ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೋಶ್ ಲಿಟ್ಲ್ ಹಾಗೂ ಮಾನವ್ ತಂಡ ಕೂಡಿಕೊಂಡಿದ್ದಾರೆ.

ಬೆಂಗಳೂರು(ಮೇ.04): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 52ನೇ ಪಂದ್ಯದಲ್ಲಿಂದು ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೋಶ್ ಲಿಟ್ಲ್ ಹಾಗೂ ಮಾನವ್ ಸುತಾರ್ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಅರ್ಧ ಡಜನ್ ಆಟಗಾರರು ಫೇಲ್..!

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಶರಣಾಗಿದ್ದ ಗುಜರಾತ್‌ ಟೈಟಾನ್ಸ್, ಈಗ ಆರ್‌ಸಿಬಿಯನ್ನು ಅವರದೇ ತವರಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಹೀಗಾಗಬೇಕಿದ್ದರೇ ಶುಭ್‌ಮನ್ ಗಿಲ್ ಪಡೆ 100% ಹೋರಾಟ ತೋರಬೇಕಿದೆ. ಈ ಹಿಂದಿನ ಮುಖಾಮುಖಿಯಲ್ಲಿ ಆರ್‌ಸಿಬಿ ಪರ ವಿಲ್ ಜ್ಯಾಕ್ಸ್ ಸ್ಪೋಟಕ ಶತಕ ಸಿಡಿಸಿದ್ದರು. ಇಂದು ಎಲ್ಲರ ಚಿತ್ತ ಜ್ಯಾಕ್ಸ್‌ ಮೇಲಿದೆ

ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ: ಬೆಂಗಳೂರಲ್ಲಿ ಕಳೆದೆರಡು ದಿನಗಳಲ್ಲಿ ಧಾರಾಕಾರ ಮಳೆಯಾಗಿದೆ. ಇವತ್ತೂ ಸಹ ಮಳೆ ಸುರಿಯುವ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಹೆಚ್ಚಿದೆ. ಪ್ಲೇ-ಆಫ್‌ ದೃಷ್ಟಿಯಿಂದ ಇತ್ತಂಡಕ್ಕೂ ಗೆಲುವು ಅನಿವಾರ್ಯವಾಗಿರುವ ಕಾರಣ ಮಳೆಯಿಂದ ಪಂದ್ಯ ರದ್ದಾದರೆ 2 ತಂಡಗಳೂ ಸಂಕಷ್ಟಕ್ಕೊಳಗಾಗಲಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ವಿಲ್ ಜ್ಯಾಕ್ಸ್‌, ಗ್ಲೆನ್ ಮ್ಯಾಕ್ಸ್‌ವೆಲ್‌, ಕ್ಯಾಮರೋನ್ ಗ್ರೀನ್‌, ದಿನೇಶ್‌ ಕಾರ್ತಿಕ್, ಸ್ವಪ್ನಿಲ್‌ ಸಿಂಗ್, ಕರ್ಣ್‌ ಶರ್ಮಾ, ಮೊಹಮ್ಮದ್ ಸಿರಾಜ್‌, ಯಶ್ ದಯಾಳ್‌, ವೈಶಾಕ್ ವಿಜಯ್‌ಕುಮಾರ್.

Scroll to load tweet…

ಗುಜರಾತ್ ಟೈಟಾನ್ಸ್‌: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್‌(ನಾಯಕ), ಸಾಯಿ ಸುದರ್ಶನ್‌, ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ಶಾರುಖ್‌ ಖಾನ್, ರಶೀದ್ ಖಾನ್, ಮಾನವ್ ಸುತಾರ್, ನೂರ್‌ ಅಹಮದ್, ಮೋಹಿತ್‌ ಶರ್ಮಾ, ಜೋಶ್ವಾ ಲಿಟ್ಲ್.

Scroll to load tweet…

ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಜಿಯೋ ಸಿನಿಮಾ