IPL 2024 Qualifier 1: ಕೋಲ್ಕತಾ ನೈಟ್ ರೈಡರ್ಸ್ ಎದುರು ಟಾಸ್ ಗೆದ್ದ ಸನ್‌ರೈಸರ್ಸ್ ಬ್ಯಾಟಿಂಗ್ ಆಯ್ಕೆ
ಕೆಕೆಆರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಕ್ವಾಲಿಫೈಯರ್ ಪಂದ್ಯಕ್ಕೂ ಕಣಕ್ಕಿಳಿದಿದೆ.
ಅಹಮದಾಬಾದ್(ಮೇ.21): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಕೆಕೆಆರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಕ್ವಾಲಿಫೈಯರ್ ಪಂದ್ಯಕ್ಕೂ ಕಣಕ್ಕಿಳಿದಿದೆ.
ಈ ಆವೃತ್ತಿಯ ಆರಂಭದಲ್ಲಿ ಉಭಯ ತಂಡಗಳು ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಕೆಕೆಆರ್ 4 ರನ್‌ಗಳ ರೋಚಕ ಜಯ ಸಾಧಿಸಿತ್ತು.
ಅಂಕಪಟ್ಟಿಯಲ್ಲಿ 20 ಅಂಕದೊಂದಿಗೆ ಅಗ್ರಸ್ಥಾನ ಪಡೆದ ಕೋಲ್ಕತಾ ನೈಟ್ ರೈಡರ್ಸ್ ಹಾಗೂ 2ನೇ ಸ್ಥಾನ ಪಡೆದ ಸನ್‌ರೈಸರ್ಸ್ ಹೈದರಾಬಾದ್(17 ಅಂಕ) ತಂಡಗಳು ಮಂಗಳವಾರ(ಮೇ 21) ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್-1ರಲ್ಲಿ ಸೆಣಸಾಡಲಿವೆ. ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಇನ್ನು ಕ್ವಾಲಿಫೈಯರ್‌ನಲ್ಲಿ ಇಂದು ಸೋತ ತಂಡವು ಮೇ 24ರಂದು ಚೆನ್ನೈನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ನಲ್ಲಿ ಕಣಕ್ಕಿಳಿಯಲಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ
ಕೆಕೆಆರ್: ಸುನಿಲ್ ನರೈನ್, ರೆಹಮನುಲ್ಲಾ ಗುರ್ಬಾಜ್, ಶ್ರೇಯಸ್ ಅಯ್ಯರ್(ನಾಯಕ), ವೆಂಕಿ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಅನುಕೂಲ್ ರಾಯ್/ವೈಭವ್ ಅರೋರ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಸನ್‌ರೈಸರ್ಸ್ ಹೈದರಾಬಾದ್: ಟ್ರ್ಯಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಹೆನ್ರಿಚ್ ಕ್ಲಾಸೆನ್, ಶಾಬಾಜ್ ಅಹಮದ್, ಅಬ್ದುಲ್ ಸಮದ್, ಸನ್‌ವೀರ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್, ಟಿ ನಟರಾಜನ್.
ಪಂದ್ಯ: ಸಂಜೆ 7.30ಕ್ಕೆ, ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ