IPL 2024 ತವರಿನ ಅಭಿಮಾನಿಗಳ ಭರ್ಜರಿ ಬೆಂಬಲ,ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಅಭಿಮಾನಿಗಳಿಂದ ಭರ್ತಿಯಾಗಿದೆ. ಆರ್‌ಸಿಬಿ, ಕೊಹ್ಲಿ ಘೋಷಣೆಗಳು ಮೊಳಗುತ್ತಿದೆ. ಇದರ ನಡುವೆ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ.
ಬೆಂಗಳೂರು(ಮಾ.25) ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನನಲ್ಲಿ ಅಬ್ಬರಿಸಲು ರೆಡಿಯಾಗಿದೆ. 2024ರ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಆರ್‌ಸಿಬಿ ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಪಂಜಾಬ್ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಅಭಿಮಾನಿಗಳಿಂದ ಭರ್ತಿಯಾಗಿದೆ. ಎಲ್ಲೆಡೆ ಕೊಹ್ಲಿ, ಆರ್‌ಸಿಬಿ ಘೋಷಣೆಗಳು ಮೊಳಗುತ್ತಿದೆ.
ಆರ್‌ಸಿಬಿ ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್, ಅನೂಜ ರಾವತ್, ಅಲ್ಜಾರಿ ಜೊಶೆಪ್, ಮಯಾಂಕ್ ಡಗಾರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
IPL 2024 Full Schedule: ಸಂಪೂರ್ಣ ವೇಳಾಪಟ್ಟಿ ಪ್ರಕಟ, ಫೈನಲ್‌ಗೆ ಚೆನ್ನೈ ಆತಿಥ್ಯ
ಪಂಜಾಬ್ ಪ್ಲೇಯಿಂಗ್ 11
ಶಿಖರ್ ಧವನ್(ನಾಯಕ), ಜಾನಿ ಬೈರ್‌ಸ್ಟೋ, ಪ್ರಭಸಿಮ್ರನ್ ಸಿಂಗ್, ಸ್ಯಾಮ್ ಕುರನ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಾಗಿಸೋ ರಬಾಡ, ರಾಹುಲ್ ಚಹಾರ್
2024ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಹಾಲಿ ಚಾಂಪಿಯನ್ ಚೆನ್ನೈ ವಿರುದ್ದ ಹೋರಾಟ ನಡೆಸಿತ್ತು. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಸೋಲ ಕಂಡಿದೆ. 2024ರ ಟೂರ್ನಿಯನ್ನು ಆರ್‌ಸಿಬಿ ಸೋಲಿನಿಂದ ಆರಂಭಿಸಿದೆ. ಆದರೆ ಅಷ್ಟೇ ವೇಗದಲ್ಲಿ ಕಮ್‌ಬ್ಯಾಕ್ ಮಾಡುವ ವಿಶ್ವಾಸದೊಂದಿಗೆ ಇಂದು ಕಣಕ್ಕಿಳಿದಿದೆ. ತವರಿನ ಅಭಿಮಾನಿಗಳ ಬೆಂಬಲ ಆರ್‌ಸಿಬೆ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
ಐಪಿಎಲ್ 2024ರಲ್ಲಿ ಆರ್‌ಸಿಬಿ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಮೊದಲ ಪಂದ್ಯದಲ್ಲಿ ಮುಗ್ಗರಿಸಿದರೂ ಈ ಬಾರಿ ಆರ್‌ಸಿಬಿ ಟ್ರೋಫಿ ಗೆಲ್ಲಲಿದೆ ಅನ್ನೋ ವಿಶ್ವಾಸ ಅಭಿಮಾನಿಗಳ ಮೇಲಿದೆ. ಈಗಾಗಲೇ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಟ್ರೋಫಿ ಗೆದ್ದುಕೊಂಡಿದೆ. ಬರೋಬ್ಬರಿ 16 ವರ್ಷಗಳ ಬಳಿಕ ಆರ್‌ಸಿಬಿ ಫ್ರಾಂಚೈಸಿ ಮೊದಲ ಟ್ರೋಫಿ ಸಿಹಿ ಕಂಡಿದೆ. ಮಹಿಳಾ ತಂಡದ ರೀತಿಯಲ್ಲಿ ಪುರುಷರ ತಂಡವೂ ಈ ಬಾರಿ ಟ್ರೋಫಿ ಗೆಲ್ಲಲಿದೆ ಅನ್ನೋ ಅಭಿಪ್ರಾಯವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.
ನೀನು ಬೌಂಡರಿ ಗೆರೆಯಲ್ಲಿ ಫೀಲ್ಡಿಂಗ್ ಮಾಡು...! ರೋಹಿತ್ ಶರ್ಮಾಗೆ ಶಾಕ್ ಕೊಟ್ಟ ಹಾರ್ದಿಕ್ ಪಾಂಡ್ಯ..! ನೆಟ್ಟಿಗರು ಗರಂ
ತವರಿನಲ್ಲಿ ಆಡುತ್ತಿರುವ ಕಾರಣ ಆರ್‌ಸಿಬಿಗೆ ಹಲವು ಅಡ್ವಾಂಟೇಜ್ ಕೂಡ ಇದೆ. ಇದರ ಜೊತೆಗೆ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿರುವ ಕಾರಣ ಟಾರ್ಗೆಟ್ ಚೇಸ್ ಮಾಡಲು ಸಜ್ಜಾಗಿದೆ. ಪಂಜಾಬ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಲು ಪ್ಲಾನ್ ಮಾಡಿಕೊಂಡಿದೆ.