ಮತ್ತೆ ಗುಡುಗಿದ ಪಾಟೀದಾರ್; ಡೆಲ್ಲಿಗೆ ಕಠಿಣ ಗುರಿ ನೀಡಿದ RCB..!

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.

IPL 2024 RCB set 188 runs target to Delhi Capitals kvn

ಬೆಂಗಳೂರು: ರಜತ್ ಪಾಟೀದಾರ್ ಬಾರಿಸಿದ ಭರ್ಜರಿ ಅರ್ಧಶತಕ ಹಾಗೂ ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ. ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಕೇವಲ 13 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಏನೋ ವಿಶೇಷತೆ ನಿಮಗಾಗಿ ಕಾದಿದೆ, ಮ್ಯಾಚ್ ಮುಗಿದ ಮೇಲೆ ಮೈದಾನದಲ್ಲೇ ಇರಿ: ಚೆನ್ನೈ ಫ್ರಾಂಚೈಸಿ ಮಾತಿನ ಮರ್ಮವೇನು?

ಗುಡುಗಿದ ಪಾಟೀದಾರ್-ಜ್ಯಾಕ್ಸ್: ಕೇವಲ 36 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮೈ ಚಳಿ ಬಿಟ್ಟು ಬ್ಯಾಟ್ ಬೀಸಿದ ಪಾಟೀದಾರ್ ಕೇವಲ 29 ಎಸೆತಗಳನ್ನು ಎದುರಿಸಿ ಈ ಆವೃತ್ತಿಯ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಪಾಟೀದಾರ್ 32 ಎಸೆತಗಳನ್ನು ಎದುರಿಸಿ ತಲಾ 3 ಬೌಂಡರಿ ಹಾಗೂ ಸಿಕ್ಸರ್ ಸಹಿತ 52 ರನ್ ಬಾರಿಸಿ ರಸಿಕ್ ಸಲಾಮ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಪಾಟೀದಾರ್‌ಗೆ ಉತ್ತಮ ಸಾಥ್ ನೀಡಿದ ವಿಲ್ ಜ್ಯಾಕ್ಸ್‌ 29 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 41 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. 

ಪಾಟೀದಾರ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಕ್ಯಾಮರೋನ್ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಗ್ರೀನ್ 31 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸಿದರು

ಬೆಂಗಳೂರಿನಲ್ಲಿ ಟಾಸ್ ಗೆದ್ದ ಡೆಲ್ಲಿ, ಪ್ಲೇ ಅಫ್ ಆಸೆ ಜೀವಂತವಾಗಿರಿಸಲು ಸಜ್ಜಾದ ಆರ್‌ಸಿಬಿ!

ಕೈಕೊಟ್ಟ ಡಿಕೆ-ಲೋಮ್ರಾರ್: ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದು ಆರ್‌ಸಿಬಿ ರನ್ ವೇಗಕ್ಕೆ ಕಡಿವಾಣ ಬೀಳುವಂತೆ ಮಾಡಿತು. 
 

Latest Videos
Follow Us:
Download App:
  • android
  • ios