ಈ ಮೊದಲು ಸ್ಪಿನ್ ದಿಗ್ಗಜರಾಗಿರುವ ಬಿಷನ್ ಸಿಂಗ್ ಬೇಡಿ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದ್ದರು. ಇದೀಗ ವೈಜಾಗ್ ಎದುರಿನ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಎರಡು ಇನಿಂಗ್ಸ್‌ಗಳಿಂದ 91 ರನ್ ನೀಡಿ 9 ವಿಕೆಟ್ ಕಬಳಿಸುವ ಮೂಲಕ ಐಸಿಸಿ ಟೆಸ್ಟ್ ಬೌಲರ್‌ಗಳ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.

ದುಬೈ(ಫೆ.07): ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ವೃತ್ತಿಜೀವನದಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದು, ಇದೀಗ ಐಸಿಸಿ ಟೆಸ್ಟ್ ಬೌಲರ್‌ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಮೂಲಕ ಐಸಿಸಿ ಟೆಸ್ಟ್ ಬೌಲರ್‌ಗಳ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಭಾರತದ ಮೊದಲ ವೇಗದ ಬೌಲರ್ ಎನ್ನುವ ಅಪರೂಪದ ದಾಖಲೆಗೆ ಬುಮ್ರಾ ಪಾತ್ರರಾಗಿದ್ದಾರೆ.

ಈ ಮೊದಲು ಸ್ಪಿನ್ ದಿಗ್ಗಜರಾಗಿರುವ ಬಿಷನ್ ಸಿಂಗ್ ಬೇಡಿ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದ್ದರು. ಇದೀಗ ವೈಜಾಗ್ ಎದುರಿನ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಎರಡು ಇನಿಂಗ್ಸ್‌ಗಳಿಂದ 91 ರನ್ ನೀಡಿ 9 ವಿಕೆಟ್ ಕಬಳಿಸುವ ಮೂಲಕ ಐಸಿಸಿ ಟೆಸ್ಟ್ ಬೌಲರ್‌ಗಳ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 106 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.

Scroll to load tweet…

ಇದುವರೆಗೂ ಭಾರತ ಪರ 34 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ, ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕಿಂತ ಮೇಲೆ ಏರಿರಲಿಲ್ಲ. ಇದೀಗ ಬುಮ್ರಾ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಬುಮ್ರಾ ಇದುವರೆಗೂ ಟೆಸ್ಟ್ ಕ್ರಿಕೆಟ್‌ನಲ್ಲಿ 10 ಬಾರಿ 5+ ವಿಕೆಟ್ ಸಾಧನೆ ಮಾಡಿದ್ದು, ಈ ಪೈಕಿ ಎರಡು ಬಾರಿ 5+ ವಿಕೆಟ್ ಸಾಧನೆ ಈ ವರ್ಷವೇ ಮೂಡಿ ಬಂದಿದೆ.

8 ಟೆಸ್ಟ್, 7 ಸಲ ಐದಕ್ಕೂ ಅಧಿಕ ವಿಕೆಟ್..! ಲಂಕಾದಲ್ಲಿ ಮತ್ತೊಬ್ಬ ಸೂರ್ಯನ ಉದಯ..!

ಇನ್ನು ಕಳೆದ ವರ್ಷದ ಮಾರ್ಚ್‌ನಿಂದಲೂ ನಂ.1 ಸ್ಥಾನದಲ್ಲಿದ್ದ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ಬುಮ್ರಾ ಇದೀಗ ನಂ.1 ಸ್ಥಾನಕ್ಕೇರಿದ್ದಾರೆ. ಇನ್ನೊಂದೆಡೆ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಕೇವಲ ಮೂರು ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಎರಡು ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನೊಂದೆಡೆ ದಕ್ಷಿಣ ಆಫ್ರಿಕಾದ ಮಾರಕ ವೇಗಿ ಕಗಿಸೋ ರಬಾಡ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಜಸ್ಪ್ರೀತ್ ಬುಮ್ರಾ, ಈ ಹಿಂದೆ ಬೇರೆ ಬೇರೆ ಸಂದರ್ಭಗಳಲ್ಲಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ನಂ.1 ಬೌಲರ್ ಎನಿಸಿಕೊಂಡಿದ್ದರು. ಆದರೆ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಲು ಅವರಿಗೆ ಆಗಿರಲಿಲ್ಲ. ಸದ್ಯ ಜಸ್ಪ್ರೀತ್ ಬುಮ್ರಾ ಬಳಿ 881 ರೇಟಿಂಗ್ ಅಂಕಗಳಿವೆ.