ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ರೋಚಕ ಸೋಲಿನ ಬೆನ್ನಲ್ಲೇ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ರಾಜಸ್ಥಾನ ಕ್ರಿಕೆಟ್ ಸಂಸ್ಥೆಯ ಅಡ್ ಹಾಕ್ ಕಮಿಟಿ ಕನ್ವೀನಿಯರ್, ತಂಡದ ಕೆಟ್ಟ ಆಟದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ಕೊನೆಯ ಓವರ್‌ನಲ್ಲಿ ಕೇವಲ 9 ರನ್‌ಗಳ ಅಗತ್ಯವಿರುವಾಗ ಸೋಲು ಅನುಭವಿಸಿದ್ದನ್ನು ಅನುಮಾನಿಸಲಾಗಿದೆ.
ಜೈಪುರ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 36ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ರೋಚಕ ಸೋಲು ಅನುಭವಿಸಿತ್ತು. ಇದರ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ತಂಡದ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ.
ರಾಜಸ್ಥಾನ ಕ್ರಿಕೆಟ್ ಸಂಸ್ಥೆಯ ಅಡ್ ಹಾಕ್ ಕಮಿಟಿ ಕನ್ವೀನಿಯರ್, ರಾಜಸ್ಥಾನ ರಾಯಲ್ಸ್ ತಂಡದ ಸೋಲಿನ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದು, ಕೆಟ್ಟ ಆಟ ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ. ಲಖನೌ ಎದುರು ಗೆಲ್ಲಲು 181 ರನ್ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಕೊನೆಯ ಓವರ್‌ನಲ್ಲಿ ಕೇವಲ 9 ರನ್‌ಗಳ ಅಗತ್ಯವಿತ್ತು. ಕೈಯಲ್ಲಿ ಇನ್ನೂ 6 ವಿಕೆಟ್‌ಗಳಿದ್ದವು. ಹೀಗಿದ್ದೂ ರಾಜಸ್ಥಾನ ರಾಯಲ್ಸ್ ತಂಡವು ಎರಡು ರನ್ ಅಂತರದ ರೋಚಕ ಸೋಲು ಅನುಭವಿಸಿತ್ತು. ಲಖನೌ ಪರ ಕೊನೆಯ ಓವರ್ ಬೌಲಿಂಗ್ ಜವಾಬ್ದಾರಿ ಹೊತ್ತುಕೊಂಡ ಆವೇಶ್ ಖಾನ್ ಅದ್ಭುತ ಬೌಲಿಂಗ್ ದಾಳಿ ನಡೆಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
Virat Kohli & Anushka's Net Worth: ವಿರುಷ್ಕಾ ಜೋಡಿಯ ಒಟ್ಟು ಸಂಪತ್ತು ಇಷ್ಟೊಂದಾ?
ಇನ್ನು ಇದಕ್ಕೂ ಮೊದಲು ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು ಕೊನೆಯ ಓವರ್‌ನಲ್ಲಿ 9 ರನ್ ಗಳಿಸಲು ವಿಫಲವಾಗಿತ್ತು. ರಾಜಸ್ಥಾನ ರಾಯಲ್ಸ್ ಬಳಿ 7 ವಿಕೆಟ್ ಗಳಿದ್ದರೂ ಪಂದ್ಯ ಟೈ ಆಗಿತ್ತು. ಇದಾದ ಬಳಿಕ ಸೂಪರ್ ಓವರ್‌ನಲ್ಲಿ ಪಂದ್ಯ ಸೋತಿತ್ತು. ಇದು ಕೂಡಾ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡವು ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಒಳಗಾಗಿ ಎರಡು ವರ್ಷಗಳ ಕಾಲ ಐಪಿಎಲ್‌ನಿಂದ ನಿಷೇಧಕ್ಕೆ ಗುರಿಯಾಗಿತ್ತು. ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಮಾಲೀಕರಾಗಿದ್ದ ರಾಜ್ ಕುಂದ್ರಾ ಬೆಟ್ಟಿಂಗ್ ನಡೆಸಿದ ಆರೋಪ ಎದುರಿಸಿದ್ದರು. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಜತೆ ರಾಜಸ್ಥಾನ ರಾಯಲ್ಸ್ ಕೂಡಾ 2016 ಹಾಗೂ 2017ರಲ್ಲಿ ಐಪಿಎಲ್‌ನಿಂದ ಬ್ಯಾನ್ ಆಗಿತ್ತು. ಇನ್ನು ಇದಕ್ಕೂ ಮೊದಲು 2013ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನ ಕೆಲ ಆಟಗಾರರು ಸ್ಪಾಟ್ ಫಿಕ್ಸಿಂಗ್ ನಡೆಸಿ ಸಿಕ್ಕಿಬಿದ್ದು, ಐಪಿಎಲ್‌ನಿಂದಲೇ ಬ್ಯಾನ್ ಆಗಿದ್ದರು.
DC vs LSG: ಇಂದು ಡೆಲ್ಲಿ vs ಲಖನೌ ಫೈಟ್: ರಾಹುಲ್ ಮೇಲೆ ಎಲ್ಲರ ಕಣ್ಣು!
ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಸದ್ಯ ಆಡಿದ 8 ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಹಾಗೂ ಆರು ಸೋಲು ಸಹಿತ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನುಳಿದ ಆರು ಪಂದ್ಯಗಳ ಪೈಕಿ ಆರು ಪಂದ್ಯಗಳನ್ನು ಗೆದ್ದರಷ್ಟೇ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ರಾಜಸ್ಥಾನ ರಾಯಲ್ಸ್ ತಂಡದ ಇನ್ನೊಂದು ಸೋಲು ಪ್ಲೇ ಆಫ್ ಕನಸನ್ನು ನುಚ್ಚುನೂರು ಮಾಡಲಿದೆ. ಇದೀಗ ರಾಜಸ್ಥಾನ ರಾಯಲ್ಸ್ ತಂಡವು ಏಪ್ರಿಲ್ 24ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
