ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ ಶಾಕ್?ಪಂಜಾಬ್ ಕಿಂಗ್ಸ್ ಹೆಡ್ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆ ಔಟ್15ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಪಂಜಾಬ್ ತಂಡಕ್ಕೆ ನೂತನ ಕೋಚ್
ನವದೆಹಲಿ(ಆ.19): ಬಲಿಷ್ಠ ಆಟಗಾರನ್ನೊಳಗೊಂಡ ತಂಡವನ್ನು ಹೊಂದಿದ್ದರೂ ಸಹಾ ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೇವಲ 2 ಅಂಕಗಳ ಅಂತರದಲ್ಲಿ ಪ್ಲೇ ಆಫ್‌ಗೇರಲು ಪಂಜಾಬ್ ಕಿಂಗ್ಸ್ ತಂಡ ಪ್ಲೇ ಆಫ್‌ಗೇರಲು ವಿಫಲವಾಗಿತ್ತು. ಇದೀಗ ಪಂಜಾಬ್ ಕಿಂಗ್ಸ್ ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ತನ್ನ ತಂಡದಲ್ಲಿ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದು, ತಂಡದ ಹೆಡ್‌ಕೋಚ್ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ತಂಡದಿಂದ ಕೈಬಿಡಲು ಚಿಂತನೆ ನಡೆದಿದೆ ಎಂದು ವರದಿಯಾಗಿದೆ.
ಮೊಹಾಲಿ ಮೂಲದ ಕ್ರಿಕೆಟ್ ಫ್ರಾಂಚೈಸಿಯಾಗಿರುವ ಪಂಜಾಬ್ ಕಿಂಗ್ಸ್ ತಂಡವು ಅನಿಲ್ ಕುಂಬ್ಳೆ ಜತೆಗೆ ಮುಂಬರುವ ಸೆಪ್ಟೆಂಬರ್‌ವರೆಗೂ ಒಪ್ಪಂದ ಮಾಡಿಕೊಂಡಿದೆ. ಒಪ್ಪಂದವನ್ನು ನವೀಕರಿಸದೇ ಇರುವ ತೀರ್ಮಾನಕ್ಕೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬಂದಿದೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡದಂತೆ ಪಂಜಾಬ್ ಕಿಂಗ್ಸ್ ತಂಡ ಕೂಡಾ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಯಲ್ಲಿದೆ. 2014ರಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್(ಆಗ ಕಿಂಗ್ಸ್ ಇಲೆವನ್ ಪಂಜಾಬ್) ತಂಡವು ಐಪಿಎಲ್ ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ಮುಗ್ಗರಿಸುವ ಮೂಲಕ ಚೊಚ್ಚಲ ಟ್ರೋಫಿ ಗೆಲ್ಲುವ ಕನಸನ್ನು ಕೈಚೆಲ್ಲಿತ್ತು. ಇದಾದ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಕನಿಷ್ಠ ಪ್ಲೇ ಆಫ್ ಹಂತಕ್ಕೇರಲು ಸಹ ಯಶಸ್ವಿಯಾಗಿಲ್ಲ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಸಾಕಷ್ಟು ಅಳೆದು ತೂಗಿ ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ಆಯ್ಕೆ ಮಾಡಿಕೊಂಡು ಕಣಕ್ಕಿಳಿದಿತ್ತು. ಹೀಗಿದ್ದೂ ಮಯಾಂಕ್ ಅಗರ್‌ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಪ್ಲೇ ಆಫ್‌ಗೇರಲು ವಿಫಲವಾಗುವ ಮೂಲಕ ನಿರಾಸೆ ಅನುಭವಿಸಿತ್ತು. ಇದರ ಬೆನ್ನಲ್ಲೇ ತನ್ನ ಹೆಡ್‌ಕೋಚ್ ತಲೆದಂಡಕ್ಕೆ ಪಂಜಾಬ್ ಕಿಂಗ್ಸ್ ಮುಂದಾಗಿದೆ ಎನ್ನಲಾಗುತ್ತಿದೆ.
ಐಪಿಎಲ್‌ನಲ್ಲಿ ನಡೆದಿತ್ತು ಮತ್ತೊಂದು ಕಪಾಳಮೋಕ್ಷ , 4 ಬಾರಿ ಕೆನ್ನಗೆ ಬಾರಿಸಿದ್ದರು ಎಂದ ರಾಸ್ ಟೇಲರ್!
ಕಳೆದೆರಡು ದಿನಗಳ ಹಿಂದಷ್ಟೇ ಕೋಲ್ಕತಾ ನೈಟ್ ರೈಡರ್ಸ್ ತಂಡವು ಭಾರತೀಯ ಮೂಲದ ಕೋಚ್ ಚಂದ್ರಕಾಂತ್ ಪಂಡಿತ್ ಅವರನ್ನು ತನ್ನ ಹೆಡ್ ಕೋಚ್ ಆಗಿ ನೇಮಿಸಿತ್ತು. ಬ್ರೆಂಡನ್ ಮೆಕ್ಕಲಂ, ಇಂಗ್ಲೆಂಡ್ ಟೆಸ್ಟ್ ತಂಡದ ಹೆಡ್‌ಕೋಚ್ ಆಗಿ ನೇಮಕಗೊಂಡಿರುವುದರಿಂದ ಚಂದ್ರಕಾಂತ್ ಪಂಡಿತ್‌ಗೆ ಕೆಕೆಆರ್ ಫ್ರಾಂಚೈಸಿ ಮಣೆಹಾಕಿದೆ.
ಕೆಲವು ಮೂಲಗಳ ಪ್ರಕಾರ, ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಈಗಾಗಲೇ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ಹಾಗೂ ಮಾಜಿ ಕೋಚ್ ಟ್ರಾವೆಲ್ ಬೇಲಿಸ್ ಅವರನ್ನು ಕೋಚ್ ಆಗುವಂತೆ ಆಫರ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದಷ್ಟೇ ಅಲ್ಲದೇ ಭಾರತೀಯ ಮೂಲದ ಕೋಚ್‌ಗೂ ಗಾಳ ಹಾಕುವ ಯತ್ನ ನಡೆಸಿದೆ ಎನ್ನಲಾಗಿದ್ದರೂ ಸಹಾ, ಯಾರು ಆ ಭಾರತೀಯ ಮೂಲದ ಕೋಚ್ ಎನ್ನುವ ರಹಸ್ಯ ಇನ್ನೂ ಬಯಲಾಗಿಲ್ಲ. ಸದ್ಯದಲ್ಲಿಯೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ತನ್ನ ತಂಡದ ನೂತನ ಹೆಡ್ ಕೋಚ್ ಹೆಸರು ಘೋಷಿಸಿದರೂ ಅಚ್ಚರಿಯೇನಿಲ್ಲ.
