ಐಪಿಎಲ್ ಹರಾಜಿನ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್!

ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ದಾಖಲೆಯ ಮೊತ್ತಕ್ಕೆ ತನ್ನತ್ತ ಸೆಳೆದುಕೊಳ್ಳುವಲ್ಲಿ ಪಂಜಾಬ್ ಕಿಂಗ್ಸ್ ತಂಡವು ಯಶಸ್ವಿಯಾಗಿದೆ. 

IPL 2025 Auction Updates Shreyas Iyer Makes History Becomes Most Expensive IPL Player kvn

ಜೆಡ್ಡಾ: 2024ರ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತೆಕ್ಕೆಗೆ ಜಾರಿದ್ದಾರೆ. ಇದೀಗ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಶ್ರೇಯಸ್ ಅಯ್ಯರ್ ಅಂತಿಮವಾಗಿ 26.75 ಕೋಟಿ ರುಪಾಯಿಗೆ ಪಂಜಾಬ್ ಕಿಂಗ್ಸ್‌ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಮೊತ್ತಕ್ಕೆ ಹರಾಜಾದ ಆಟಗಾರ ಎನ್ನುವ ದಾಖಲೆಗೆ ಶ್ರೇಯಸ್ ಅಯ್ಯರ್ ಪಾತ್ರರಾಗಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿಯು ಮಿಚೆಲ್ ಸ್ಟಾರ್ಕ್ ಅವರನ್ನು 24.75 ಕೋಟಿ ರುಪಾಯಿಗೆ ಖರೀದಿಸಿದ್ದು ಇಲ್ಲಿಯವರೆಗಿನ ದಾಖಲೆಯಾಗಿತ್ತು. 

ಐಪಿಎಲ್‌ನಲ್ಲಿ ಯಶಸ್ವಿ ನಾಯಕನಾಗಿ ಹೊರಹೊಮ್ಮಿರುವ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಲು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಿತು. ಆರಂಭದಲ್ಲಿ ಕೆಕೆಆರ್ ಫ್ರಾಂಚೈಸಿ ಕೂಡಾ ಶ್ರೇಯಸ್ ಅಯ್ಯರ್‌ಗೆ ಬಿಡ್ ಮಾಡಿತು. ಆದರೆ ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಪೈಪೋಟಿ ನಡೆಯಿತು.

ಎರಡು ತಂಡಗಳು ತಮಗೆ ನಾಯಕನ ಹುಡುಕಾಟ ಇರುವುದರಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ 19 ಕೋಟಿ ರುಪಾಯಿ ಬಿಡ್ ಮಾಡಿತು. ಆದರೆ ಪಂಜಾಬ್ ಕಿಂಗ್ಸ್‌ ತಂಡವು 20.75 ಕೋಟಿ ರುಪಾಯಿ ಬಿಡ್ ಮಾಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 22 ಕೋಟಿ ರುಪಾಯಿಗೆ ಬಿಡ್ ಮಾಡಿತು. ಆ ಬಳಿಕವೂ ಎರಡು ಫ್ರಾಂಚೈಸಿಗಳ ನಡುವೆ ಬಿಡ್ಡಿಂಗ್ ನಡೆಯಿತು. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ದಾಖಲೆಯ 25 ಕೋಟಿ ರುಪಾಯಿ ಬಿಡ್ ಮಾಡಿತು.  ಅಂತಿಮವಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು 26.75 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಐಪಿಎಲ್ ಇತಿಹಾಸದಲ್ಲಿ 51 ಪಂದ್ಯಗಳನ್ನಾಡಿರುವ ಮುಂಬೈ ಮೂಲದ ಶ್ರೇಯಸ್ ಅಯ್ಯರ್, 8 ಅರ್ಧಶತಕ ಸಹಿತ 1104 ರನ್ ಬಾರಿಸಿದ್ದಾರೆ. 

ಪಂಜಾಬ್ ಕಿಂಗ್ಸ್ ಧಾರಣ ಪಟ್ಟಿ : ಶಶಾಂಕ್ ಸಿಂಗ್ - 5.5 ಕೋಟಿ, ಪ್ರಭ್ಸಿಮ್ರಾನ್ ಸಿಂಗ್ - 4 ಕೋಟಿ

Latest Videos
Follow Us:
Download App:
  • android
  • ios