ಗಾಯಗೊಂಡ ಅಲ್ಲಾ ಘಜನ್‌ಫರ್ ಐಪಿಎಲ್ ಮತ್ತು ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಅವರ ಸ್ಥಾನಕ್ಕೆ ಆಫ್ಘಾನ್ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ ಆಯ್ಕೆಯಾಗಿದ್ದಾರೆ. ಮುಜೀಬ್ ಹಿಂದಿನ ಐಪಿಎಲ್ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು. ಕಳೆದ ಬಾರಿ ಕೆಕೆಆರ್ ತಂಡದಲ್ಲಿದ್ದ ಘಜನ್‌ಫರ್ ಈಗ ಮುಂಬೈ ತಂಡ ಸೇರಿದ್ದಾರೆ.
ಮುಂಬೈ: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಗಾಯದ ಸಮಸ್ಯೆಯಿಂದಾಗಿ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದ ಆಫ್ಘಾನಿಸ್ತಾನದ ಸ್ಪಿನ್ನರ್ ಅಲ್ಲಾ ಘಜನ್‌ಫರ್, ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಆ ಸ್ಥಾನವನ್ನು ತುಂಬಲು ಆಫ್ಘಾನಿಸ್ತಾನ ಮೂಲದ ಅನುಭವಿ ಆಫ್‌ಸ್ಪಿನ್ನರ್ ಇದೀಗ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು ಅಲ್ಲಾ ಘಜನ್‌ಫರ್ ಅವರು ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಅಲಭ್ಯರಾಗಿದ್ದಾರೆ ಎಂದು ಪ್ರಕಟಣೆ ಹೊರಡಿಸಿತ್ತು. ಅಲ್ಲಾ ಘಜನ್‌ಫರ್ ಗಾಯದ ಸಮಸ್ಯೆಯಿಂದಾಗಿ ಏನಿಲ್ಲಾ ಎಂದರೂ ಕನಿಷ್ಠ 4 ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ಬಹಿರಂಗ ಪಡಿಸಿತ್ತು. ಅಲ್ಲಾ ಘಜನ್‌ಫರ್ ಕಳೆದ ವರ್ಷದ ಕೊನೆಯಲ್ಲಿ ಜಿಂಬಾಬ್ವೆ ಪ್ರವಾಸದಲ್ಲಿ ಆಫ್ಘಾನಿಸ್ತಾನ ತಂಡದ ಪರ ಆಡುವ ವೇಳೆ ಗಾಯಗೊಂಡಿದ್ದರು. ಘಜನ್‌ಫರ್ ಗಾಯಗೊಂಡು ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಹಿನ್ನೆಲೆಯಲ್ಲಿ ಇದೀಗ ಆಫ್ಘಾನ್ ಮೂಲದ ಅನುಭವಿ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದಾರೆ.
ಗೇಲ್‌ನಿಂದ ಕೊಹ್ಲಿವರೆಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಧೂಳೆಬ್ಬಿಸಿದ ಟಾಪ್ 10 ಬ್ಯಾಟ್ಸ್‌ಮನ್‌ಗಳು
ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದ ಮುಜೀಬ್:
ಆಫ್ಘಾನಿಸ್ತಾನ ಮೂಲದ ಬೌಲಿಂಗ್ ಆಲ್ರೌಂಡರ್ ಮುಜೀಬ್ ಉರ್ ರೆಹಮಾನ್ ಕೆಲ ತಿಂಗಳ ಹಿಂದಷ್ಟೇ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದರು. ಇನ್ನು ಇಂಟ್ರೆಸ್ಟಿಂಗ್ ಸಂಗತಿಯೆಂದರೆ, ಕಳೆದ ಬಾರಿ ಮುಜೀಬ್ ಉರ್ ರೆಹಮಾನ್ ಅವರನ್ನು ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಖರೀದಿಸಿತ್ತು. ಗಾಯದ ಸಮಸ್ಯೆಯಿಂದ ಅವರು ಹೊರಬಿದ್ದಾಗ 20 ಲಕ್ಷ ರುಪಾಯಿ ಮೂಲ ಬೆಲೆ ಹೊಂದಿದ್ದ ಅಲ್ಲಾ ಘಜನ್‌ಫರ್ ಅವರನ್ನು ಕೆಕೆಆರ್ ಫ್ರಾಂಚೈಸಿ ಬದಲಿ ಆಟಗಾರನ ರೂಪದಲ್ಲಿ ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು. ಆದರೆ ಇದೀಗ ಅದು ಅದಲು ಬದಲಾಗಿದ್ದು ಘಜನ್‌ಫರ್ ಬದಲಿಗೆ ಮುಜೀಬ್ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದಾರೆ.
ಮುಗಿಯಿತಾ ಟೀಂ ಇಂಡಿಯಾ ನಾಯಕನ ಟೆಸ್ಟ್ ಬದುಕು? ಇಲ್ಲಿದೆ ಮಹತ್ವದ ಅಪ್‌ಡೇಟ್
ಕಳೆದ ಬಾರಿ ಕಡೆ ಸ್ಥಾನ ಪಡೆದಿದ್ದ ಮುಂಬೈ:
5 ಬಾರಿಯ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಕಳೆದ ಬಾರಿ ಗುಜರಾತ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಕರೆತಂದು ಮುಂಬೈ ತಂಡಕ್ಕೆ ನಾಯಕ ಪಟ್ಟ ಕಟ್ಟಿತ್ತು. ಆದರೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಹೀನಾಯ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದು ಮುಖಭಂಗ ಅನುಭವಿಸಿತ್ತು.
