ಗೆಲ್ಲಲು 188 ರನ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 140 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗೆಲುವಿನೊಂದಿಗೆ ಆರ್‌ಸಿಬಿ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆರ್‌ಸಿಬಿಗೆ ಅದೃಷ್ಟ ಕೈಹಿಡಿದರೆ, ಇನ್ನೊಂದು ಗೆಲುವು ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ಯಲಿದೆ.

ಬೆಂಗಳೂರು(ಮೇ.12): ರಜತ್ ಪಾಟೀದಾರ್, ವಿಲ್ ಜ್ಯಾಕ್ಸ್ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡದ ಪ್ಲೇ ಆಫ್ ಕನಸಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ಇದೀಗ ಆರ್‌ಸಿಬಿ ಟೂರ್ನಿಯಲ್ಲಿ ಸತತ 5 ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಗೆಲ್ಲಲು 188 ರನ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 140 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗೆಲುವಿನೊಂದಿಗೆ ಆರ್‌ಸಿಬಿ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆರ್‌ಸಿಬಿಗೆ ಅದೃಷ್ಟ ಕೈಹಿಡಿದರೆ, ಇನ್ನೊಂದು ಗೆಲುವು ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ಯಲಿದೆ.

ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸವಾಲಿನ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಓವರ್‌ನಲ್ಲೇ ಸ್ವಪ್ನಿಲ್ ಸಿಂಗ್ ಮೊದಲ ಓವರ್‌ನಲ್ಲೇ ಇಂಪ್ಯಾಕ್ಟ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಡೆಲ್ಲಿ ಕ್ಯಾಪಿಟಲ್ಸ್ 30 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು. ಜೇಕ್ ಪ್ರೇಸ್ 21 ರನ್ ಸಿಡಿಸಿದರೆ, ವಾರ್ನರ್ 1, ಅಭಿಷೇಕ್ ಪೋರೆಲ್ ಹಾಗೂ ಕುಮಾರ್ ಕುಶಾಗ್ರಾ ತಲಾ 2 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. 

Scroll to load tweet…

ಇದಾದ ಬಳಿಕ 5ನೇ ವಿಕೆಟ್‌ಗೆ ಶಾಯ್ ಹೋಪ್ ಹಾಗೂ ಅಕ್ಷರ್ ಪಟೇಲ್ ಸಮಯೋಚಿತ 56 ರನ್‌ಗಳ ಜತೆಯಾಟವಾಡಿದರು. 29 ರನ್ ಬಾರಿಸಿ ಮುನ್ನುಗ್ಗುತ್ತಿದ್ದ ಶಾಯ್ ಹೋಪ್ ಅವರನ್ನು ಬಲಿ ಪಡೆಯುವಲ್ಲಿ ಲಾಕಿ ಫರ್ಗ್ಯೂಸನ್ ಯಶಸ್ವಿಯಾದರು. 

ಮತ್ತೆ ಗುಡುಗಿದ ಪಾಟೀದಾರ್; ಡೆಲ್ಲಿಗೆ ಕಠಿಣ ಗುರಿ ನೀಡಿದ RCB..!

ಕೈಕೊಟ್ಟ ಮಧ್ಯಮ ಕ್ರಮಾಂಕ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅಕ್ಷರ್ ಪಟೇಲ್ ಹಾಗೂ ಶಾಯ್ ಹೋಪ್ ಹೊರತಾಗಿ ಮತ್ತ್ಯಾವ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ. ನಾಯಕ ಅಕ್ಷರ್ ಪಟೇಲ್ 39 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 57 ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಆರ್‌ಸಿಬಿ ತಂಡದ ಪರ ಯಶ್ ದಯಾಳ್ 20 ರನ್ ನೀಡಿ 3 ವಿಕೆಟ್ ಪಡೆದರೆ, ಲಾಕಿ ಫರ್ಗ್ಯೂಸನ್ 2 ಹಾಗೂ ಕ್ಯಾಮರೋನ್ ಗ್ರೀನ್, ಮೊಹಮ್ಮದ್ ಸಿರಾಜ್ ಹಾಗೂ ಸ್ವಪ್ನಿಲ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು.

ಐಪಿಎಲ್‌ನಲ್ಲಿ ಯಾರೂ ಮಾಡದ ದಾಖಲೆ ನಿರ್ಮಿಸಲು ವಿರಾಟ್ ಕೊಹ್ಲಿ ರೆಡಿ..! ಬೆಂಗಳೂರಲ್ಲಿಂದು ಇತಿಹಾಸ ನಿರ್ಮಾಣ

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಆರ್‌ಸಿಬಿ ತಂಡವು ಆರಂಭಿಕ ಆಘಾತ ಅನುಭವಿಸಿತು. 36 ರನ್ ಗಳಿಸುವಷ್ಟರಲ್ಲಿ ಆರ್‌ಸಿಬಿಯ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದರು. ಆದರೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಅಮೂಲ್ಯ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 

ರಜತ್ ಪಾಟೀದಾರ್ 32 ಎಸೆತಗಳನ್ನು ಎದುರಿಸಿ ತಲಾ 3 ಬೌಂಡರಿ ಹಾಗೂ ಸಿಕ್ಸರ್ ಸಹಿತ 52 ರನ್ ಬಾರಿಸಿ ರಸಿಕ್ ಸಲಾಮ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ವಿಲ್ ಜ್ಯಾಕ್ಸ್‌ 29 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 41 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು.

ಪಾಟೀದಾರ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಕ್ಯಾಮರೋನ್ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಗ್ರೀನ್ 31 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸಿದರು