18ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ನಡೆಯಲಿರುವ ಮೆಗಾ ಹರಾಜಿನಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ

ಬೆಂಗಳೂರು: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಆಟಗಾರರ ಮೆಗಾ ಹರಾಜು ನಡೆಯಲಿದೆ. ಹೀಗಾಗಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ನಡೆಯಲಿರುವ ಮೆಗಾ ಹರಾಜಿಗೆ ಬಿಸಿಸಿಐ ಈಗಿನಿಂದಲೇ ಸಿದ್ದತೆಗಳನ್ನು ಆರಂಭಿಸಿದೆ. ಹೀಗಾಗಿ ಈಗಾಗಲೇ ಬಿಸಿಸಿಐನ ಐಪಿಎಲ್ ಆಡಳಿತ ಮಂಡಳಿಯು ಐಪಿಎಲ್ ಫ್ರಾಂಚೈಸಿಗಳ ಜತೆ ಮಾತುಕತೆ ನಡೆಸಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ ಕೆಲವೊಂದು ಬದಲಾವಣೆಗಳಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. 

ಈಗಾಗಲೇ ಐಪಿಎಲ್‌ನ ಕೆಲ ಫ್ರಾಂಚೈಸಿಗಳು ಬಿಸಿಸಿಐ ಬಳಿ ಐಪಿಎಲ್ ಹರಾಜಿಗೂ ಮುನ್ನ ಕನಿಷ್ಠ 6 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೇ 8 ಆರ್‌ಟಿಎಂ ಕಾರ್ಡ್ ಬಳಸಲು ಅವಕಾಶ ನೀಡಬೇಕು. ಐದು ವರ್ಷಕ್ಕೊಮ್ಮೆ ಮೆಗಾ ಹರಾಜು ನಡೆಸಬೇಕು ಎಂದೆಲ್ಲಾ ಮನವಿ ಸಲ್ಲಿಸಿವೆ. ಈ ಬಗ್ಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ.

ಇನ್ನು ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಫ್ರಾಂಚೈಸಿಗಳು ರೀಟೈನ್ ಮಾಡಿಕೊಂಡ ಆಟಗಾರರ ಸ್ಯಾಲರಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾದ ಪಕ್ಷದಲ್ಲಿ ಆಟಗಾರರು ಒಂದು ತಂಡದಿಂದ ಮತ್ತೊಂದು ತಂಡಕ್ಕೆ ಹಾರುವ ಅವಕಾಶಕ್ಕೆ ಬಹುತೇಕ ಬ್ರೇಕ್ ಹಾಕಿದಂತಾಗುತ್ತದೆ.

ಮೆಗಾ ಹರಾಜಿಗೂ ಮುನ್ನ 6 ಆಟಗಾರರ ರೀಟೈನ್‌ಗೆ ಫ್ರಾಂಚೈಸಿಗಳ ಮನವಿ: ಆರ್‌ಸಿಬಿಯಲ್ಲೇ ಉಳಿತಾರಾ ಮ್ಯಾಕ್ಸಿ, ಫಾಫ್..?

ಸದ್ಯ ಇರುವ ಐಪಿಎಲ್ ನಿಯಮಾವಳಿಗಳ ಪ್ರಕಾರ, ಫ್ರಾಂಚೈಸಿಯು ಆಟಗಾರರನ್ನು ಹರಾಜಿನಲ್ಲಿ ಖರೀದಿಸಿದಷ್ಟೇ ಹಣವನ್ನು ಆಟಗಾರರಿಗೆ ನೀಡಬೇಕು. ಇದರ ಹೊರತಾಗಿ ಫ್ರಾಂಚೈಸಿಯು ಆಟಗಾರರ ಸಂಬಳವನ್ನು ಹೆಚ್ಚಿಸುವಂತಿಲ್ಲ. 

2025ರ ಬಳಿಕ ಇನ್ನು ಮುಂದೆ 5 ವರ್ಷಗಳಿಗೊಮ್ಮೆ ಐಪಿಎಲ್ ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ. ಸದ್ಯ ಮೂರು ವರ್ಷಗಳಿಗೊಮ್ಮೆ ಐಪಿಎಲ್ ಮೆಗಾ ಹರಾಜು ನಡೆಯುತ್ತಿದೆ. ಹೀಗಾಗಿ ಒಂದು ವೇಳೆ ಬಿಸಿಸಿಐ ಒಪ್ಪಿದರೇ ಮುಂಬರುವ ದಿನಗಳಲ್ಲಿ 5 ವರ್ಷಗಳಿಗೊಮ್ಮೆ ಮೆಗಾ ಹರಾಜು ನಡೆದರೂ ಅಚ್ಚರಿಯಿಲ್ಲ.

ಇನ್ನು ಐಪಿಎಲ್ ಫ್ರಾಂಚೈಸಿಗಳು ಆಟಗಾರರ ಖರೀದಿಗೆ ಹರಾಜಿನಲ್ಲಿ ಪರ್ಸ್‌ನ ಮೊತ್ತವನ್ನು ಹೆಚ್ಚಿಸಲು ಮನವಿ ಸಲ್ಲಿಸಿವೆ. ಹೀಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ 130-140 ಕೋಟಿ ರುಪಾಯಿಗಳು ಫ್ರಾಂಚೈಸಿ ಪರ್ಸ್‌ನಲ್ಲಿ ಉಳಿಯುವ ಸಾಧ್ಯತೆಯಿದೆ.

ಇಂದಿನಿಂದ ಭಾರತ vs ಲಂಕಾ ಟಿ20; ಶುಭಾರಂಭದ ನಿರೀಕ್ಷೆಯಲ್ಲಿ ಟೀಂ ಇಂಡಿಯಾ..!

ಒಂದು ವೇಳೆ 6 ಆಟಗಾರರ ರೀಟೈನ್‌ಗೆ ಅವಕಾಶ ನೀಡದಿದ್ದರೇ, ಗರಿಷ್ಟ 8 ಆಟಗಾರರನ್ನು ಆರ್‌ಟಿಎಂ ಕಾರ್ಡ್‌ ಬಳಸಿ ತಮ್ಮ ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಬೇಕು ಎನ್ನುವ ಫ್ರಾಂಚೈಸಿಗಳ ಸಲಹೆಯನ್ನು ಬಿಸಿಸಿಐ ಒಪ್ಪಿಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.