ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್ ಬಳಿಕ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಎಂ ಎಸ್ ಧೋನಿಯನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ

ಧರ್ಮಶಾಲಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು, ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದ ವೇಳೆ ಸಿಎಸ್‌ಕೆ ತಂಡದ ಮಧ್ಯಮ ಕ್ರಮಾಂಕ ನಾಟಕೀಯ ಕುಸಿತ ಕಂಡಾಗ ಧೋನಿ ಕ್ರೀಸ್‌ಗಿಳಿಯಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಶಾರ್ದೂಲ್ ಠಾಕೂರ್ ಬಳಿಕ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು. ಶಾರ್ದೂಲ್ ಠಾಕೂರ್ 11 ಎಸೆತಗಳನ್ನು ಎದುರಿಸಿ 19ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ಧೋನಿ 9ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಅಚ್ಚರಿ ಮೂಡಿಸಿದರು. ಆದರೆ ಧೋನಿ ತಾವೆದುರಿಸಿದ ಮೊದಲ ಎಸೆತದಲ್ಲೇ ಹರ್ಷಲ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್ ಆಗಿ ಬಂದಷ್ಟೇ ವೇಗದಲ್ಲಿ ಪೆವಿಲಿಯನ್‌ಗೆ ವಾಪಾಸ್ಸಾದರು. ಇನ್ನು ಧೋನಿ ತಡವಾಗಿ ಬ್ಯಾಟಿಂಗ್ ಮಾಡಲಿಳಿದಿದ್ದನ್ನು ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ.

ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ, 2023 ಹಾಗೂ 2024ರ ಐಪಿಎಲ್ ಟೂರ್ನಿಯಲ್ಲಿ ಒಟ್ಟು 8 ಬಾರಿ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಡೆತ್‌ ಓವರ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಎನ್ನುವ ಖ್ಯಾತಿ ಹೊಂದಿರುವ ಧೋನಿಯಿಂದ ಪಂಜಾಬ್ ಕಿಂಗ್ಸ್ ಎದುರು ಸ್ಪೋಟಕ ಬ್ಯಾಟಿಂಗ್‌ ಅನ್ನು ಸಿಎಸ್‌ಕೆ ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಅಭಿಮಾನಿಗಳ ನಿರೀಕ್ಷೆಯನ್ನು ಧೋನಿ ಹುಸಿಗೊಳಿಸಿದರು.

RCB ಕ್ಯಾಪ್ಟನ್ ಫಾಫ್ ಡು ಪ್ಲೆಸಿಸ್ ಬ್ಯೂಟಿಫುಲ್ ಪತ್ನಿಯ ಇಂಟ್ರೆಸ್ಟಿಂಗ್ ಸಂಗತಿಗಳಿವು..!

ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್ ಬಳಿಕ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಎಂ ಎಸ್ ಧೋನಿಯನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ

Scroll to load tweet…
Scroll to load tweet…
Scroll to load tweet…
Scroll to load tweet…

ಸ್ಲೋ ಕಟರ್ ಬೌಲಿಂಗ್ ಮಾಡುವ ಹರ್ಷಲ್ ಪಟೇಲ್ ಎದುರು ಧೋನಿ ರನ್ ಗಳಿಸಲು ಪರದಾಡುತ್ತಾ ಬಂದಿರುವುದನ್ನು ನಾವೆಲ್ಲರೂ ನೋಡುತ್ತಲೇ ಬಂದಿದ್ದೇವೆ. ಹರ್ಷಲ್ ಪಟೇಲ್ ಎದುರು ಧೋನಿ 33 ಎಸೆತಗಳನ್ನು ಎದುರಿಸಿ 8.33ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 25 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪೈಕಿ ಹರ್ಷಲ್ ಪಟೇಲ್ ಮೂರು ಬಾರಿ ಧೋನಿಯನ್ನು ಪೆವಿಲಿಯನ್‌ಗೆ ಅಟ್ಟಿದ್ದಾರೆ.

ಮುಂಬೈ ಗೆಲ್ಲುತ್ತಿದ್ದಂತೆಯೇ ಒಂಟಿಯಾಗಿ ಕುಳಿತು ಕಣ್ಣೀರು ಹಾಕಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್‌ ರವೀಂದ್ರ ಜಡೇಜಾ(43) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 9 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು. ಇನ್ನು ಈ ಸ್ಪರ್ದಾತ್ಮಕ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ದಯನೀಯ ಬ್ಯಾಟಿಂಗ್ ವೈಪಲ್ಯ ಅನುಭವಿಸಿ 28 ರನ್ ಅಂತರದ ಸೋಲು ಕಂಡಿತು. ಈ ಗೆಲುವಿನೊಂದಿಗೆ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 6 ಗೆಲುವು ಹಾಗೂ 5 ಸೋಲುಗಳೊಂದಿಗೆ 12 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.