19ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಆಟಗಾರರ ಟ್ರೇಡ್ ಅಧಿಕೃತವಾಗಿ ಘೋಷಣೆಯಾಗಿದೆ. ಸಂಜು ಸ್ಯಾಮ್ಸನ್ 18 ಕೋಟಿ ರುಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇರಿದ್ದು, ಪ್ರತಿಯಾಗಿ ರವೀಂದ್ರ ಜಡೇಜಾ ರಾಜಸ್ಥಾನ ರಾಯಲ್ಸ್ ಪಾಲಾಗಿದ್ದಾರೆ.
ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ರೀಟೈನ್ಷನ್ ಇಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಇದಕ್ಕೂ ಮೊದಲೇ ಹಲವು ಸ್ಟಾರ್ ಆಟಗಾರರ ಟ್ರೇಡ್ ಪ್ರಕ್ರಿಯೆ ನಡೆದಿದೆ. ಇದೀಗ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆದು ಅಧಿಕೃತವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 18 ಕೋಟಿ ರುಪಾಯಿಗೆ ಸಂಜು ಸ್ಯಾಮ್ಸನ್ ಅವರನ್ನು ಕರೆ ತಂದಿದೆ. ಇದಕ್ಕೆ ಬದಲಿಯಾಗಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, ಚೆನ್ನೈ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾಗೆ 14 ಕೋಟಿ ಹಾಗೂ ಸ್ಯಾಮ್ ಕರ್ರನ್‌ಗೆ 2.4 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಇದೀಗ ಐಪಿಎಲ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಎಲ್ಲಾ ಟ್ರೇಡ್ ಮಾಹಿತಿ ಹಂಚಿಕೊಂಡಿದೆ.
ಟ್ರೇಡ್ ಆದ 10 ಆಟಗಾರರ ಮಾಹಿತಿ ಹಂಚಿಕೊಂಡ ಬಿಸಿಸಿಐ
ಬಿಸಿಸಿಐ ತನ್ನ ವೆಬ್‌ಸೈಟ್‌ನಲ್ಲಿ ಆಟಗಾರರ ರೀಟೆನ್ಷನ್ ಆಟಗಾರರ ಘೋಷಣೆಗೂ ಮುನ್ನ ಸ್ಟಾರ್ ಆಟಗಾರರ ಟ್ರೇಡ್ ಅಧಿಕೃತವಾಗಿ ಘೋಷಣೆಯಾಗಿದೆ. ಇದರಲ್ಲಿ ಕೆಲವು ನಿರೀಕ್ಷಿತ ಘೋಷಣೆಯಾದರೆ, ಮತ್ತೆ ಕೆಲವು ಅನಿರೀಕ್ಷಿತ ಘೋಷಣೆಗಳಾಗಿವೆ. ಸಂಜು ಸ್ಯಾಮ್ಸನ್ ಅವರನ್ನು ನಿರೀಕ್ಷೆಯಂತೆಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 18 ಕೋಟಿ ರುಪಾಯಿ ರಾಜಸ್ಥಾನ ರಾಯಲ್ಸ್‌ನಿಂದ ಟ್ರೇಡ್ ಮಾಡಿದೆ. ಇನ್ನು. ರವೀಂದ್ರ ಜಡೇಜಾ ಅವರನ್ನು 14 ಕೋಟಿ ರುಪಾಯಿಗೆ ಹಾಗೂ ಸ್ಯಾಮ್ ಕರ್ರನ್ ಅವರನ್ನು 2.4 ಕೋಟಿ ರುಪಾಯಿಗೆ ಸಿಎಸ್‌ಕೆ ಫ್ರಾಂಚೈಸಿಯು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮಾರಾಟ ಮಾಡಿದೆ. ರವೀಂದ್ರ ಜಡೇಜಾ 2008ರಲ್ಲಿ ರಾಜಸ್ಥಾನ ರಾಯಲ್ಸ್ ಮೂಲಕವೇ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು.
ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 10 ಕೋಟಿ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್‌ಗೆ ಮಾರಾಟ ಮಾಡಿದೆ. ಲೆಗ್ ಸ್ಪಿನ್ನರ್ ಮಯಾಂಕ್ ಮಾರ್ಕಂಡೆಯನ್ನು ಕೆಕೆಆರ್ ತಂಡವು 30 ಲಕ್ಷ ರುಪಾಯಿಗೆ ಮುಂಬೈ ಇಂಡಿಯನ್ಸ್‌ಗೆ ಮಾರಾಟ ಮಾಡಿದೆ. ಇನ್ನು ಬೌಲಿಂಗ್ ಆಲ್ರೌಂಡರ್ ಅರ್ಜುನ್ ತೆಂಡುಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 30 ಲಕ್ಷ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್‌ಗೆ ಮಾರಾಟ ಮಾಡಿದೆ.
ಇನ್ನು ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಎಡಗೈ ಬ್ಯಾಟರ್ ನಿತೀಶ್ ರಾಣಾ ಮುಂಬರುವ ಆವೃತ್ತಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು 4.2 ಕೋಟಿ ರುಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮಾರಾಟ ಮಾಡಿದೆ. ಡೊನೊವನಾ ಫೆರೆರಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 1 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮಾರಾಟ ಮಾಡಿದೆ.
ಐಪಿಎಲ್ ಟ್ರೇಡ್ ಕಂಪ್ಲೀಟ್ ಡೀಟೈಲ್ಸ್:
1. ಸಂಜು ಸ್ಯಾಮ್ಸನ್ 18 ಕೋಟಿ ರುಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲು
2. ರವೀಂದ್ರ ಜಡೇಜಾ 14 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲು
3. ಸ್ಯಾಮ್ ಕರ್ರನ್ 2.4 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲು
4. ಮೊಹಮ್ಮದ್ ಶಮಿ 10 ಕೋಟಿ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್ ಪಾಲು
5. ಮಯಾಂಕ್ ಮಾರ್ಕಂಡೆ 30 ಲಕ್ಷ ರುಪಾಯಿಗೆ ಮುಂಬೈ ಇಂಡಿಯನ್ಸ್ ಪಾಲು
6. ಅರ್ಜುನ್ ತೆಂಡುಲ್ಕರ್ 30 ಲಕ್ಷ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್ ಪಾಲು
7. ಶೆರ್ಫನೆ ರುದರ್‌ಫೋರ್ಡ್ 2.6 ಕೋಟಿ ರುಪಾಯಿಗೆ ಮುಂಬೈ ಇಂಡಿಯನ್ಸ್ ಪಾಲು
8. ಶಾರ್ದೂಲ್ ಠಾಕೂರ್ 2 ಕೋಟಿ ರುಪಾಯಿಗೆ ಮುಂಬೈ ಇಂಡಿಯನ್ಸ್ ಪಾಲು
9. ನಿತೀಶ್ ರಾಣಾ 4.2 ಕೋಟಿ ರುಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲು
10. ಡೊನೊವನಾ ಫೆರೆರಾ 1 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲು
