ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಹತ್ವದ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈ ಕಳೆದ 5 ಮುಖಾಮುಖಿಗಳಲ್ಲಿ ಗೆದ್ದಿದ್ದು, ಮುಂಬೈ ಸೇಡು ತೀರಿಸಿಕೊಳ್ಳುವತ್ತ ಗಮನ ಹರಿಸಿದೆ.
ಮುಂಬೈ: ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ 18ನೇ ಆವೃತ್ತಿ ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದೆ. ಎರಡೂ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದ್ದು, ಮಹತ್ವದ ಪಂದ್ಯದಲ್ಲಿ ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ.
ಮುಂಬೈ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದರೆ, ಚೆನ್ನೈ 7ರ ಪೈಕಿ ಕೇವಲ 2 ಪಂದ್ಯದಲ್ಲಿ ಗೆದ್ದಿದೆ. ಈಗಾಗಲೇ ಉಭಯ ತಂಡಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಎದುರಾಗಿದ್ದು, ಚೆನ್ನೈ ಜಯಭೇರಿ ಬಾರಿಸಿತ್ತು. ಅಲ್ಲದೆ, ಚೆನ್ನೈ ಕಳೆದ 5 ಮುಖಾಮುಖಿಗಳಲ್ಲೂ ಮುಂಬೈಯನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲು ಮುಂಬೈ ತಂಡ ಕಾಯುತ್ತಿದೆ.
ಇದನ್ನೂ ಓದಿ: ಕ್ಲೈಮ್ಯಾಕ್ಸ್‌ನಲ್ಲಿ ಎಡವಿ ಸೋತ ರಾಜಸ್ಥಾನ ರಾಯಲ್ಸ್! ಹೊಸ ದಾಖಲೆ ಬರೆದ ವೈಭವ್
ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹೀಗೆ ಭಾರತ ಕ್ರಿಕೆಟ್ ಆಟಗಾರರ ಸಮಾಗಮಕ್ಕೆ ಐತಿಹಾಸಿಕ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಆಡಿದ 7 ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್, ಇದೀಗ ಪ್ಲೇ ಆಫ್ ಪ್ರವೇಶಿಸಬೇಕಿದ್ದರೇ, ಇನ್ನುಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೇ, ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ 7 ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ 4 ಸೋಲು ಸಹಿತ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳ ಪಾಲಿಗೆ ಈ ಪಂದ್ಯ ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಮಹತ್ವದ್ದೆನಿಸಿಕೊಂಡಿದೆ.
ಚೆನ್ನೈಗೆ ಹೋಲಿಸಿದರೆ ಮುಂಬೈ ಬಲಿಷ್ಠವಾಗಿದೆ. ರೋಹಿತ್ ಶರ್ಮಾ ವಿಫಲರಾಗುತ್ತಿದ್ದರೂ ರಿಯಾನ್ ರಿಕೆಲ್ಟನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮಿಂಚುತ್ತಿದ್ದಾರೆ. ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಜೊತೆ ಟ್ರೆಂಟ್ ಬೌಲ್ಡ್, ಮಿಚೆಲ್ ಸ್ಯಾಂಟ್ನರ್ ತಂಡದ ಕೈಹಿಡಿಯ ಬೇಕಿದೆ. ವಿಲ್ ಜ್ಯಾಕ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಆಟ ತಂಡಕ್ಕೆ ನಿರ್ಣಾಯಕ ಎನಿಸಿಕೊಂಡಿದೆ.
ಇದನ್ನೂ ಓದಿ: IPL 2025: ಸಿಎಸ್‌ಕೆಗೆ ಹೊಸ ನಾಯಕ? ಧೋನಿಗೆ ಏನಾಯ್ತು?
ಅತ್ತ ಚೆನ್ನೈ ಬೌಲರ್‌ಗಳ ಮೇಲೆ ಹೆಚ್ಚಿನ ನಂಬಿಕೆ ಇಟ್ಟುಕೊಂಡಿದೆ. ಖಲೀಲ್ ಅಹಮದ್, ನೂರ್ ಅಹ್ಮದ್ ಉತ್ತಮ ದಾಳಿ ಸಂಘಟಿಸುತ್ತಿದ್ದರೂ, ಬ್ಯಾಟರ್‌ಗಳ ವೈಫಲ್ಯ ತಂಡಕ್ಕೆ ಹಿನ್ನಡೆ ಉಂಟುಮಾಡುತ್ತಿದೆ.
ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ:
ಚೆನ್ನೈ ಸೂಪರ್ ಕಿಂಗ್ಸ್: ಶೇಖ್ ರಶೀದ್, ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ಶಿವಂ ದುಬೆ, ವಿಜಯ್ ಶಂಕರ್, ರವೀಂದ್ರ ಜಡೇಜಾ, ಜೇಮಿ ಓವರ್‌ಟನ್/ಡೆವಾಲ್ಡ್ ಬ್ರೇವಿಸ್, ಎಂ ಎಸ್ ಧೋನಿ(ನಾಯಕ&ವಿಕೆಟ್ ಕೀಪರ್), ಅನ್ಸೂಲ್ ಕಂಬೋಜ್, ನೂರ್ ಅಹಮದ್, ಖಲೀಲ್ ಅಹಮದ್, ಮತೀಶ್ ಪತಿರಾಣ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್(ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧಿರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ವಿಘ್ನೇಶ್ ಪುತೂರ್.
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್
ಪಿಚ್ ರಿಪೋರ್ಟ್ ವಾಂಖೆಡೆ ಪಿಚ್ ದೊಡ್ಡ ಮೊತ್ತದ ಪಂದ್ಯಗಳಿಗೆ ಹೆಸರುವಾಸಿಯಾಗಿದ್ದರೂ, ಈ ಬಾರಿ ಸ್ಪರ್ಧಾತ್ಮಕವಾಗಿದೆ. ಇಲ್ಲಿ ನಡೆದ 3 ಪಂದ್ಯಗಳಲ್ಲಿ 2 ಬಾರಿ 200+ ರನ್ ದಾಖಲಾಗಿದೆ. ಬ್ಯಾಟರ್,ಬೌಲರ್ ಸಮಾನ ನೆರವು ಪಡೆಯಲಿದ್ದಾರೆ. ಟಾಸ್ ಗೆಲ್ಲುವ ತಂಡ ಫೀಲ್ಡಿಂಗ್ ಮಾಡಬಹುದು.
