ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಭೇಟಿಕೊಟ್ಟ ಕೇಶವ್ ಮಹಾರಾಜ್..! ಜೈ ಶ್ರೀರಾಮ್ ಎಂದು ಘರ್ಜಿಸಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ
ದಕ್ಷಿಣ ಆಫ್ರಿಕಾ ಸ್ಪಿನ್ ಆಲ್ರೌಂಡರ್ ಕೇಶವ್ ಮಹಾರಾಜ್ ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರನಲ್ಲ. ಆದರೂ ಸಹಾ ಲಖನೌ ಸೂಪರ್ ಜೈಂಟ್ಸ್ ತಂಡದ ಜತೆ ನೆಟ್ಸ್‌ನಲ್ಲಿ ಬೌಲಿಂಗ್ ಪ್ರಾಕ್ಟೀಸ್ ನಡೆಸುತ್ತಿದ್ದಾರೆ.
ಅಯೋಧ್ಯೆ(ಮಾ.22): ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಸ್ಪಿನ್ ಆಲ್ರೌಂಡರ್ ಕೇಶವ್ ಮಹಾರಾಜ್ ಕೊನೆಗೂ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಶ್ರೀರಾಮ ಬಾಲ ಮಂದಿರ ಪ್ರತಿಷ್ಟಾಪನೆ ಕಾರ್ಯಕ್ರಮಕ್ಕೆ ಭೇಟಿ ನೀಡಲು ಬಯಸಿದ್ದ ಕೇಶವ್ ಮಹಾರಾಜ್‌ಗೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಅಯೋಧ್ಯೆಗೆ ಭೇಟಿ ನೀಡಿ ಪ್ರಭು ಶ್ರೀರಾಮನ ದರ್ಶನ ಪಡೆದಿದ್ದಾರೆ.
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಲಖನೌ ಸೂಪರ್ ಜೈಂಟ್ಸ್ ತಂಡದ ಜತೆ ಕೇಶವ್ ಮಹಾರಾಜ್ ಅಭ್ಯಾಸ ನಡೆಸುತ್ತಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆಯುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿಗೆ ಸಪೋರ್ಟ್ ಮಾಡಲು ಮಗ ಅಕಾಯ್ ಜತೆ ಅನುಷ್ಕಾ ಶರ್ಮಾ ಭಾರತಕ್ಕೆ ಬರ್ತಾರಾ?
ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಇದೇ ಮಾರ್ಚ್ 24ರಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ದ ಕಣಕ್ಕಿಳಿಯುವ ಮೂಲಕ 2024ರ ಐಪಿಎಲ್ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದೀಗ ಶ್ರೀ ರಾಮ ಮಂದಿರಕ್ಕೆ ಭೇಟಿ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಜೈ ಶ್ರೀರಾಮ್, ಎಲ್ಲರಿಗೂ ಒಳಿತಾಗಲಿ ಎಂದು ಬರೆದುಕೊಂಡಿದ್ದಾರೆ.
ಈ ಮೊದಲು ಕೇಶವ್ ಮಹಾರಾಜ್, ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸೆ ಪಟ್ಟಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಮಾತನಾಡಿದ್ದ ಕೇಶವ್ ಮಹಾರಾಜ್, "ದುರಾದೃಷ್ಟವಶಾತ್, ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಭವಿಷ್ಯದಲ್ಲಿ ಖಂಡಿತವಾಗಿಯೂ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲು ಬಯಸುತ್ತೇನೆ ಎಂದು ಸ್ಪೋರ್ಟ್ಸ್ ತಕ್ ವಾಹಿನಿಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು.
ಚೆನ್ನೈನಲ್ಲಿ RCB ಕೊನೆ ಸಲ CSK ವಿರುದ್ಧ ಗೆದ್ದಾಗ... ಆಗಿನ್ನೂ ವಾಟ್ಸ್‌ಆ್ಯಪ್ ಇರಲಿಲ್ಲ..!
ದಕ್ಷಿಣ ಆಫ್ರಿಕಾ ಸ್ಪಿನ್ ಆಲ್ರೌಂಡರ್ ಕೇಶವ್ ಮಹಾರಾಜ್ ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರನಲ್ಲ. ಆದರೂ ಸಹಾ ಲಖನೌ ಸೂಪರ್ ಜೈಂಟ್ಸ್ ತಂಡದ ಜತೆ ನೆಟ್ಸ್‌ನಲ್ಲಿ ಬೌಲಿಂಗ್ ಪ್ರಾಕ್ಟೀಸ್ ನಡೆಸುತ್ತಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಫ್ರಾಂಚೈಸಿ, "ಕೇಶವ್ ಮಹಾರಾಜ್ SA20 ಲೀಗ್‌ನಲ್ಲಿ ಡರ್ಬನ್ ಸೂಪರ್ ಜೈಂಟ್ ತಂಡದ ಸದಸ್ಯರಾಗಿದ್ದಾರೆ. ಇವರು ನಮ್ಮ ಲಖನೌ ಸೂಪರ್ ಜೈಂಟ್ಸ್ ತಂಡದ ಅಧಿಕೃತ ಸದಸ್ಯರಲ್ಲ. ಆದಾಗಿಯೂ ಅವರ ಉಪಸ್ಥಿತಿ ನಮ್ಮ ತಂಡದಲ್ಲಿ ಹೊಸ ಹುರುಪನ್ನುಂಟು ಮಾಡಲಿದೆ" ಎಂದು ತಿಳಿಸಿದೆ.