ಇತ್ತೀಚೆಗಷ್ಟೇ ಭಾರತದಲ್ಲೇ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟ್ರಾವಿಸ್ ಹೆಡ್‌ ಗಮನಾರ್ಹ ಪ್ರದರ್ಶನ ತೋರಿದ್ದ ಹೆಡ್, ಫೈನಲ್‌ನಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸೀಸ್ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ದುಬೈ(ಜ.19): 2023ರ ಐಸಿಸಿ ಏಕದಿನ ವಿಶ್ವಕಪ್ ಹೀರೋ ಟ್ರಾವಿಸ್ ಹೆಡ್ ಅವರನ್ನು ಕೊನೆಗೂ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೂಲ ಬೆಲೆ 2 ಕೋಟಿ ರುಪಾಯಿ ಹೊಂದಿದ್ದ ಆಸೀಸ್ ಅಗ್ರಕ್ರಮಾಂಕದ ಬ್ಯಾಟರ್ ಹೆಡ್ ಖರೀದಿಸಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಸಾಕಷ್ಟು ಪೈಪೋಟಿ ನಡೆಯಿತು. ಆದರೆ ಅಂತಿಮವಾಗಿ ಸನ್‌ರೈಸರ್ಸ್‌ ಹೈದರಾಬಾದ್‌ ಫ್ರಾಂಚೈಸಿಯು 6.80 ಕೋಟಿ ರುಪಾಯಿಗೆ ಆರೆಂಜ್ ಆರ್ಮಿ ಪಾಲಾಗಿದ್ದಾರೆ.

ಇತ್ತೀಚೆಗಷ್ಟೇ ಭಾರತದಲ್ಲೇ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟ್ರಾವಿಸ್ ಹೆಡ್‌ ಗಮನಾರ್ಹ ಪ್ರದರ್ಶನ ತೋರಿದ್ದ ಹೆಡ್, ಫೈನಲ್‌ನಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸೀಸ್ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Scroll to load tweet…

2024ರ ಐಪಿಎಲ್ ಆಟಗಾರರ ಹರಾಜಿನಲ್ಲಿ ಮೊದಲ ಆಟಗಾರನಾಗಿ ವೆಸ್ಟ್ ಇಂಡೀಸ್‌ನ ರೋವ್ಮನ್ ಪೋವೆಲ್ ಅವರನ್ನು 7.40 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಂಡಿತು. ಇನ್ನು ದಕ್ಷಿಣ ಆಫ್ರಿಕಾದ ರಿಲೇ ರೂಸ್ಸೌ ಅನ್‌ಸೋಲ್ಡ್ ಆದರೆ, ಇಂಗ್ಲೆಂಡ್ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು 4 ಕೋಟಿ ರುಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರು.