ರೋವ್ಮನ್‌  ಪೋವೆಲ್ ಮೂಲ ಬೆಲೆ 1 ಕೋಟಿ ರುಪಾಯಿ ಹೊಂದಿದ್ದರು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ರೋವನ್ ಪೋವೆಲ್‌ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ದುಬೈ(ಡಿ.19): 2024ರ ಐಪಿಎಲ್ ಟೂರ್ನಿಗೂ ಮುನ್ನ ನಡೆಯುತ್ತಿರುವ ಐಪಿಎಲ್ ಆಟಗಾರರ ಹರಾಜು ಇದೀಗ ಆರಂಭವಾಗಿದ್ದು, ಮೊದಲ ಆಟಗಾರನಾಗಿ ವೆಸ್ಟ್ ಇಂಡೀಸ್ ಬ್ಯಾಟರ್ ರೋಮನ್ ಪೋವೆಲ್ ಖರೀದಿಸಲು ಸಾಕಷ್ಟು ಪೈಪೋಟಿ ನಡೆಯಿತು. ರೋವ್ಮನ್‌ ಪೋವೆಲ್ ಮೂಲ ಬೆಲೆ 1 ಕೋಟಿ ರುಪಾಯಿ ಹೊಂದಿದ್ದರು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ರೋವನ್ ಪೋವೆಲ್‌ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ಸ್ಪೋಟಕ ಬ್ಯಾಟರ್ ಆಗಿರುವ ರೋಮನ್ ಪೋವೆಲ್ ಖರೀದಿಸಲು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್‌ ನಡುವೆ ಸಾಕಷ್ಟು ಪೈಪೋಟಿ ನಡೆಯಿತು. ಅಂತಿಮವಾಗಿ ರೋವ್ಮನ್ ಪೋವೆಲ್ ನಿರೀಕ್ಷೆಗೂ ಮೀರಿ 7.40 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲಾಗಿದ್ದಾರೆ.

1166 ಮಂದಿ ಹರಾಜಿಗೆ ನೋಂದಣಿ ಮಾಡಿಕೊಂಡಿದ್ದರೂ, ಅಂತಿಮವಾಗಿ 333 ಮಂದಿಯನ್ನು ಬಿಸಿಸಿಐ ಹರಾಜಿಗೆ ಆಯ್ಕೆ ಮಾಡಿದೆ. ಸದ್ಯ 214 ಭಾರತೀಯರು, 119 ವಿದೇಶ ಆಟಗಾರರು, ಅಂತಾರಾಷ್ಟ್ರೀಯ ಪಂದ್ಯವಾಡಿದ 116, ಅಂ.ರಾ. ಪಂದ್ಯ ವಾಡದ 215 ಆಟಗಾರರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.