ಕೆಕೆಆರ್ ವಿರುದ್ದ ಚೇಸಿಂಗ್ ಮಾಡುತ್ತಿರುವ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ನೇರವಾಗಿ ಬಂದು ಕ್ರೀಸ್‌ನಲ್ಲಿದ್ದ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಈ ಘಟನೆ ವಿಡಿಯೋ ಭಾರಿ ಸದ್ದು ಮಾಡುತ್ತಿದೆ.
ಕೋಲ್ಕತಾ(ಮಾ.22) ಐಪಿಎಲ್ 2025 ಮೊದಲ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದ ಆರ್‌ಸಿಬಿ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ. ಆರ್‌ಸಿಬಿ ಗೆಲುವಿನ ಸಂಭ್ರಮ ಜೋರಾಗಿದೆ. ಅತ್ತ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲೂ ಆರ್‌ಸಿಬಿ ಅಬ್ಬರಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೇಳೆ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಅಭಿಮಾನಿಯೊಬ್ಬ ನೇರವಾಗಿ ಮೈದಾನಕ್ಕೆ ನುಗ್ಗಿದ್ದ. ಬ್ಯಾಟಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ಬಳಿ ಬಂದು ಕಾಲಿಗೆ ಎರಗಿದ್ದಾನೆ. ಕೊಹ್ಲಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ ಕೊಹ್ಲಿಯನ್ನು ತಬ್ಬಿಕೊಂಡ ಘಟನೆ ನಡೆದಿದೆ.
ಕೆಕೆಆರ್ ತಂಡ 175 ರನ್ ಟಾರ್ಗೆಟ್ ನೀಡಿತ್ತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. 13ನೇ ಓವರ್ ವೇಳೆ ವಿರಾಟ್ ಕೊಹ್ಲಿ ತಂಡದ ಗೆಲುವನ್ನು ಖಚಿತಪಡಿಸಿದ್ದರು. ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳ ರಂಜಿಸಿತ್ತು. ಈ ವೇಳೆ ಅಭಿಮಾನಿಯೊಬ್ಬ ಗ್ಯಾಲರಿಯಿಂದ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ನೇರವಾಗಿ ಮೈದಾನಕ್ಕೆ ನುಗ್ಗಿದ್ದಾನೆ.
ಭರ್ಜರಿ ಗೆಲುವಿನೊಂದಿಗೆ ಐಪಿಎಲ್ 2025 ಆರಂಭಿಸಿದ ಆರ್‌ಸಿಬಿ, ಈ ಸಲಾ ನಮ್ದೇ ಆಟ, ನಮ್ಗೆ ಕಿರೀಟ
ಕ್ರೀಸ್‌ನಲ್ಲಿದ್ದ ಕೊಹ್ಲಿ ಬಳಿ ಬಂದ ಅಭಿಮಾನಿ ವಿರಾಟ್ ಕೊಹ್ಲಿ ಕಾಲಿಗೆ ಎರಗಿದ್ದಾನೆ. ಕೊಹ್ಲಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿಯನ್ನು ಕೊಹ್ಲಿ ಮೇಲೆಳುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸಾಷ್ಟಾಂಗ ನಮಸ್ಕಾರದಲ್ಲಿದ್ದ ಅಭಿಮಾನಿ ಮೇಲಕ್ಕೆದ್ದು ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡು ಶುಭಾಶಯ ತಿಳಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಕ್ರೀಸ್‌ಬಳಿ ಬಂದು ಅಭಿಮಾನಿಯನ್ನು ಹಿಡಿದಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಬಳಿ ವಿರಾಟ್ ಕೊಹ್ಲಿ ವಿಶೇಷ ಮನವಿಯನ್ನು ಮಾಡಿದ್ದಾರೆ. ಅಭಿಮಾನಿಯನ್ನು ನೋಯಿಸದಂತೆ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.
ಅಭಿಮಾನಿಯನ್ನು ಭದ್ರತಾ ಸಿಬ್ಬಂದಿಗಳು ಮೈದಾನದಿಂದ ಕರೆದೊಯ್ದಿದ್ದಾರೆ.ಬಳಿಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಕೊಹ್ಲಿ 36 ಎಸೆತದಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ ಅಜೇಯ 59 ರನ್ ಸಿಡಿಸಿದರು. ಆರ್‌ಸಿಬಿ 16.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಐಪಿಎಲ್ 2025ರ ಟೂರ್ನಿಯಲ್ಲಿ ಆರ್‌ಸಿಬಿ ಅದ್ಭುತ ಆಟ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಆರ್‌ಸಿಬಿಯ 2025ರ ಮೊದಲ ಗೆಲುವಿನ ಸಂಭ್ರಮಾಚರಣೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆರ್‌ಸಿಬಿ ಅಭಿಮಾನಿಗಳು ಭರ್ಜರಿಯಾಗಿ ಸಂಭ್ರಮಿಸುತ್ತಿದ್ದಾರೆ.
ಈ ಎರಡು IPL ತಂಡಗಳು ಭಾರತ-ಪಾಕಿಸ್ತಾನ ಇದ್ದಂಗೆ ಎಂದ ಹರ್ಭಜನ್ ಸಿಂಗ್!
