ಮುಂಬೈ(ನ.19): ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದ ತಂಡದಿಂದ ದೂರ ಉಳಿದಿದ್ದಾರೆ. ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ, ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದರು. ಬಾಂಗ್ಲಾ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ತಂಡಕ್ಕೆ ವಾಪಾಸ್ಸಾಗಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಬಿಸಿಸಿಐ, ಟಿ20 ವಿಶ್ವಕಪ್ ದೃಷ್ಟಿಯಿಂದ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಿದೆ. ಇದೀಗ ಶೀಘ್ರದಲ್ಲೇ ಬುಮ್ರಾ ತಂಡಕ್ಕೆ ವಾಪಾಸ್ಸಾಗಲಿದ್ದಾರೆ.

ಇದನ್ನೂ ಓದಿ: ICC ಏಕದಿನ ರ‍್ಯಾಂಕಿಂಗ್ ಪ್ರಕಟ; ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ ಕ್ರಿಕೆಟರ್ಸ್!

ಗಾಯದಿಂದ ಚೇತರಿಸಿಕೊಂಡ ಬುಮ್ರಾ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಿದ್ದರು. ಸದ್ಯ ಚೇತರಿಸಿಕೊಂಡಿರುವ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಿರುವ ಬಿಸಿಸಿಐ, ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ತಂಡಕ್ಕೆ ಸೇರಿಸಿಕೊಳ್ಳಲು ಸೂಚಿಸಿದೆ.

ಇದನ್ನೂ ಓದಿ: ಗುಡ್ ನ್ಯೂಸ್ ಕೊಟ್ಟ ಟೀಂ ಇಂಡಿಯಾ ಮಾರಕ ವೇಗಿ ಬುಮ್ರಾ...!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ 2020ರ ಜನವರಿಯಲ್ಲಿ ನಡೆಯಲಿದೆ. ಹೀಗಾದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ದದ ಸರಣಿ ಹಾಗೂ ಶ್ರೀಲಂಕಾ ನಡುವಿನ ಸರಣಿಯಿಂದಲೂ ಬುಮ್ರಾ ಹೊರಗುಳಿಯಲಿದ್ದಾರೆ. 

ಇದನ್ನೂ ಓದಿ: ಬುಮ್ರಾ, ಸ್ಮೃತಿಗೆ ಒಲಿದ ವಿಸ್ಡನ್‌ ಕ್ರಿಕೆಟ್‌ ಪ್ರಶಸ್ತಿ

ಮತ್ತೊರ್ವ ವೇಗಿ ಭುನವೇಶ್ವರ್ ಕುಮಾರ್  2019ರ ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಂಡಿರುವ  ಭುವನೇಶ್ವರ್ ಕುಮಾರ್ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ವಾಪಾಸ್ಸಾಗಿದ್ದಾರೆ. ಆಯ್ಕೆ ಸಮಿತಿ ಭುವಿ ಪ್ರದರ್ಶನದ ಆಧಾರದಲ್ಲಿ ವಿಂಡೀಸ್ ಸರಣಿಗೆ ಆಯ್ಕೆ ಮಾಡೋ ಸಾಧ್ಯತೆ ಇದೆ.