IPL 2024: ಡೆಲ್ಲಿ ಎದುರು ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ
ಐಪಿಎಲ್ ಇತಿಹಾಸದಲ್ಲಿ ಲಖನೌ ಹಾಗೂ ಡೆಲ್ಲಿ ತಂಡಗಳು ಒಟ್ಟು ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರೂ ಪಂದ್ಯದಲ್ಲೂ ಡೆಲ್ಲಿ ಎದುರು ಲಖನೌ ತಂಡವು ಗೆಲುವಿನ ನಗೆ ಬೀರಿದೆ. ಇಂದಾದರೂ ಲಖನೌ ಎದುರು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಖಾತೆ ತೆರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಲಖನೌ(ಏ.12): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 26ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆತಿಥೇಯ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮಯಾಂಕ್ ಯಾದವ್ ಬದಲಿಗೆ ಆರ್ಶದ್ ಖಾನ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮುಕೇಶ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ.
ಸೋಲಿನಿಂದ ಕಂಗೆಟ್ಟ ಆರ್‌ಸಿಬಿ ಮತ್ತೊಂದು ಶಾಕ್, SRH ಪಂದ್ಯಕ್ಕೆ ಸ್ಟಾರ್ ಆಲ್ರೌಂಡರ್ ಡೌಟ್!
ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋತಿರುವ ಡೆಲ್ಲಿ ಈ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ. ಸದ್ಯ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮತ್ತೊಂದೆಡೆ ಲಖನೌ ಆರಂಭಿಕ ಸೋಲಿನ ಬಳಿಕ ಸತತ 3 ಪಂದ್ಯಗಳನ್ನು ಗೆದ್ದಿದ್ದು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಲಖನೌ ಹಾಗೂ ಡೆಲ್ಲಿ ತಂಡಗಳು ಒಟ್ಟು ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರೂ ಪಂದ್ಯದಲ್ಲೂ ಡೆಲ್ಲಿ ಎದುರು ಲಖನೌ ತಂಡವು ಗೆಲುವಿನ ನಗೆ ಬೀರಿದೆ. ಇಂದಾದರೂ ಲಖನೌ ಎದುರು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಖಾತೆ ತೆರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
'ನಾನು ನಿಮ್ಮ ಅತಿದೊಡ್ಡ ಚಿಯರ್ ಲೀಡರ್..': ಆಗಾಗ ಸುದ್ದಿಯಲ್ಲಿರುವ ಚಹಲ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?
ಉಭಯ ತಂಡಗಳ ಆಟಗಾರರ ಪಟ್ಟಿ
ಲಖನೌ: ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಸ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಆರ್ಶದ್ ಖಾನ್.
ಡೆಲ್ಲಿ: ಪೃಥ್ವಿ ಶಾ, ಡೇವಿಡ್ ವಾರ್ನರ್, ಶಾಯ್ ಹೋಪ್, ಟ್ರಿಸ್ಟಿನ್ ಸ್ಟಬ್ಸ್, ರಿಷಭ್ ಪಂತ್ (ನಾಯಕ), ಅಕ್ಷರ್ ಪಟೇಲ್, ಜೇಕ್ ಪ್ರಸೆರ್ ಮೆಗ್‌ಗುರ್ಕ್, ಇಶಾಂತ್ ಶರ್ಮಾ, ಖಲೀಲ್ ಅಹಮ್ಮದ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ