Asianet Suvarna News Asianet Suvarna News

ICC T20 World Cup: ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ಸೋಲಿಸುವುದು ಪಾಕ್‌ಗೆ ಸುಲಭವಲ್ಲ..!

* ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ
* ಮತ್ತೊಮ್ಮೆ ಭಾರತ-ಪಾಕಿಸ್ತಾನ ನಡುವಿನ ಪೈಪೋಟಿಗೆ ವೇದಿಕೆ ಸಜ್ಜು
* ಕಳೆದ ಬಾರಿ ಭಾರತವನ್ನು ಸೋಲಿಸಿದ್ದ ಪಾಕ್ ಕ್ರಿಕೆಟ್ ತಂಡ

It will not be easy for Pakistan to beat Team India in ICC T20 World Cup this time Says Shoaib Akhtar kvn
Author
Bengaluru, First Published Jul 11, 2022, 12:37 PM IST

ಕರಾಚಿ(ಜು.11): ಕಳೆದ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡವು ಭಾರತ ತಂಡವನ್ನು ಮೊದಲ ಬಾರಿಗೆ ಸೋಲಿಸಿತ್ತು. ಆದರೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳೆದ ಬಾರಿ ಸೋಲಿಸಿದಂತೆ ಈ ಬಾರಿ ಭಾರತವನ್ನು ಸೋಲಿಸುವುದು ಪಾಕಿಸ್ತಾನಕ್ಕೆ ಸುಲಭವಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಟೀಂ ಇಂಡಿಯಾ (Team India) ಎದುರು ಪಾಕಿಸ್ತಾನ ತಂಡವು ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಬೌಲರ್‌ಗಳ ಸಂಘಟಿತ ಪ್ರದರ್ಶನ ಹಾಗೂ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಮುರಿಯದ ಶತಕದ ಜತೆಯಾಟದ ನೆರವಿನಿಂದ 10 ವಿಕೆಟ್‌ಗಳ ಗೆಲುವು ದಾಖಲಿಸಿತ್ತು. ಇದೀಗ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು (Pakistan Cricket Team) ಮುಂಬರುವ ಅಕ್ಟೋಬರ್ 23ರಂದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಐತಿಹಾಸಿಕ ಮೆಲ್ಬೊರ್ನ್ ಕ್ರಿಕೆಟ್ ಮೈದಾನ ಸಾಕ್ಷಿಯಾಗಲಿದೆ.

ಈ ಬಾರಿ ಭಾರತ ಕ್ರಿಕೆಟ್ ತಂಡವು (Indian Cricket Team) ಸೂಕ್ತ ರಣತಂತ್ರದೊಂದಿಗೆ ಕಣಕ್ಕಿಳಿಯಲಿದೆ. ಈ ಬಾರಿ ಪಾಕಿಸ್ತಾನ ತಂಡಕ್ಕೆ ಭಾರತ ಕ್ರಿಕೆಟ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಭಾರತ ತಂಡವು ಈ ಹಿಂದೆ ಪಾಕಿಸ್ತಾನ ವಿರುದ್ದ ಮಾಡಿದ ತಪ್ಪನ್ನು ತಿದ್ದಿಕೊಂಡು ಕಣಕ್ಕಿಳಿಯಲಿದ್ದು, ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನವನ್ನು ಎದುರಿಸಲು ಸಕಲ ರೀತಿಯಿಂದಲು ಸಜ್ಜಾಗಿ ಕಣಕ್ಕಿಳಿಯಲಿದೆ ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮೆಲ್ಬೊರ್ನ್‌ ಪಿಚ್‌ನಲ್ಲಿ ಪಾಕಿಸ್ತಾನ ತಂಡವು ಮೊದಲು ಬ್ಯಾಟಿಂಗ್ ಮಾಡಬೇಕು ಎನ್ನುವ ಸಲಹೆಯನ್ನು ಶೋಯೆಬ್ ಅಖ್ತರ್ (Shoaib Akhtar) ನೀಡಿದ್ದಾರೆ.

ICC T20 World Cup: ಕೆಲವೇ ಗಂಟೆಯೊಳಗಾಗಿ ಇಂಡೋ-ಪಾಕ್‌ ಪಂದ್ಯದ ಟಿಕೆಟ್ ಸೋಲ್ಡೌಟ್‌..!

ಈ ಬಾರಿ ಭಾರತ ಹಾಗೂ ಪಾಕಿಸ್ತಾನ (India vs Pakistan) ಕ್ರಿಕೆಟ್‌ ತಂಡಗಳು ಮುಖಾಮುಖಿಯಾದಾಗ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಮೆಲ್ಬೊರ್ನ್‌ ಪಿಚ್‌ನಲ್ಲಿ ಪಾಕಿಸ್ತಾನ ತಂಡವು ಎರಡನೇ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಬೇಕು. ಯಾಕೆಂದರೇ ಮೆಲ್ಬೊರ್ನ್‌ ಪಿಚ್‌ ಎರಡನೇ ಇನಿಂಗ್ಸ್‌ನಲ್ಲಿ ವೇಗದ ಬೌಲರ್‌ಗಳಿಗೆ ಹೆಚ್ಚಿನ ನೆರವು ಸಿಗುತ್ತದೆ ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.

ಮೆಲ್ಬೊರ್ನ್‌ನಲ್ಲಿ ಒಂದೂವರೆ ಲಕ್ಷ ಪ್ರೇಕ್ಷಕರ ಭಾರತ-ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸಲಿದ್ದಾರೆ:

ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡವಿನ ಪಂದ್ಯವೆಂದರೇ ಹಾಗೆ. ಜಗತ್ತಿನಾದ್ಯಂತ ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಈಗಾಗಲೇ ಐಸಿಸಿ ವಿಶ್ವಕಪ್‌ ಟೂರ್ನಿಗಳಲ್ಲಿ ಉಭಯ ತಂಡಗಳ ನಡುವೆ ಹಲವು ಜಿದ್ದಾಜಿದ್ದಿನ ಪಂದ್ಯಗಳಿಗೆ ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಈ ಕಾರಣಕ್ಕಾಗಿಯೇ ಈ ಬಾರಿ ಮೆಲ್ಬೊರ್ನ್ ಕ್ರಿಕೆಟ್ ಮೈದಾನದಲ್ಲಿ (Melbourne Cricket Ground) ಲಕ್ಷಕ್ಕೂ ಅಧಿಕ ಮಂದಿ ಪಂದ್ಯವನ್ನು ವೀಕ್ಷಿಸಲಿದ್ದಾರೆ. 

ನನ್ನ ಪ್ರಕಾರ ಈ ಬಾರಿ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಮೈದಾನಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವಿದೆ. ಮೆಲ್ಬೊರ್ನ್‌ನಲ್ಲಿ ಈ ಬಾರಿ 1,50,000 ಮಂದಿ ಪಂದ್ಯವನ್ನು ವೀಕ್ಷಿಸಲಿದ್ದಾರೆ. ಇದರ ಪೈಕಿ 70,000 ಮಂದಿ ಭಾರತೀಯ ಬೆಂಬಲಿಗರಿರಲಿದ್ದಾರೆ ಎಂದು ಅಖ್ತರ್ ಹೇಳಿದ್ದಾರೆ. ಜಗತ್ತಿನ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೆಲ್ಬೊರ್ನ್ ಕ್ರಿಕೆಟ್ ಮೈದಾನವು 1 ಲಕ್ಷ ಪ್ರೇಕ್ಷಕರ ಆಸನದ ವ್ಯವಸ್ಥೆಯನ್ನು ಹೊಂದಿದೆ. 

Follow Us:
Download App:
  • android
  • ios