IPL 2024 ಡೆಲ್ಲಿ ಕ್ಯಾಪಿಟಲ್ಸ್ ಎದುರು ಟಾಸ್ ಗೆದ್ದ ಲಖನೌ ಬೌಲಿಂಗ್ ಆಯ್ಕೆ

ಡೆಲ್ಲಿ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಸನ್‌ರೈಸರ್ಸ್ ಎದುರು ಹೀನಾಯ ಸೋಲು ಅನುಭವಿಸಿದ್ದ ಲಖನೌ, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಇದೀಗ ತಂಡ ಕೂಡಿಕೊಂಡಿದ್ದಾರೆ.

IPL 2024 Lucknow Super Giants win the toss and Bowling first against Delhi Capitals kvn

ನವದೆಹಲಿ(ಮೇ.14): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 64ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಿಂದ ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ.

ಡೆಲ್ಲಿ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಸನ್‌ರೈಸರ್ಸ್ ಎದುರು ಹೀನಾಯ ಸೋಲು ಅನುಭವಿಸಿದ್ದ ಲಖನೌ, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಇದೀಗ ತಂಡ ಕೂಡಿಕೊಂಡಿದ್ದಾರೆ. ಡೆಲ್ಲಿ ಪರ ಪಂತ್ ಹಾಗೂ ಗುಲ್ಬದ್ದೀನ್ ತಂಡ ಕೂಡಿಕೊಂಡಿದ್ದು, ಡೇವಿಡ್ ವಾರ್ನರ್ ಹೊರಬಿದ್ದಿದ್ದಾರೆ.

IPL 2024 ಪ್ಲೇಆಫ್‌ ಸ್ಥಾನಕ್ಕಾಗಿ ಇಂದು ಲಖನೌ vs ಡೆಲ್ಲಿ ಸೆಣಸಾಟ

ಲಖನೌ ಸೂಪರ್ ಜೈಂಟ್ಸ್ ತಂಡವು 12ರಲ್ಲಿ 6 ಗೆದ್ದು 12 ಅಂಕ ಸಂಪಾದಿಸಿದೆ. ಉಳಿದಿರುವ 2 ಪಂದ್ಯ ಗೆದ್ದರೆ ನಾಕೌಟ್‌ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಒಂದು ವೇಳೆ 1 ಪಂದ್ಯ ಸೋತರೂ ಲಖನೌ ತಂಡಕ್ಕೆ ಹಿನ್ನಡೆಯಾಗಲಿದ್ದು, ಆಗ ಚೆನ್ನೈ ಹಾಗೂ ಆರ್‌ಸಿಬಿಯ ಪ್ಲೇ-ಆಫ್‌ ಹಾದಿ ಸುಗಮವಾಗಲಿದೆ. 

ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದುವರೆಗೂ 13 ಪಂದ್ಯಗಳನ್ನಾಡಿದ್ದು 6 ಗೆಲುವು ಹಾಗೂ 7 ಸೋಲು ಸಹಿತ 12 ಅಂಕ ಸಂಪಾದಿಸಿದೆ. ತಂಡಕ್ಕಿದು ಕೊನೆ ಪಂದ್ಯ. ದೊಡ್ಡ ಅಂತರದಲ್ಲಿ ಗೆದ್ದು, ಚೆನ್ನೈ, ಹೈದರಾಬಾದ್‌ ಹಾಗೂ ಆರ್‌ಸಿಬಿ ತಂಡಗಳನ್ನು ನೆಟ್‌ ರನ್‌ರೇಟ್‌ನಲ್ಲಿ ಹಿಂದಿಕ್ಕಲು ಸಾಧ್ಯವಾದರೆ ಮಾತ್ರ ಪ್ಲೇ-ಆಫ್‌ರೇಸ್‌ನಲ್ಲಿ ಜೀವಂತವಾಗಿ ಉಳಿಯಲಿದೆ. ಸೋತರೆ ಅಧಿಕೃತವಾಗಿ ಹೊರಬೀಳಲಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ಡೆಲ್ಲಿ: ಜೇಕ್ ಫ್ರೇಸರ್‌, ಅಭಿಷೇಕ್ ಪೊರೆಲ್‌, ಶಾಯ್ ಹೋಪ್‌, ರಿಷಭ್‌ ಪಂತ್(ನಾಯಕ), ಟ್ರಿಸ್ಟಿನ್ ಸ್ಟಬ್ಸ್‌, ಅಕ್ಷರ್‌ ಪಟೇಲ್, ಗುಲ್ಬದ್ದೀನ್ ನೈಬ್, ಕುಲ್ದೀಪ್‌ ಯಾದವ್, ರಾಸಿಕ್‌ ಸಲಾಂ, ಮುಕೇಶ್‌ ಕುಮಾರ್, ಇಶಾಂತ್‌ ಶರ್ಮಾ, ಖಲೀಲ್‌ ಅಹಮದ್.

ಲಖನೌ: ಕ್ವಿಂಟನ್ ಡಿ ಕಾಕ್‌, ಕೆ ಎಲ್ ರಾಹುಲ್‌(ನಾಯಕ), ಮಾರ್ಕಸ್‌ ಸ್ಟೋಯ್ನಿಸ್‌, ನಿಕೋಲಸ್ ಪೂರನ್‌, ದೀಪಕ್ ಹೂಡಾ, ಕೃನಾಲ್‌ ಪಾಂಡ್ಯ, ಯದುವೀರ್ ಸಿಂಗ್, ಆರ್ಶದ್ ಖಾನ್, ರವಿ ಬಿಷ್ಣೋಯಿ, ನವೀನ್‌ ಉಲ್ ಹಕ್, ಮೊಯ್ಸಿನ್ ಖಾನ್.

ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಜಿಯೋ ಸಿನಿಮಾ, ಸ್ಟಾರ್ ಸ್ಪೋರ್ಟ್ಸ್

Latest Videos
Follow Us:
Download App:
  • android
  • ios