ಲಂಡನ್(ಸೆ.10): ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟಿಸಿದ್ದು, ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ತಂಡ ಕೂಡಿಕೊಂಡಿದ್ದಾರೆ.

ಸ್ಪೋಟಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಇತ್ತೀಚೆಗಷ್ಟೇ ಮುಕ್ತಾಯವಾದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಸೀಮಿತ ಓವರ್‌ಗಳ ಸರಣಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.

ಇನ್ನು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕ್ರಮವಾಗಿ 66, 44 ಹಾಗೂ 21 ರನ್ ಬಾರಿಸುವ ಮೂಲಕ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದ ಡೇವಿಡ್ ಮಲಾನ್ ಇದೀಗ ಏಕದಿನ ಸರಣಿಯಲ್ಲಿ ಕಾಯ್ದುರಿಸಿದ ಅಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ಸರಣಿಯನ್ನು ಇಂಗ್ಲೆಂಡ್ 2-1 ಅಂತರದಲ್ಲಿ ಜಯಭೇರಿ ಬಾರಿಸಿತ್ತು.

ICC T20 ರ‍್ಯಾಂಕಿಂಗ್: ಇಂಗ್ಲೆಂಡ್ ಮಣಿಸಿ ಅಗ್ರಸ್ಥಾನಕ್ಕೇರಿದ ಆಸೀಸ್..!

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 11ರಿಂದ ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಲಿದೆ. 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗುತ್ತಿವೆ.

ಇಂಗ್ಲೆಂಡ್ ತಂಡ ಹೀಗಿದೆ ನೋಡಿ:

ಇಯಾನ್ ಮಾರ್ಗನ್(ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೇರ್‌ಸ್ಟೋವ್, ಟಾಮ್ ಬಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್

 

ಕಾಯ್ದಿರಿಸಿದ ಆಟಗಾರರು: ಸಕೀಬ್ ಮೊಹಮ್ಮದ್, ಡೇವಿಡ್ ಮಲಾನ್, ಫಿಲ್ ಸಾಲ್ಟ್