ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಗಾಯಗೊಂಡ ಬಳಿಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಲಖನೌ ನಾಯಕ ಕೆ.ಎಲ್. ರಾಹುಲ್ ಆಡಲು ಫಿಟ್ ಆಗಿದ್ದಾರೆ. ಆದರೆ ವಿಕೆಟ್ ಕೀಪರ್ ಕಾರ್ಯ ನಿರ್ವಹಿಸುವ ಸಾಧ್ಯತೆ ಕಡಿಮೆ. ಹೀಗಾಗಿ ಡಿ ಕಾಕ್ ಅಥವಾ ಪೂರನ್ ಜವಾಬ್ದಾರಿ ಹೊರಬೇಕಿದೆ. ದೇವದತ್ ಪಡಿಕ್ಕಲ್, ಆಯುಶ್ ಬದೋನಿ ಪ್ರಮುಖ ಆಕರ್ಷಣೆ.

ಜೈಪುರ: ಸ್ಪೋಟಕ ಬ್ಯಾಟರ್‌ಗಳು, ತಜ್ಞ ಸ್ಪಿನ್ನರ್‌ಗಳನ್ನೊಳಗೊಂಡ ರಾಜಸ್ಥಾನ ರಾಯಲ್ಸ್ ಈ ಬಾರಿ ಐಪಿಎಲ್‌ನಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದ್ದು, ಆರಂಭಿಕ ಪಂದ್ಯದಲ್ಲಿ ಭಾನುವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. 

Add Asianetnews Kannada as a Preferred SourcegooglePreferred

ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಗಾಯಗೊಂಡ ಬಳಿಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಲಖನೌ ನಾಯಕ ಕೆ.ಎಲ್. ರಾಹುಲ್ ಆಡಲು ಫಿಟ್ ಆಗಿದ್ದಾರೆ. ಆದರೆ ವಿಕೆಟ್ ಕೀಪರ್ ಕಾರ್ಯ ನಿರ್ವಹಿಸುವ ಸಾಧ್ಯತೆ ಕಡಿಮೆ. ಹೀಗಾಗಿ ಡಿ ಕಾಕ್ ಅಥವಾ ಪೂರನ್ ಜವಾಬ್ದಾರಿ ಹೊರಬೇಕಿದೆ. ದೇವದತ್ ಪಡಿಕ್ಕಲ್, ಆಯುಶ್ ಬದೋನಿ ಪ್ರಮುಖ ಆಕರ್ಷಣೆ.

Swiss Open 2024 ಸೆಮೀಸ್‌ನಲ್ಲಿ ಕಿದಂಬಿ ಶ್ರೀಕಾಂತ್ ಸೋಲಿನೊಂದಿಗೆ ಭಾರತದ ಸವಾಲು ಅಂತ್ಯ

ಮತ್ತೊಂದೆಡೆ ಅಭೂತಪೂರ್ವ ಲಯದಲ್ಲಿರುವ ಯಶಸ್ವಿ ಜೈಸ್ವಾಲ್, ಸ್ಫೋಟಕ ಆಟಕ್ಕೆ ಹೆಸರುವಾಸಿಯಾದ ಜೋಸ್ ಬಟ್ಲರ್, ಶಿಮ್ರೊನ್ ಹೆಟ್ಮೇಯರ್, ರೋವ್ಮನ್ ಪೋವೆಲ್ ರಾಜಸ್ಥಾನದ ಆಧಾರಸ್ತಂಭ. ನಾಯಕ ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್ ಕೂಡಾ ಅಬ್ಬರಿಸಬಲ್ಲರು. ಇನ್ನು ಅನುಭವಿ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್ ತಂಡದ ಟ್ರಂಪ್‌ಕಾರ್ಡ್. ವೇಗಿಗಳಾದ ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಆವೇಶ್
ಖಾನ್ ಮೇಲೂ ಭಾರೀ ನಿರೀಕ್ಷೆಯಿದೆ.

ಸಂಭವನೀಯ ಆಟಗಾರರ ಪಟ್ಟಿ

ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಶಿಮ್ರೊನ್ ಹೆಟ್ಮೇಯರ್, ರೋವ್ಮನ್ ಪೋವೆಲ್, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಆವೇಶ್ ಖಾನ್.

ಲಖನೌ ಸೂಪರ್ ಜೈಂಟ್ಸ್‌: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ಶಿವಂ ಮಾವಿ, ನವೀನ್ ಉಲ್ ಹಕ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್.

ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಸಿನಿಮಾ