ಸೂಪರ್ ಸಂಡೆಯಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದೆ. ಫಿಲ್ ಸಾಲ್ಟ್ ಬದಲಿಗೆ ಜೇಕೊಬ್ ಬೆಥೆಲ್ ಆಡುವ ಹನ್ನೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ನವದೆಹಲಿ: ಸೂಪರ್ ಸಂಡೆಯ ಎರಡನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಿದೆ.

ಹೌದು, ಆರ್‌ಸಿಬಿ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದ್ದು, ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಬದಲಿಗೆ ಇಂಗ್ಲೆಂಡ್ ಮೂಲದ ಜೇಕೊಬ್ ಬೆಥೆಲ್ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನುಳಿದಂತೆ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ರೋಹಿತ್ ಶರ್ಮಾ vs ವಿರಾಟ್ ಕೊಹ್ಲಿ: ಐಪಿಎಲ್‌ನ ನಿಜವಾದ ಕಿಂಗ್ ಯಾರು?

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೂಡಾ ಒಂದು ಬದಲಾವಣೆ ಮಾಡಲಾಗಿದ್ದು, ಫಾಫ್ ಡು ಪ್ಲೆಸಿಸ್ ತಂಡ ಕೂಡಿಕೊಂಡಿದ್ದಾರೆ. 

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಟ್ಟು 32 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಆರ್‌ಸಿಬಿ ಸ್ಪಷ್ಟ ಮೇಲುಗೈ ಸಾಧಿಸಿದೆ. ಆರ್‌ಸಿಬಿ 19 ಪಂದ್ಯಗಳನ್ನು ಜಯಿಸಿದರೆ, ಡೆಲ್ಲಿ 12 ಪಂದ್ಯಗಳನ್ನು ಜಯಿಸಿದೆ. ಇನ್ನೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಹೊರಬಿದ್ದಿರಲಿಲ್ಲ. ಇನ್ನು 2021ರಿಂದೀಚೆಗೆ 9 ಮುಖಾಮುಖಿಯಲ್ಲಿ ಆರ್‌ಸಿಬಿ 7 ಪಂದ್ಯ ಗೆದ್ದಿದ್ದರೇ, ಡೆಲ್ಲಿ ಗೆದ್ದಿದ್ದು ಕೇವಲ ಎರಡು ಪಂದ್ಯ ಮಾತ್ರ.

ಮುಂಬೈ ಇಂಡಿಯನ್ಸ್ ಜಯದ ಓಟಕ್ಕೆ ಕಡಿವಾಣ ಹಾಕುತ್ತಾ ಲಖನೌ ಜೈಂಟ್ಸ್‌?

ಸಂಭಾವ್ಯ ಆಟಗಾರರ ಪಟ್ಟಿ

ಆರ್‌ಸಿಬಿ: ಜೆಕೊಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮ್ಯಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಶರ್ಮಾ, ಫಾಫ್ ಡು ಪ್ಲೆಸಿಸ್, ಕರುಣ್ ನಾಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಿನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ದುಷ್ಮಂತ್ ಚಮೀರ, ಮುಕೇಶ್ ಕುಮಾರ್.

ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್