ಇಂಡಿಯನ್ ಪ್ರೀಮಿಯರ್ ಲೀಗ್‌ನ 37ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದ್ದು, ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ರೊಮ್ಯಾರಿಯೋ ಶೆಫರ್ಡ್ ತಂಡ ಸೇರಿದ್ದಾರೆ.

ಮುಲ್ಲಾನ್‌ಪುರ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 37ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಇಲ್ಲಿನ ಮುಲ್ಲಾನ್‌ಪುರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡವು ನಿರೀಕ್ಷೆಯಂತೆಯೇ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕಳಪೆ ಫಾರ್ಮ್‌ನಲ್ಲಿರುವ ಆರ್‌ಸಿಬಿ ತಂಡದ ಆಲ್ರೌಂಡರ್ ಲಿಯಾಮ್‌ ಲಿವಿಂಗ್‌ಸ್ಟೋನ್ ಬದಲಿಗೆ ರೊಮ್ಯಾರಿಯೋ ಶೆಫರ್ಡ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡದ ಪರ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ತಂಡ ಕೂಡಿಕೊಂಡಿದ್ದಾರೆ.

14ರ ಹರೆಯದಲ್ಲೇ ಐಪಿಎಲ್‌ಗೆ ಎಂಟ್ರಿ, ಮೊದಲ ಬಾಲಿಗೆ ಸಿಕ್ಸರ್: ವೈಭವ್ ಸೂರ್ಯವಂಶಿ ಹೊಸ ದಾಖಲೆ!

ಟಿಮ್ ಡೇವಿಡ್ ಮೇಲೆ ಕಣ್ಣು: ಆರ್‌ಸಿಬಿ ತಂಡದ ಪರ ಕಳೆದ ಪಂದ್ಯದಲ್ಲಿ ಟಿಮ್ ಡೇವಿಡ್ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದ್ದರು. ಪಂಜಾಬ್ ಬೌಲಿಂಗ್ ಎದುರು ಆರ್‌ಸಿಬಿ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದ್ದರು. ಆದರೆ ಟಿಮ್ ಡೇವಿಡ್ ಸ್ಪೋಟಕ ಬ್ಯಾಟಿಂಗ್ ಮೂಲಕವೇ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ಟಿಮ್ ಡೇವಿಡ್ ಮೇಲೆ ಆರ್‌ಸಿಬಿ ಸಾಕಷ್ಟು ನಿರೀಕ್ಚೆ ಇಟ್ಟುಕೊಂಡಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ:

ರಾಯಲ್ ಚಾಲೆಂಜರ್ಸ್‌ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ರೊಮ್ಯಾರಿಯೋ ಶೆಫರ್ಡ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಸುಯಶದ ಶರ್ಮಾ, ಕೃನಾಲ್ ಪಾಂಡ್ಯ, ಯಶ್ ದಯಾಳ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್.

ಪಂಜಾಬ್ ಕಿಂಗ್ಸ್‌: ಪ್ರಿಯಾನ್ಶ್‌ ಆರ್ಯಾ, ಪ್ರಭ್‌ಸಿಮ್ರನ್ ಸಿಂಗ್, ಶ್ರೇಯಸ್ ಅಯ್ಯರ್(ನಾಯಕ), ನೇಹಲ್ ವಧೇರಾ, ಜೋಶ್ ಇಂಗ್ಲಿಶ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಯಾನ್ಸೆನ್, ಶಶಾಂಕ್ ಸಿಂಗ್, ಬಾರ್ಟ್‌ಲೆಟ್‌, ಹರ್‌ಪ್ರೀತ್ ಬ್ರಾರ್, ಯುಜುವೇಂದ್ರ ಚಹಲ್, ಅರ್ಶದೀಪ್ ಸಿಂಗ್.

ಮಧ್ಯಾಹ್ನ 3.30ಕ್ಕೆ 
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್