ಟೂರ್ನಿಯ ಮೊದಲಾರ್ಧದ 8 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ ತಂಡವು, ಇದಾದ ಬಳಿಕ ಸತತ 6 ಪಂದ್ಯಗಳಲ್ಲಿ 6 ಗೆಲುವು ದಾಖಲಿಸುವ ಮೂಲಕ ಪವಾಡಸದೃಶ ರೀತಿಯಲ್ಲಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅವಿಸ್ಮರಣೀಯ ಗೆಲುವು ದಾಖಲಿಸಿದೆ. ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 27 ರನ್ ಅಂತರದ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.
ಟೂರ್ನಿಯ ಮೊದಲಾರ್ಧದ 8 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ ತಂಡವು, ಇದಾದ ಬಳಿಕ ಸತತ 6 ಪಂದ್ಯಗಳಲ್ಲಿ 6 ಗೆಲುವು ದಾಖಲಿಸುವ ಮೂಲಕ ಪವಾಡಸದೃಶ ರೀತಿಯಲ್ಲಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್ ಬಾರಿಸಿತು. ನಾಯಕ ಫಾಫ್ ಡು ಪ್ಲೆಸಿಸ್ ಆಕರ್ಷಕ 54 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 47 ಹಾಗೂ ರಜತ್ ಪಾಟೀದಾರ್ 41 ರನ್ ಸಿಡಿಸಿದರು. ಇನ್ನು ಕ್ಯಾಮರೋನ್ ಗ್ರೀನ್ 38 ರನ್‌ಗಳ ಅಮೂಲ್ಯ ಕಾಣಿಕೆ ನೀಡಿದರು.
RCB ಆಟಗಾರರ ಶೇಕ್ ಹ್ಯಾಂಡ್ ಮಾಡದೇ ತೆರಳಿದ ಧೋನಿ..! ಕೊಹ್ಲಿ ನೋಡಿ ಕಲಿಯಿರಿ ಎಂದ ಇಂಗ್ಲೆಂಡ್ ಮಾಜಿ ನಾಯಕ
ಇನ್ನು ಗೆಲ್ಲಲು 219 ಹಾಗೂ ಪ್ಲೇ ಆಫ್‌ಗೇರಲು 201 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್‌ನ ಮೊದಲ ಎಸೆತದಲ್ಲೇ ನಾಯಕ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ(61) ಆಕರ್ಷಕ ಅರ್ಧಶತಕ ಹಾಗೂ ಅಜಿಂಕ್ಯ ರಹಾನೆ(33), ರವೀಂದ್ರ ಜಡೇಜಾ(42) ಹಾಗೂ ಎಂ ಎಸ್ ಧೋನಿ(25) ಸ್ಪೋಟಕ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಯ ಓವರ್‌ನಲ್ಲಿ ಪ್ಲೇ ಆಫ್‌ಗೇರಲು ಕೇವಲ 17 ರನ್ ಅಗತ್ಯವಿತ್ತು. ಕೊನೆಯ ಓವರ್ ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು. ಯಶ್ ದಯಾಳ್ ಮೊದಲ ಎಸೆತದಲ್ಲಿ ಸಿಕ್ಸರ್ ಚಚ್ಚಿಸಿಕೊಂಡರೂ, ಆ ಬಳಿಕ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವ ಮೂಲಕ ಆರ್‌ಸಿಬಿ ಪಡೆಗೆ ರೋಚಕ ಗೆಲುವು ತಂದುಕೊಟ್ಟರು.
ಹೀಗಿತ್ತು ನೋಡಿ ಆ ಕೊನೆಯ ಓವರ್:
