ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಕೊನೆಯ ಎಸೆತದಲ್ಲಿ ಸೋಲುಂಡಿದ್ದ ಕೆಕೆಆರ್, ಆರ್‌ಸಿಬಿಯ ಕಳಪೆ ಲಯದ ಲಾಭವೆತ್ತಿ ಗೆಲುವಿನ ಹಳಿಗೆ ಮರಳಲು ಕಾತರಿಸುತ್ತಿದೆ.
ಕೋಲ್ಕತಾ(ಏ.21): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 36ನೇ ಪಂದ್ಯದಲ್ಲಿಂದು ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ
ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಸತತ 5 ಸೋಲುಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕ್ಯಾಮರೋನ್ ಗ್ರೀನ್, ಮೊಹಮ್ಮದ್ ಸಿರಾಜ್ ಹಾಗೂ ಕರ್ಣ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ. ಇನ್ನು ವೇಗಿಗಳಾದ ವೈಶಾಕ್ ವಿಜಯ್‌ಕುಮಾರ್, ರೀಸ್ ಟಾಪ್ಲೆ ಹಾಗೂ ಸೌರವ್ ಚೌವ್ಹಾಣ್ ಹೊರಬಿದ್ದಿದ್ದಾರೆ.
ICC T20 World Cup: ಭಾರತ ಕ್ರಿಕೆಟ್ ತಂಡದ ಆಯ್ಕೆಗೆ ಕ್ಷಣಗಣನೆ..! ಯಾರಿಗೆ ಸಿಗುತ್ತೆ ಸ್ಥಾನ?
ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಕೊನೆಯ ಎಸೆತದಲ್ಲಿ ಸೋಲುಂಡಿದ್ದ ಕೆಕೆಆರ್, ಆರ್‌ಸಿಬಿಯ ಕಳಪೆ ಲಯದ ಲಾಭವೆತ್ತಿ ಗೆಲುವಿನ ಹಳಿಗೆ ಮರಳಲು ಕಾತರಿಸುತ್ತಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವೇ ಇಂದು ಆರ್‌ಸಿಬಿ ಎದುರು ಕಣಕ್ಕಿಳಿದಿದೆ.
ಒಟ್ಟು ಮುಖಾಮುಖಿ: 33
ಆರ್‌ಸಿಬಿ: 14
ಕೆಕೆಆರ್: 19
ಉಭಯ ತಂಡಗಳ ಆಟಗಾರರ ಪಟ್ಟಿ
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ವಿಲ್ ಜ್ಯಾಕ್ಸ್, ಕ್ಯಾಮರೋನ್ ಗ್ರೀನ್, ರಜತ್ ಪಾಟೀದಾರ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೊರ್, ಲಾಕಿ ಫರ್ಗ್ಯೂಸನ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ ಯಶ್ ದಯಾಳ್.
ಕೆಕೆಆರ್: ಫಿಲ್ ಸಾಲ್ಟ್, ಸುನಿಲ್ ನರೈನ್, ಅಂಗಕೃಷ್ ರಘುವಂಶಿ, ಶ್ರೇಯಸ್ ಅಯ್ಯರ್(ನಾಯಕ), ವೆಂಕಿ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವೈಭವ್ ಅರೋರ.
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
