ಕಳೆದ ಡಿಸೆಂಬರ್ 19ರಂದು ದುಬೈನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಸ್ಪೋಟಕ ವಿಕೆಟ್ ಕೀಪರ್ ಬ್ಯಾಟರ್ ರಾಬಿನ್ ಮಿನ್ಜು ಅವರನ್ನು ಖರೀದಿಸಲು ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳು ಸಾಕಷ್ಟು ಪೈಪೋಟಿ ನಡೆಸಿದವಾದರೂ, ಕೊನೆಗೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
ಬೆಂಗಳೂರು(ಮಾ.22): 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕೆಲವೇ ಗಂಟೆಗಳು ಭಾಕಿ ಇರುವಾಗಲೇ ಗುಜರಾತ್ ಟೈಟಾನ್ಸ್‌ಗೆ ಬಿಗ್ ಶಾಕ್ ಎದುರಾಗಿದೆ. ಗಾಯದ ಸಮಸ್ಯೆಯಿಂದಾಗಿ ಗುಜರಾತ್ ಟೈಟಾನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್, ಆದಿವಾಸಿ ಕ್ರಿಕೆಟಿಗ ರಾಬಿನ್ ಮಿನ್ಜು, ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು 3.60 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು.
ಕಳೆದ ಡಿಸೆಂಬರ್ 19ರಂದು ದುಬೈನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಸ್ಪೋಟಕ ವಿಕೆಟ್ ಕೀಪರ್ ಬ್ಯಾಟರ್ ರಾಬಿನ್ ಮಿನ್ಜು ಅವರನ್ನು ಖರೀದಿಸಲು ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳು ಸಾಕಷ್ಟು ಪೈಪೋಟಿ ನಡೆಸಿದವಾದರೂ, ಕೊನೆಗೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
ಚೆನ್ನೈನಲ್ಲಿ RCB ಕೊನೆ ಸಲ CSK ವಿರುದ್ಧ ಗೆದ್ದಾಗ... ಆಗಿನ್ನೂ ವಾಟ್ಸ್‌ಆ್ಯಪ್ ಇರಲಿಲ್ಲ..!
ಈ ಮೂಲಕ ರಾಬಿನ್ ಮಿನ್ಜು ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ಆದಿವಾಸಿ ಕ್ರಿಕೆಟಿಗ ಎನಿಸಿಕೊಂಡಿದ್ದರು. ಆದರೆ ಈ ತಿಂಗಳ ಆರಂಭದಲ್ಲಿ ಮಿನ್ಜು ತಮ್ಮ ಕವಾಸಕಿ ಸೂಪರ್‌ಬೈಕ್ ಓಡಿಸುವಾಗ ನಿಯಂತ್ರಣ ತಪ್ಪಿ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಿದ್ದು ಗಾಯಗೊಂಡಿದ್ದರು. ಇದೀಗ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ 2024ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಇದೀಗ ರಾಬಿನ್ ಮಿನ್ಜು ಬದಲಿಗೆ ಕರ್ನಾಟಕದ 27 ವರ್ಷದ ಪ್ರತಿಭಾನ್ವಿತ ಕ್ರಿಕೆಟಿಗ ಬಿ ಆರ್ ಶರತ್ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಬಿ ಆರ್ ಶರತ್ ಮಾತ್ರವಲ್ಲದೇ ಈಗಾಗಲೇ ವಿಕೆಟ್ ಕೀಪರ್‌ಗಳಾಗಿ ವೃದ್ದಿಮಾನ್ ಸಾಹ ಹಾಗೂ ಮ್ಯಾಥ್ಯೂ ವೇಡ್ ಕೂಡಾ ಸ್ಥಾನ ಪಡೆದಿದ್ದಾರೆ.
IPL 2024: RCB ಬಲಿಷ್ಠ ಆಡುವ ಹನ್ನೊಂದರ ಬಳಗ ಪ್ರಕಟ..! ಯಾರಿಗೆಲ್ಲಾ ಸ್ಥಾನ?
ಯಾರು ಈ ಬಿ ಆರ್ ಶರತ್..?
ಬಿ ಆರ್ ಶರತ್ ಕರ್ನಾಟಕದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಬಿ ಆರ್ ಶರತ್ 2018ರಲ್ಲಿ ಕರ್ನಾಟಕ ತಂಡದ ಪರ ಪಾದಾರ್ಪಣೆ ಮಾಡಿದ್ದಾರೆ. ಇದುವರೆಗೂ ಕರ್ನಾಟಕ ಪರ 28 ಪ್ರಥಮದರ್ಜೆ ಪಂದ್ಯಗಳನ್ನಾಡಿರುವ ಶರತ್ 328 ರನ್ ಬಾರಿಸಿದ್ದಾರೆ. ಇನ್ನು ಇದಷ್ಟೇ ಅಲ್ಲದೇ 20 ಫಸ್ಟ್ ಕ್ಲಾಸ್ ಹಾಗೂ 43 ಲಿಸ್ಟ್ ಎ ಪಂದ್ಯಗಳನ್ನಾಡಿ ಕ್ರಮವಾಗಿ 616 ಹಾಗೂ 732 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 7 ಅರ್ಧಶತಕಗಳು ಸೇರಿವೆ. ಇನ್ನು ಬಿ ಆರ್ ಶರತ್ ವಿಕೆಟ್ ಕೀಪರ್ ಆಗಿ 19 ಕ್ಯಾಚ್ ಹಾಗೂ 9 ಸ್ಟಂಪಿಂಗ್ ಮಾಡಿದ್ದಾರೆ.
ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮಾರ್ಚ್ 24ರಂದು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮಾದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ.
