ಆರ್‌ಸಿಬಿ ಹಾಗೂ ಲಖನೌ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕಳೆದ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿದ್ದ ಆರ್‌ಸಿಬಿ ತಂಡವು ನಿರೀಕ್ಷೆಯಂತೆಯೇ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಬೆಂಗಳೂರು(ಏ.02): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 

ಆರ್‌ಸಿಬಿ ಹಾಗೂ ಲಖನೌ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕಳೆದ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿದ್ದ ಆರ್‌ಸಿಬಿ ತಂಡವು ನಿರೀಕ್ಷೆಯಂತೆಯೇ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆರ್‌ಸಿಬಿ ತಂಡದಲ್ಲಿ ಅಲ್ಜಾರಿ ಜೋಸೆಫ್ ಬದಲಿಗೆ ರೀಸ್ ಟಾಪ್ಲೆ ತಂಡ ಕೂಡಿಕೊಂಡಿದ್ದಾರೆ

ಅಂಪೈರಿಂಗ್‌ ತಪ್ಪಿನಿಂದಾಗಿ 2019ರಲ್ಲಿ ಇಂಗ್ಲೆಂಡ್‌ ವಿಶ್ವಕಪ್‌ ಜಯಿಸಿತು: ಮಾರಿಸ್‌ ಎರಾಸ್ಮಸ್‌ ಸ್ಫೋಟಕ ಹೇಳಿಕೆ!

ಇನ್ನೊಂದೆಡೆ ಕೆ ಎಲ್ ರಾಹುಲ್ ನಾಯಕನಾಗಿ ಕಣಕ್ಕಿಳಿದಿದ್ದಾರೆ. ಕಳೆದ ಪಂದ್ಯದಲ್ಲಿ ರಾಹುಲ್ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಲಖನೌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮೊಯ್ಸಿನ್ ಖಾನ್ ಬದಲಿಗೆ ಯಶ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ.

ವೈಶಾಕ್‌ಗಿಲ್ಲ ಸ್ಥಾನ: ಇನ್ನು ಕಳೆದ ಪಂದ್ಯದಲ್ಲಿ ಆರ್‌ಸಿಬಿ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದು ಶಿಸ್ತುಬದ್ಧ ದಾಳಿ ನಡೆಸಿ ಮಿಂಚಿದ್ದ ಕನ್ನಡದ ವೇಗಿ ವೈಶಾಕ್ ವಿಜಯ್‌ಕುಮಾರ್‌ಗೆ ಆರ್‌ಸಿಬಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. 

ಎರಡು ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಕೊನೆಯ ಕ್ಷಣದಲ್ಲಿ ಬದಲು..!

ಉಭಯ ತಂಡಗಳ ಆಟಗಾರರ ಪಟ್ಟಿ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್‌ ಕೊಹ್ಲಿ, ಕ್ಯಾಮರೋನ್ ಗ್ರೀನ್‌, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್‌, ಅನುಜ್‌ ರಾವತ್, ದಿನೇಶ್ ಕಾರ್ತಿಕ್‌, ಮಯಾಂಕ್ ದಾಗರ್‌, ಮೊಹಮ್ಮದ್ ಸಿರಾಜ್‌, ರೀಸ್ ಟಾಪ್ಲೆ, ಯಶ್ ದಯಾಳ್‌.

ಲಖನೌ: ಕ್ವಿಂಟನ್ ಡಿ ಕಾಕ್‌, ಕೆ ಎಲ್ ರಾಹುಲ್‌(ನಾಯಕ), ದೇವದತ್ ಪಡಿಕ್ಕಲ್‌, ಆಯುಷ್ ಬದೋನಿ, ನಿಕೋಲಸ್ ಪೂರನ್‌, ಮಾರ್ಕಸ್ ಸ್ಟೋಯ್ನಿಸ್‌, ಕೃನಾಲ್‌ ಪಾಂಡ್ಯ, ರವಿ ಬಿಷ್ಣೋಯ್‌, ಯಶ್ ಠಾಕೂರ್, ಮಯಾಂಕ್‌ ಯಾದವ್, ನವೀನ್ ಉಲ್ ಹಕ್. 

ಪಂದ್ಯ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಸಿನಿಮಾ.