ಬೆನ್ನುನೋವಿನಿಂದ ಬಳಲುತ್ತಿರುವ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಮಂಗಳವಾರ ನಿರ್ಧಾರವಾಗಲಿದೆ. ಫೆ.೧೫ ರಂದು ದುಬೈಗೆ ತೆರಳಲಿರುವ ಭಾರತ ತಂಡ ಯಾವುದೇ ಅಭ್ಯಾಸ ಪಂದ್ಯಗಳನ್ನಾಡುವುದಿಲ್ಲ. ಬುಮ್ರಾ ಅಲಭ್ಯರಾದರೆ ಹರ್ಷಿತ್ ರಾಣಾ ಪರ್ಯಾಯ ಆಟಗಾರರಾಗಬಹುದು. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ನವದೆಹಲಿ: ಭಾರತದ ತಾರಾ ವೇಗಿ ಜಸ್‌ಪ್ರೀತ್‌ ಬುಮ್ರಾ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿದ್ದಾರೊ ಇಲ್ಲವೊ ಎಂಬುದು ಮಂಗಳವಾರ ಗೊತ್ತಾಗಲಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಸದ್ಯ ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈಗಾಗಲೇ ಅವರ ಗಾಯದ ಪ್ರಮಾಣದ ಬಗ್ಗೆ ಬಿಸಿಸಿಐಗೆ ವರದಿ ಸಲ್ಲಿಕೆಯಾಗಿದೆ. ಮತ್ತೊಂದೆಡೆ ಚಾಂಪಿಯನ್ಸ್ ಟ್ರೋಫಿಗೆ ಅಂತಿಮ ತಂಡ ಪ್ರಕಟಿಸಲು ಮಂಗಳವಾರ ಕೊನೆ ದಿನ. ಹೀಗಾಗಿ ಬುಮ್ರಾರನ್ನು ಬಿಸಿಸಿಐ ತಂಡದಲ್ಲೇ ಉಳಿಸಿಕೊಳ್ಳಲಿದೆಯೋ ಅಥವಾ ಅವರನ್ನು ಕೈಬಿಟ್ಟು ಬೇರೆ ಆಟಗಾರನಿಗೆ ಮಣೆ ಹಾಕಲಿದೆಯೋ ಎಂಬ ಕುತೂಹಲವಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಈ ಬದಲಾವಣೆ ಮಾಡಿ; ರೋಹಿತ್‌ಗೆ ಸೂಪರ್ ಐಡಿಯಾ ಕೊಟ್ಟ ಅಶ್ವಿನ್

ಕೆಲ ವರದಿಗಳ ಪ್ರಕಾರ, ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯ ಆರಂಭಿಕ ಕೆಲ ಪಂದ್ಯಗಳಿಗೆ ಗೈರಾದರೂ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬುಮ್ರಾ ತಂಡದಿಂದ ಹೊರಗುಳಿದರೆ ಅವರ ಬದಲು ಹರ್ಷಿತ್‌ ರಾಣಾ ಆಯ್ಕೆಯಾಗುವ ಸಾಧ್ಯತೆಯಿದೆ.

ಚಾಂಪಿಯನ್ಸ್‌ ಟ್ರೋಫಿ ಆಡಲು ಭಾರತದ ಆಟಗಾರರು ಫೆ.15ರಂದು ದುಬೈಗೆ

ದುಬೈ: ಫೆ.19ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆಡುವುದಕ್ಕಾಗಿ ಭಾರತ ತಂಡದ ಆಟಗಾರರು ಫೆ.15ರಂದು ದುಬೈಗೆ ಪ್ರಯಾಣಿಸಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಭಾರತ ಸದ್ಯ ಇಂಗ್ಲೆಂಡ್‌ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಆಡುತ್ತಿದೆ. ಫೆ.12ಕ್ಕೆ ಸರಣಿ ಕೊನೆಗೊಳ್ಳಲಿದೆ. ಸರಣಿಯ ಮೂರು ದಿನಗಳ ಬಳಿಕ ಭಾರತದ ಆಟಗಾರರು ದುಬೈಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಚಿನ್ ತೆಂಡುಲ್ಕರ್ ಅಪರೂಪದ ದಾಖಲೆ ಮುರಿದ ರೋಹಿತ್ ಶರ್ಮಾ!

ಅಲ್ಲದೆ, ಭಾರತ ತಂಡ ಈ ಬಾರಿ ಟೂರ್ನಿಗೂ ಮುನ್ನ ಯಾವುದೇ ಅಭ್ಯಾಸ ಪಂದ್ಯ ಆಡುವುದಿಲ್ಲ ಎಂದು ವರದಿಯಾಗಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗೆ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯ ಆಡಲಿದೆ. ಆದರೆ ನಿರಂತರ ಕ್ರಿಕೆಟ್‌ನಿಂದಾಗಿ ಈ ಬಾರಿ ಭಾರತಕ್ಕೆ ಯಾವುದೇ ಅಭ್ಯಾಸ ಪಂದ್ಯ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಟೂರ್ನಿಯ ಆತಿಥ್ಯ ಹಕ್ಕು ಪಾಕಿಸ್ತಾನ ಬಳಿ ಇದ್ದರೂ ಭಾರತ ತಂಡ ಪಾಕ್‌ಗೆ ಹೋಗಲು ನಿರಾಕರಿಸಿದ್ದರಿಂದ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆ.20ಕ್ಕೆ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯವಾಡಲಿದೆ. ಫೆ.23ಕ್ಕೆ ಬದ್ಧವೈರಿ ಪಾಕಿಸ್ತಾನ, ಮಾ.2ಕ್ಕೆ ನ್ಯೂಜಿಲೆಂಡ್‌ ವಿರುದ್ಧ ಸೆಣಸಾಡಲಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಆರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ