ಸಂಜು ಆಕರ್ಷಕ ಫಿಫ್ಟಿ, ಲಖನೌ ಸೂಪರ್ ಜೈಂಟ್ಸ್‌ಗೆ ರಾಯಲ್ಸ್ ಸವಾಲಿನ ಗುರಿ

ಸ್ಪೋಟಕ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಕೇವಲ 11 ರನ್ ಗಳಿಸಿ ನವೀನ್ ಉಲ್ ಹಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್ 12 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 24 ರನ್ ಬಾರಿಸಿ ಮೊಯ್ಸಿನ್ ಖಾನ್‌ಗೆ ವಿಕೆಟ್ ಒಪ್ಪಿಸಿದರು.

IPL 2024 Sanju Samson Fiery Knock Propels RR To 193 for 4 vs Lucknow Super Giants kvn

ಜೈಪುರ(ಮಾ.24): ನಾಯಕ ಸಂಜು ಸ್ಯಾಮ್ಸನ್‌ ಬಾರಿಸಿದ ಆಕರ್ಷಕ ಅರ್ಧಶತಕ ಹಾಗೂ ರಿಯಾಗ್ ಪರಾಗ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಬಾರಿಸಿದ್ದು, ಲಖನೌ ಸೂಪರ್ ಜೈಂಟ್ಸ್‌ಗೆ ಸವಾಲಿನ ಗುರಿ ನೀಡಿದೆ. 

ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಅಯ್ದುಕೊಂಡ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಸ್ಪೋಟಕ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಕೇವಲ 11 ರನ್ ಗಳಿಸಿ ನವೀನ್ ಉಲ್ ಹಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್ 12 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 24 ರನ್ ಬಾರಿಸಿ ಮೊಯ್ಸಿನ್ ಖಾನ್‌ಗೆ ವಿಕೆಟ್ ಒಪ್ಪಿಸಿದರು.

ಸಂಜು-ಪರಾಗ್ ಜುಗಲ್ಬಂದಿ: ಕೇವಲ 49 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಕೇವಲ 59 ಎಸೆತಗಳಲ್ಲಿ 93 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ರಿಯಾನ್ ಪರಾಗ್ 29 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮತ್ತೊಂದು ತುದಿಯಲ್ಲಿ ವಿಸ್ಪೋಟಕ ಬ್ಯಾಟಿಂಗ್ ನಡೆಸಿದ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳನ್ನು ಎದುರಿಸಿ 21ನೇ ಐಪಿಎಲ್ ಶತಕ ಸಿಡಿಸಿ ಮಿಂಚಿದರು. ಅಂತಿಮವಾಗಿ ಸಂಜು ಸ್ಯಾಮ್ಸನ್ 52 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 82 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ಧೃವ್ ಜುರೆಲ್ ಕೇವಲ 12 ಎಸೆತಗಳಲ್ಲಿ ತಲಾ ಒಂದು ಸಿಕ್ಸರ್ ಹಾಗೂ ಬೌಂಡರಿ ಸಹಿತ ಆಕರ್ಷಕ 20 ರನ್ ಸಿಡಿಸಿದರು.  

ಲಖನೌ ಸೂಪರ್ ಜೈಂಟ್ಸ್ ಪರ ನವೀನ್ ಉಲ್ ಹಕ್ 41 ರನ್ ನೀಡಿ ಎರಡು ವಿಕೆಟ್ ಪಡೆದರೆ, ರವಿ ಬಿಷ್ಣೋಯಿ ಹಾಗೂ ಮೊಯ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
 

Latest Videos
Follow Us:
Download App:
  • android
  • ios