ಲಖನೌ ಸೂಪರ್ ಜೈಂಟ್ಸ್ ನೀಡಿದ್ದ 200 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ನಾಯಕ ಶಿಖರ್ ಧವನ್ ಹಾಗೂ ಜಾನಿ ಬೇರ್‌ಸ್ಟೋವ್ ಮೊದಲ ವಿಕೆಟ್‌ಗೆ 11.4 ಓವರ್‌ಗಳಲ್ಲಿ 102 ರನ್‌ಗಳ ಜತೆಯಾಟ ಒದಗಿಸಿಕೊಟ್ಟರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಜಾನಿ ಬೇರ್‌ಸ್ಟೋವ್ 29 ಎಸೆತಗಳಲ್ಲಿ ತಲಾ 3 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಲಖನೌ(ಮಾ.30): ಕ್ವಿಂಟನ್ ಡಿ ಕಾಕ್, ನಿಕೋಲರ್ ಪೂರನ್ ಹಾಗೂ ಕೃನಾಲ್ ಪಾಂಡ್ಯ ಸ್ಪೋಟಕ ಬ್ಯಾಟಿಂಗ್ ಹಾಗೂ ಯುವ ವೇಗಿ ಮಯಾಂಕ್ ಯಾದವ್ ಮಾರಕ ದಾಳಿಯ ನೆರವಿನಿಂದ ಪಂಜಾಬ್ ಕಿಂಗ್ಸ್ ಎದುರು ಲಖನೌ ಸೂಪರ್ ಜೈಂಟ್ಸ್ 21 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಗೆಲುವಿನ ಖಾತೆ ತೆರೆದಿದೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ತಂಡವು ಸತತ ಎರಡನೇ ಸೋಲು ಅನುಭವಿಸಿದೆ.
ಲಖನೌ ಸೂಪರ್ ಜೈಂಟ್ಸ್ ನೀಡಿದ್ದ 200 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ನಾಯಕ ಶಿಖರ್ ಧವನ್ ಹಾಗೂ ಜಾನಿ ಬೇರ್‌ಸ್ಟೋವ್ ಮೊದಲ ವಿಕೆಟ್‌ಗೆ 11.4 ಓವರ್‌ಗಳಲ್ಲಿ 102 ರನ್‌ಗಳ ಜತೆಯಾಟ ಒದಗಿಸಿಕೊಟ್ಟರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಜಾನಿ ಬೇರ್‌ಸ್ಟೋವ್ 29 ಎಸೆತಗಳಲ್ಲಿ ತಲಾ 3 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಶಾಮನೂರು ಶಿವಶಂಕರಪ್ಪ ಸ್ತ್ರೀದ್ವೇಷಿ ಹೇಳಿಕೆಗೆ ಕಿಡಿಕಾರಿದ ಬ್ಯಾಡ್ಮಿಂಟನ್ ತಾರೆ ಸೈನ್ ನೆಹ್ವಾಲ್..!
ಉತ್ತಮವಾಗಿ ಜತೆಯಾಟವಾಡುತ್ತಿದ್ದ ಈ ಜೋಡಿಯನ್ನು ಬೇರ್ಪಡಿಸಲು ಯುವ ವೇಗಿ ಮಯಾಂಕ್ ಯಾದವ್ ಯಶಸ್ವಿಯಾದರು. ಇನ್ನು ಪ್ರಭ್‌ಸಿಮ್ರನ್ ಸಿಂಗ್ ಕೇವಲ 7 ಎಸೆತಗಳಲ್ಲಿ 19 ರನ್ ಸಿಡಿಸಿ ಮಯಾಂಕ್ ಯಾದವ್‌ಗೆ ಎರಡನೆ ಬಲಿಯಾದರು. ಇನ್ನು ಜಿತೇಶ್ ಶರ್ಮಾ 6 ರನ್ ಗಳಿಸಿ ಮಯಾಂಕ್ ಯಾದವ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.
ಇನ್ನು ಒಂದು ಕಡೆಯಲ್ಲಿ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ ಬಾರಿಸಿ ಮೊಯ್ಸಿನ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ 17 ಎಸೆತಗಳಲ್ಲಿ ಅಜೇಯ 28 ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಲಖನೌ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಉತ್ತರಪ್ರದೇಶ ಮೂಲದ ಯುವ ವೇಗಿ ಮಯಾಂಕ್ ಯಾದವ್ 4 ಓವರ್‌ನಿಂದ ಕೇವಲ 27 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರೆ, ಮೊಯ್ಸಿನ್ ಖಾನ್ 2 ವಿಕೆಟ್ ತಮ್ಮ ಬುಟ್ಟಿಗೆ ಹಾಕಿ ಕೊಂಡರು
IPL 2024 ಪಂಜಾಬ್ ವಿರುದ್ಧ ಲಖನೌ ಸ್ಫೋಟಕ ಬ್ಯಾಟಿಂಗ್, 200 ರನ್ ಟಾರ್ಗೆಟ್!
ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಲಖನೌ ಸೂಪರ್ ಜೈಂಟ್ಸ್ ತಂಡವು ಆರಂಭದಲ್ಲೇ ಕೆ ಎಲ್ ರಾಹುಲ್(15) ಹಾಗೂ ದೇವದತ್ ಪಡಿಕ್ಕಲ್(9) ವಿಕೆಟ್ ಕಳೆದುಕೊಂಡಿತು. ಇನ್ನು ಮಾರ್ಕಸ್ ಸ್ಟೋಯ್ನಿಸ್ ಬ್ಯಾಟಿಂಗ್ 19 ರನ್‌ಗೆ ಸೀಮಿತವಾಯಿತು. ಆದರೆ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ 38 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 54 ರನ್ ಬಾರಿಸಿ ಮಿಂಚಿದರು.
ಇನ್ನು ನಿಕೋಲಸ್ ಪೂರನ್ ಕೇವಲ 21 ಎಸೆತಗಳಲ್ಲಿ 42 ರನ್ ಸಿಡಿಸಿದರೆ, ಕೊನೆಯಲ್ಲಿ ಕೃನಾಲ್ ಪಾಂಡ್ಯ ಕೇವಲ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 43 ರನ್ ಬಾರಿಸಿ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಅಂತಿಮವಾಗಿ ಲಖನೌ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.
