ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನ ಆತಿಥ್ಯ ವಹಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಜಯದ ಹಳಿಗೆ ಮರಳುವ ಕಾತರದಲ್ಲಿದೆ. ಆದರೆ ರಾಯಲ್ಸ್‌ನ ತವರು ಜೈಪುರದಲ್ಲಿ ಪಂದ್ಯ ಗೆಲ್ಲುವುದು ತನ್ನ ಈ ವರೆಗಿನ ಪ್ರದರ್ಶನದಿಂದ ಅಸಾಧ್ಯ ಎಂಬ ಅರಿವು ಆರ್‌ಸಿಬಿಗೆ ಇದೆ.

ಜೈಪುರ(ಏ.06): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನ ಆತಿಥ್ಯ ವಹಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಜಯದ ಹಳಿಗೆ ಮರಳುವ ಕಾತರದಲ್ಲಿದೆ. ಆದರೆ ರಾಯಲ್ಸ್‌ನ ತವರು ಜೈಪುರದಲ್ಲಿ ಪಂದ್ಯ ಗೆಲ್ಲುವುದು ತನ್ನ ಈ ವರೆಗಿನ ಪ್ರದರ್ಶನದಿಂದ ಅಸಾಧ್ಯ ಎಂಬ ಅರಿವು ಆರ್‌ಸಿಬಿಗೆ ಇದೆ.

ಧೋನಿ, ಕೊಹ್ಲಿ ಹೇರ್‌ಕಟ್‌ ಗೆ ಇಷ್ಟು ರೇಟಾ? ಆಲಿಮ್ ಹಕೀಂ ಹೇಳ್ತಾರೆ ಕೇಳಿ

ಸತತ ಮೂರು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಕಳೆದ ಎರಡು ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಂಡಿರುವ ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಎಡಗೈ ಬ್ಯಾಟರ್ ಸೌರಭ್ ಚೌಹ್ಹಾನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ವಿಕೆಟ್ ಕೀಪರ್ ಅನೂಜ್ ರಾವತ್ ಅವರನ್ನು ಕೈಬಿಡಲಾಗಿದ್ದು, ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

Scroll to load tweet…

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸೌರವ್ ಚೌವ್ಹಾನ್, ರೀಸ್ ಟಾಪ್ಲೆ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ರಾಜಸ್ಥಾನ ರಾಯಲ್ಸ್:

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ&ವಿಕೆಟ್ ಕೀಪರ್), ರಿಯಾನ್ ಪರಾಗ್, ಧೃವ್ ಜುರೆಲ್, ಶಿಮ್ರೊನ್ ಹೆಟ್ಮೇಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ನಂದ್ರೆ ಬರ್ಗರ್, ಯುಜುವೇಂದ್ರ ಚಹಲ್

ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ