IPL 2024 ಗೆಲುವಿನೊಂದಿಗೆ ಗುಡ್‌ಬೈ ಹೇಳಲು ಮುಂಬೈ-ಲಖನೌ ಕಾತರ
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ 13 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದು, 8 ಅಂಕ ಸಂಪಾದಿಸಿದೆ. ತಂಡ ಈ ಪಂದ್ಯ ದಲ್ಲಿ ಗೆದ್ದರೆ ಕೊನೆ ಸ್ಥಾನ ದಿಂದ ಮೇಲೇರುವ ಸಾಧ್ಯತೆಗಳಿವೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಮುಂಬೈ: ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಶುಕ್ರವಾರ ಮುಖಾಮುಖಿಯಾಗಲಿವೆ. ಇತ್ತಂಡಕ್ಕೂ ಇದು ಕೊನೆ ಪಂದ್ಯವಾಗಿದ್ದು, ಗೆಲುವಿನೊಂದಿಗೆ ಗುಡ್‌ಬೈ ಹೇಳಲು ಕಾತರಿಸುತ್ತಿದೆ. ಈ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯ ವಹಿಸುವ ಸಾಧ್ಯತೆಯಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ 13 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದು, 8 ಅಂಕ ಸಂಪಾದಿಸಿದೆ. ತಂಡ ಈ ಪಂದ್ಯ ದಲ್ಲಿ ಗೆದ್ದರೆ ಕೊನೆ ಸ್ಥಾನ ದಿಂದ ಮೇಲೇರುವ ಸಾಧ್ಯತೆಗಳಿವೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಮಳೆಯಿಂದ GT vs SRH ಪಂದ್ಯ ರದ್ದು: ಅಧಿಕೃತವಾಗಿ ಪ್ಲೇ-ಆಫ್‌ಗೇರಿದ ಸನ್‌ರೈಸರ್ಸ್
ಅತ್ತ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ 13ರಲ್ಲಿ 6 ಪಂದ್ಯ ಗೆದ್ದಿದ್ದು, 12 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ತಂಡ ಪ್ಲೇ-ಆಫ್‌ನಿಂದ ಅಧಿಕೃತವಾಗಿ ಹೊರಬೀಳಲಿದ್ದರೂ, ಕಳಪೆ ನೆಟ್ ರನ್‌ರೇಟ್ (-0.787) ಹೊ೦ದಿರುವ ಕಾರಣ ನಾಕೌಟ್‌ಗೇರುವ ಸಾಧ್ಯತೆಯಿಲ್ಲ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಮುಂಬೈ ಇಂಡಿಯನ್ಸ್:
ಇಶಾನ್ ಕಿಶನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನೆಹಾಲ್ ವದೇರಾ, ಟಿಮ್ ಡೇವಿಡ್, ಮೊಹಮದ್ ನಬಿ, ಗೆರಾಲ್ಡ್ ಕೋಟ್ಜೀ, ಪೀಯೂಸ್ ಚಾವ್ಲಾ.
ಲಖನೌ ಸೂಪರ್ ಜೈಂಟ್ಸ್:
ಕೆ ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ಆರ್ಶದ್ ಖಾನ್, ರವಿ ಬಿಷ್ಣೋಯಿ, ನವೀನ್ ಉಲ್ ಹಕ್, ಯದ್ವೀರ್ ಸಿಂಗ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ