ಐಪಿಎಲ್ ಟೂರ್ನಿ ಕುರಿತು ಬಿಸಿಸಿಐ, ಸೆಪ್ಟೆಂಬರ್ ತಿಂಗಳಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ. ಈ ಕುರಿತು ಈಗಾಗಲೇ ಚಟುವಟಿಕೆ ತೀವ್ರಗೊಂಡಿದೆ. ಸಭೆಗಳು ನಡೆಯುತ್ತಿದೆ. ಬದಲಾಗುತ್ತಾ ಐಪಿಎಲ್ ಸ್ವರೂಪ?

ಮುಂಬೈ (ಆ.26) ಐಪಿಎಲ್ ಟೂರ್ನಿಗೆ ಫ್ರಾಂಚೈಸಿಗಳು ಸದ್ದಿಲ್ಲದೆ ತಯಾರಿ ನಡೆಸುತ್ತಿದೆ. ಆಟಗಾರರ ಟ್ರೇಡಿಂಗ್ ಮಾತುಕತೆಗಳು ನಡೆಯುತ್ತಿದೆ. ಇದರ ನಡುವೆ ಸಪೋರ್ಟ್ ಸ್ಟಾಫ್ ಸೇರಿದಂತೆ ಹಲವು ಸಿಬ್ಬಂದಿಗಳ ನೇಮಕಗಳು ನಡೆಯುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಬಿಸಿಸಿಐ ಐಪಿಎಲ್ ಕುರಿತು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಈ ಘೋಷಣೆ ಹೊರಹಬೀಳಲಿದೆ. ಬಿಸಿಸಿಐ ಚಟುವಟಿಕೆ ತೀವ್ರಗೊಂಡ ಬೆನ್ನಲ್ಲೇ ಇತ್ತ ಫ್ರಾಂಚೈಸಿಗಳು ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ.

ಸೆಪ್ಟೆಂಬರ್‌ನಲ್ಲಿ ಬಿಸಿಸಿಐ ನಿರ್ಧಾರವೇನು?

ಐಪಿಎಲ್ ಟೂರ್ನಿ ವಿಶ್ವದ ಪ್ರತಿಷ್ಠಿತ ಕ್ರಿಕೆಟ್ ಲೀಗ್ ಟೂರ್ನಿಯಾಗಿ ಹೊರಹೊಮ್ಮಿದೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಆದಾಯಗಳಿಸುತ್ತಿರುವ ಬಿಸಿಸಿಐ ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಐಪಿಎಲ್ ಗವರ್ನಿಂಗ್ ಕೌನ್ಸಿಲ್ ಚುನಾವಣೆ ನಡೆಸುತ್ತಿದೆ. ಸದ್ಯ ಐಪಿಎಲ್ ಚೇರ್ಮೆನ್ ಆಗಿ ಅರುಣ್ ಸಿಂಗ್ ಧುಮಾಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇಡೀ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಐಪಿಎಲ್ ಕೌನ್ಸಿಲ್‌ಗೆ ಚುನಾವಣೆ ನಡೆಯಲಿದೆ.

ಸೆಪ್ಟೆಂಬರ್ 10ಕ್ಕೆ ನಾಮ ಪತ್ರ ಸಲ್ಲಿಕೆ

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಚುನಾವಣೆ ಕುರಿತು ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 1ಕ್ಕೆ ವೋಟರ್ ಲಿಸ್ಟ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಸೆಪ್ಟೆಂಬರ್ 10ಕ್ಕೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 11ಕ್ಕೆ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 18ಕ್ಕೆ ಮತದಾನ ನಡೆಯಲಿದೆ.

ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ

ಸೆಪ್ಟೆಂಬರ್ ತಿಂಗಳಲ್ಲೇ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದೆ. ಈ ಕುರಿತು ದಿನಾಂಕ ಶೀಘ್ರದಲ್ಲೇ ಘೋಷಣೆಯಾಗಲಿದೆ. ಈ ಬಾರಿಯ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಒಂಬಡ್ಸ್‌ಮನ್, ಎಥಿಕ್ಸ್ ಅಧಿಕಾರಿ ಸೇರಿದಂತೆ ಹಲವು ನೇಮಗಳು ನಡೆಯಲಿದ. ಐಸಿಸಿ ಸಹಯೋಗದೊಂದಿದೆ ಈ ನೇಮಕ ನಡೆಯಲಿದೆ.

ಅಂಡಮಾನ್ ನಿಕೋಬಾರ್ ತಂಡ

ಸೆಪ್ಟೆಂಬರ್ ತಿಂಗಳಲ್ಲಿ ಬಿಸಿಸಿಐ ಮತ್ತೊಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಭಾರತದ ರಣಜಿ ಹಾಗೂ ದೇಸಿ ಟೂರ್ನಿಗೆ ಮತ್ತೊಂದು ತಂಡ ಸೇರ್ಪೆಡೆಯಾಗುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಅಂಡಮಾನ್ ಹಾಗೂ ನಿಕೋಬಾರ್ ತಂಡಕ್ಕೆ ಪರಿಗಣನೆ ನೀಡಲು ಬಿಸಿಸಿಐ ಮುಂದಾಗಿದೆ. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ.