲಖನೌ ಸೂಪರ್ ಜೈಂಟ್ಸ್:
ಕೆ ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್.
ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ