ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದಾಖಲೆಯ 9ನೇ ಬಾರಿಗೆ ಐಪಿಎಲ್ ಉದ್ಘಾಟನಾ ಪಂದ್ಯವನ್ನಾಡಲು ಸಜ್ಜಾಗಿದೆ. ಇನ್ನು ಮಾರ್ಚ್ 25ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ ನಡೆಯಲಿದ್ದು, ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿಯಲಿದೆ.

ಮುಂಬೈ(ಫೆ.22): ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಮುಂಬರುವ ಲೋಕಸಭಾ ಚುನವಾಣೆಯನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದಲ್ಲಿ ಆರಂಭಿಕ 21 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22ರಂದು ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಮೈದಾನ ಆತಿಥ್ಯ ವಹಿಸಿದೆ

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದಾಖಲೆಯ 9ನೇ ಬಾರಿಗೆ ಐಪಿಎಲ್ ಉದ್ಘಾಟನಾ ಪಂದ್ಯವನ್ನಾಡಲು ಸಜ್ಜಾಗಿದೆ. ಇನ್ನು ಮಾರ್ಚ್ 25ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ ನಡೆಯಲಿದ್ದು, ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿಯಲಿದೆ.

IPL 2024 ಆರಂಭಕ್ಕೂ ಮುನ್ನವೇ ಗುಜರಾತ್ ಟೈಟಾನ್ಸ್‌ಗೆ ಬಲವಾದ ಹೊಡೆತ..! ಸ್ಟಾರ್ ಕ್ರಿಕೆಟಿಗ ಟೂರ್ನಿಯಿಂದಲೇ ಔಟ್

ಈ ಮೊದಲು ಐಪಿಎಲ್ ವೇಳಾಪಟ್ಟಿಯ ಕುರಿತಂತೆ ಮಾಧ್ಯಮದವರ ಜತೆ ಮಾತನಾಡಿದ್ದ ಐಪಿಎಲ್ ಚೇರ್‌ಮನ್ ಅರುಣ್ ಧುಮಾಲ್, 2024ರ ಸಂಪೂರ್ಣ ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದರು. ಲೋಕಸಭಾ ಚುನಾವಣೆಯ ಹೊರತಾಗಿಯೂ ಸಂಪೂರ್ಣ ಐಪಿಎಲ್ ಟೂರ್ನಿಯನ್ನು ಈ ಬಾರಿ ಭಾರತದಲ್ಲೇ ಆಯೋಸುತ್ತೇವೆ. ಮೊದಲ ಹಂತದಲ್ಲಿ ಆರಂಭಿಕ 15 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಿದ್ದರು.

ಇಲ್ಲಿದೆ ನೋಡಿ ಮೊದಲ 21 ಐಪಿಎಲ್ ಪಂದ್ಯದ ಸಂಪೂರ್ಣ ವೇಳಾಪಟ್ಟಿ:

Scroll to load tweet…